Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 5:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇದಲ್ಲದೆ ಬಿಟ್ಟೀ ಕೆಲಸ ಮಾಡಿಸುವವರು, “ನಿಮಗೆ ಹುಲ್ಲು ಇದ್ದಾಗ ಹೇಗೋ ಹಾಗೆ ಪ್ರತಿದಿನದ ಕೆಲಸವನ್ನು ಅದೇ ದಿನದಲ್ಲೇ ಮುಗಿಸಬೇಕು” ಎಂದು ಹೇಳಿ ಅವರನ್ನು ಅವಸರ ಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಮೇಲ್ವಿಚಾರಕರು, “ನಿಮಗೆ ಹುಲ್ಲಿದ್ದ ಕಾಲದಲ್ಲಿ ಹೇಗೋ ಹಾಗೆ ಪ್ರತಿದಿನದ ಕೆಲಸವನ್ನು ಆಯಾ ದಿನದಲ್ಲಿ ಮುಗಿಸಬೇಕು" ಎಂದು ಹೇಳಿ ಅವಸರಪಡಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಬಿಟ್ಟೀಮಾಡಿಸುವವರು - ನಿಮಗೆ ಹುಲ್ಲಿದ್ದ ಕಾಲದಲ್ಲಿ ಹೇಗೋ ಹಾಗೆ ಪ್ರತಿದಿನದ ಕೆಲಸವನ್ನು ಆಯಾ ದಿನದಲ್ಲೇ ಮುಗಿಸಬೇಕೆಂದು ಹೇಳಿ ಅವರನ್ನು ತ್ವರೆಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳು, ಜನರಿಂದ ಕಷ್ಟಕರವಾದ ಕೆಲಸಗಳನ್ನು ಬಲವಂತದಿಂದ ಮಾಡಿಸುತ್ತಲೇ ಇದ್ದರು. ಮೊದಲು ಅವರಿಗೆ ಹುಲ್ಲನ್ನು ಕೊಟ್ಟಿದ್ದಾಗ ಮಾಡುತ್ತಿದ್ದಷ್ಟೇ ಇಟ್ಟಿಗೆಗಳನ್ನು ಈಗಲೂ ಬಲವಂತದಿಂದ ಮಾಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಇದಲ್ಲದೆ ಬಿಟ್ಟಿಕೆಲಸ ಮಾಡಿಸುವವರು, “ಹುಲ್ಲು ಇದ್ದಾಗ ನಿಮ್ಮ ಕೆಲಸಗಳನ್ನು ಮಾಡಿದಂತೆಯೇ, ಪ್ರತಿಯೊಂದು ದಿನದಲ್ಲಿ, ಆ ದಿನದ ಕೆಲಸವನ್ನು ತೀರಿಸಿಬಿಡಬೇಕು,” ಎಂದು ಹೇಳಿ ಅವರನ್ನು ತ್ವರೆಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 5:13
7 ತಿಳಿವುಗಳ ಹೋಲಿಕೆ  

ಅವರನ್ನು ಬಿಟ್ಟೀ ಕೆಲಸಗಳಿಂದ ಪೀಡಿಸುವುದಕ್ಕಾಗಿ, ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ಇರಿಸಿದನು. ಅವರು ಫರೋಹನನಿಗೆ ಪಿತೋಮ್ ಮತ್ತು ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದನು.


ಆ ದಿನದಲ್ಲಿ ಫರೋಹನು ಬಿಟ್ಟೀಮಾಡಿಸುವವರನ್ನು ಮತ್ತು ಅವರ ಅಧಿಕಾರಿಗಳನ್ನು ಕರೆಯಿಸಿ,


ಹೀಗಿರಲಾಗಿ ಜನರು ಹುಲ್ಲನ್ನು ಕೂಡಿಸಿಕೊಳ್ಳುವುದಕ್ಕಾಗಿ ಐಗುಪ್ತ ದೇಶದಲ್ಲೆಲ್ಲಾ ಚದರಿಹೋಗಿ ಹುಡುಕತೊಡಗಿದರು.


ಫರೋಹನ ಅಧಿಕಾರಿಗಳು ತಾವೇ ನೇಮಿಸಿದ ಇಸ್ರಾಯೇಲರ ಮೇಲ್ವಿಚಾರಕರಿಗೆ, “ನೀವು ಮೊದಲು ಇಟ್ಟಿಗೆಗಳ ಲೆಕ್ಕ ಒಪ್ಪಿಸುತ್ತಿದ್ದಂತೆ ನಿನ್ನೆ ಹಾಗೂ ಈ ಹೊತ್ತು ಯಾಕೆ ಒಪ್ಪಿಸಲಿಲ್ಲ” ಎಂದು ಹೇಳಿ ಅವರನ್ನು ಹೊಡೆದರು.


ನಿಮಗೆ ಹುಲ್ಲು ಎಲ್ಲಿ ದೊರಕುವುದೋ ಅಲ್ಲಿಗೆ ನೀವೇ ಹೋಗಿ ತೆಗೆದುಕೊಳ್ಳಿರಿ. ಆದರೂ ನೀವು ಮಾಡಬೇಕಾದ ಕೆಲಸದಲ್ಲಿ ಸ್ವಲ್ಪವೂ ಕಡಿಮೆಯಾಗಬಾರದು” ಎಂದು ಹೇಳಿದರು.


ಇದಲ್ಲದೆ ಶಾಸ್ತ್ರದಲ್ಲಿ ಬರೆದಿರುವಂತೆ ಅವರು ಪರ್ಣಶಾಲೆಗಳ ಜಾತ್ರೆಯನ್ನು ಆಚರಿಸಿ, ಪ್ರತಿದಿನ ನಿಗದಿಪಡಿಸಿದ ವಿಧಿಗನುಸಾರವಾದ ಸರ್ವಾಂಗಹೋಮಗಳನ್ನು ಅರ್ಪಿಸಿದರು.


ಅದು ಊರುಗದ್ದಲವನ್ನು ಧಿಕ್ಕರಿಸಿ, ಹೊಡೆಯುವವನ ಕೂಗಾಟವನ್ನು ಕೇಳಿದ್ದೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು