ವಿಮೋಚನಕಾಂಡ 40:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಮೋಶೆಯು ಗುಡಾರಕ್ಕೂ ಯಜ್ಞವೇದಿಗೂ ಸುತ್ತಲು ಅಂಗಳದ ಆವರಣವನ್ನು ತೆರೆದು ಅಂಗಳದ ಬಾಗಿಲಿಗೆ ಪರದೆಯನ್ನು ಹಾಕಿದನು. ಈ ಪ್ರಕಾರ ಮೋಶೆ ಆ ಕೆಲಸವನ್ನೆಲ್ಲಾ ಮುಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಗುಡಾರ ಹಾಗು ಬಲಿಪೀಠದ ಸುತ್ತಲು ಆವರಣವನ್ನು ಎತ್ತಿ ನಿಲ್ಲಿಸಿ ಅಂಗಳದ ಬಾಗಿಲಿಗೆ ಪರದೆಯನ್ನು ಹಾಕಿದನು. ಹೀಗೆ ಮೋಶೆ ಆ ಕೆಲಸವನ್ನೆಲ್ಲಾ ಮುಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಗುಡಾರಕ್ಕೂ ಯಜ್ಞವೇದಿಗೂ ಸುತ್ತಲು ಅಂಗಳದ ಆವರಣವನ್ನು ಎತ್ತಿ ನಿಲ್ಲಿಸಿ ಅಂಗಳದ ಬಾಗಲಿಗೆ ಪರದೆಯನ್ನು ಹಾಕಿದನು. ಹೀಗೆ ಮೋಶೆ ಆ ಕೆಲಸವನ್ನೆಲ್ಲಾ ಮುಗಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ತರುವಾಯ ಮೋಶೆಯು ಪವಿತ್ರಗುಡಾರದ ಅಂಗಳದ ಸುತ್ತಲೂ ಪರದೆಗಳನ್ನು ನಿಲ್ಲಿಸಿದನು. ಮೋಶೆಯು ವೇದಿಕೆಯನ್ನು ಅಂಗಳದಲ್ಲಿರಿಸಿದನು. ಬಳಿಕ ಅವನು ಅಂಗಳದ ಬಾಗಿಲಿಗೆ ಪರದೆಯನ್ನು ಹಾಕಿಸಿದನು. ಹೀಗೆ ಮೋಶೆ ಯೆಹೋವನು ತನಗೆ ಕೊಟ್ಟ ಎಲ್ಲಾ ಕೆಲಸವನ್ನು ಮಾಡಿ ಮುಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಮೋಶೆಯು ಗುಡಾರಕ್ಕೂ, ಬಲಿಪೀಠಕ್ಕೂ ಸುತ್ತಲೂ ಅಂಗಳವನ್ನು ನಿಲ್ಲಿಸಿ, ಅಂಗಳದ ಬಾಗಿಲಿನ ಪರದೆಯನ್ನು ತೂಗುಹಾಕಿದನು. ಈ ಪ್ರಕಾರ ಮೋಶೆಯು ಆ ಕೆಲಸವನ್ನು ತೀರಿಸಿದನು. ಅಧ್ಯಾಯವನ್ನು ನೋಡಿ |
ದೇವರು ತನ್ನ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ಇಟ್ಟಿದ್ದಾನೆ. ಆ ಮೇಲೆ ಮಹತ್ಕಾರ್ಯ ಮಾಡುವ ಶಕ್ತಿಯನ್ನು, ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ, ಪರಸಹಾಯ ಮಾಡುವ ಗುಣವನ್ನೂ, ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನು ಮತ್ತು ವಿವಿಧ ಭಾಷೆಗಳನ್ನಾಡುವ ವರವನ್ನೂ ಅವರವರಿಗೆ ಬೇರೆ ಬೇರೆಯಾಗಿ ಕೊಟ್ಟಿದ್ದಾನೆ.