Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 40:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ನೀನು ಅಭಿಷೇಕತೈಲವನ್ನು ತೆಗೆದುಕೊಂಡು ಗುಡಾರವನ್ನೂ ಅದರಲ್ಲಿರುವುದೆಲ್ಲವನ್ನೂ ಅದರ ಎಲ್ಲಾ ಉಪಕರಣಗಳನ್ನೂ ಅಭಿಷೇಕಿಸಿ ನನಗಾಗಿ ಪ್ರತಿಷ್ಠಿಸಬೇಕು; ಅಂದಿನಿಂದ ಅದು ಪರಿಶುದ್ಧವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಬಳಿಕ ಅಭಿಷೇಕ ತೈಲವನ್ನು ತೆಗೆದುಕೊಂಡು ಗುಡಾರವನ್ನೂ ಅದರಲ್ಲಿ ಇರುವುದೆಲ್ಲವನ್ನೂ ಅದರ ಎಲ್ಲ ಉಪಕರಣಗಳನ್ನೂ ಅಭಿಷೇಕಿಸಿ ಪ್ರತಿಷ್ಠಾಪಿಸು. ಅಂದಿನಿಂದ ಅದು ಪರಿಶುದ್ಧವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ಅಭಿಷೇಕತೈಲವನ್ನು ತೆಗೆದುಕೊಂಡು ಗುಡಾರವನ್ನೂ ಅದರಲ್ಲಿರುವದೆಲ್ಲವನ್ನೂ ಅದರ ಎಲ್ಲಾ ಉಪಕರಣಗಳನ್ನೂ ಅಭಿಷೇಕಿಸಿ ಪ್ರತಿಷ್ಠಿಸಬೇಕು; ಅಂದಿನಿಂದ ಅದು ಪರಿಶುದ್ಧವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಅಭಿಷೇಕತೈಲವನ್ನು ಉಪಯೋಗಿಸಿ ಪವಿತ್ರಗುಡಾರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಅಭಿಷೇಕಿಸು. ನೀನು ತೈಲವನ್ನು ಈ ವಸ್ತುಗಳ ಮೇಲೆ ಹಾಕುವಾಗ, ಅವುಗಳನ್ನು ಪವಿತ್ರಗೊಳಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ನೀನು ಅಭಿಷೇಕ ತೈಲವನ್ನು ತೆಗೆದುಕೊಂಡು ಗುಡಾರವನ್ನೂ, ಅದರಲ್ಲಿರುವ ಎಲ್ಲವುಗಳನ್ನೂ ಅಭಿಷೇಕಿಸಿ, ಅದರಲ್ಲಿರುವ ಎಲ್ಲಾ ಸಾಮಗ್ರಿಗಳನ್ನೂ ಪರಿಶುದ್ಧ ಮಾಡು. ಆಗ ಅದು ಪರಿಶುದ್ಧವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 40:9
16 ತಿಳಿವುಗಳ ಹೋಲಿಕೆ  

ಅನಂತರ ಮೋಶೆ ಅಭಿಷೇಕತೈಲವನ್ನು ತೆಗೆದುಕೊಂಡು, ದೇವದರ್ಶನದ ಗುಡಾರವನ್ನು ಮತ್ತು ಅದರಲ್ಲಿದ್ದ ಎಲ್ಲವನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು.


ಮೋಶೆ ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿ ಅದನ್ನೂ, ಅದರ ಸಾಮಾನುಗಳನ್ನೂ, ಯಜ್ಞವೇದಿಯನ್ನೂ ಮತ್ತು ಯಜ್ಞವೇದಿಯ ಉಪಕರಣಗಳನ್ನೂ ಯೆಹೋವನಿಗಾಗಿ ಅಭಿಷೇಕಿಸಿ ಪ್ರತಿಷ್ಠಿಸಿದನು.


ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದವರಾಗಿದ್ದೀರಿ ಎಂಬ ಸತ್ಯವನ್ನೂ ತಿಳಿದವರಾಗಿದ್ದೀರಿ.


ಆತನು ನಮ್ಮ ಮೇಲೆ ತನ್ನ ಮುದ್ರೆಯನ್ನೊತ್ತಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಖಾತರಿಯಾಗಿ ಅನುಗ್ರಹಿಸಿದ್ದಾನೆ.


ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲ್ಲಿ ನಮ್ಮನ್ನು ಸಂತೈಸುವವನಾಗಿದ್ದಾನೆ. ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಬಿದ್ದಿರುವವರನ್ನು ಸಂತೈಸುವುದಕ್ಕೆ ಶಕ್ತರಾಗುತ್ತೇವೆ.


ಹೇಗೆಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮ ವರವನ್ನು ಅಳತೆಮಾಡದೆ ಧಾರಾಳವಾಗಿ ಅನುಗ್ರಹಿಸುವುದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.


ಯೇಸು ದೀಕ್ಷಾಸ್ನಾನ ಮಾಡಿಸಿಕೊಂಡ ನೀರಿನಿಂದ ಮೇಲಕ್ಕೆ ಬಂದ ಕೂಡಲೇ ಇಗೋ, ಆತನಿಗಾಗಿ ಪರಲೋಕವು ತೆರೆಯಿತು; ಮತ್ತು ದೇವರ ಆತ್ಮವು ಪಾರಿವಾಳದ ಹಾಗೆ ತನ್ನ ಮೇಲೆ ಇಳಿದು ಬರುವುದನ್ನು ಕಂಡನು.


ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,


ಆ ಅಂಕುರದ ಮೇಲೆ ಜ್ಞಾನ ವಿವೇಕದಾಯಕ ಆತ್ಮ, ಆಲೋಚನಾ ಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳಿವಳಿಕೆಯನ್ನೂ ಮತ್ತು ಯೆಹೋವನ ಭಯವನ್ನೂ ಉಂಟುಮಾಡುವ ಆತ್ಮ, ಅಂತು ಯೆಹೋವನ ಆತ್ಮವೇ ನೆಲೆಗೊಂಡಿರುವುದು.


ನೀನು ಧರ್ಮವನ್ನು ಪ್ರೀತಿಸುತ್ತಿ, ಅಧರ್ಮವನ್ನು ದ್ವೇಷಿಸುತ್ತಿ; ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ, ಉನ್ನತಸ್ಥಾನಕ್ಕೆ ಏರಿಸಿ, ಪರಮಾನಂದತೈಲದಿಂದ ಅಭಿಷೇಕಿಸಿದ್ದಾನೆ.


ತಾಮ್ರದ ಯಜ್ಞವೇದಿಯನ್ನು, ಅದರ ತಾಮ್ರದ ಜಾಲರಿಯನ್ನು, ಅದರ ಕೋಲುಗಳನ್ನು, ಉಪಕರಣಗಳನ್ನು,


ಅದಲ್ಲದೆ ಅವನು ದೇವರ ಪವಿತ್ರ ಸೇವೆಗೆ ನೇಮಕವಾದ ಪಟ್ಟಾಭಿಷೇಕತೈಲವನ್ನೂ ಪರಿಮಳದ್ರವ್ಯಗಳಿಂದ ಮಾಡಿದ ಸ್ವಚ್ಛವಾದ ಧೂಪದ್ರವ್ಯವನ್ನೂ ಸುಗಂಧದ್ರವ್ಯಮಾಡುವವರ ವಿಧಾನದ ಪ್ರಕಾರವೇ ತಯಾರಿಸಿದನು.


ಇದಲ್ಲದೆ ಗುಡಾರದ ಮೇಲೆಯೂ ದೇವರ ಸೇವೆಗೆ ಬೇಕಾಗಿರುವ ಎಲ್ಲಾ ಪಾತ್ರೆಗಳ ಮೇಲೆಯೂ ಅದೇ ರೀತಿಯಾಗಿ ರಕ್ತವನ್ನು ಪ್ರೋಕ್ಷಿಸಿದನು.


ಅಂಗಳದ ಸುತ್ತಲಿನ ಆವರಣವನ್ನು ತೆರೆದು, ಅಂಗಳದ ಬಾಗಿಲಿಗೆ ಪರದೆಯನ್ನು ತೂಗಿಬಿಡಬೇಕು.


“‘ನೀನು ರೆಕ್ಕೆತೆರೆದು ನೆರಳು ನೀಡುವ ಕೆರೂಬಿಯಾಗಿದ್ದೆ; ನಾನು ನಿನ್ನನ್ನು ದೇವರ ಪರಿಶುದ್ಧ ಪರ್ವತದಲ್ಲಿ ನೆಲೆಗೊಳಿಸಿದೆನು; ನೀನು ಅಮೂಲ್ಯ ರತ್ನಗಳ ಕೆಂಡದ ಮಧ್ಯದಲ್ಲಿ ವಿಹಾರ ಮಾಡುತ್ತಿದ್ದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು