Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 5:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಹೀಗಿರಲು ಇಸ್ರಾಯೇಲರ ಮೇಲ್ವಿಚಾರಕರು ಫರೋಹನ ಬಳಿಗೆ ಹೋಗಿ, “ಏಕೆ ನಿನ್ನ ದಾಸರಿಗೆ ಹೀಗೆ ಮಾಡುತ್ತಿರುವಿರಿ ಸ್ವಾಮೀ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಈ ಇಸ್ರಯೇಲ್ ಮೇಸ್ತ್ರಿಗಳು ಫರೋಹನ ಬಳಿಗೆ ಬಂದು, “ಒಡೆಯಾ, ತಮ್ಮ ದಾಸರಾದ ನಮಗೆ ಹೀಗೆ ಮಾಡುವುದು ಸರಿಯೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಹೀಗಿರಲು ಇಸ್ರಾಯೇಲ್ ಮೇಸ್ತ್ರಿಗಳು ಫರೋಹನ ಸಮ್ಮುಖಕ್ಕೆ ಬಂದು - ತಾವು ತಮ್ಮ ದಾಸರಿಗೆ ಹೀಗೆ ಮಾಡುವದು ಯಾಕೆ ಸ್ವಾಮೀ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆಗ ಇಬ್ರಿಯ ಮೇಸ್ತ್ರಿಗಳು ಫರೋಹನ ಬಳಿಗೆ ಹೋಗಿ, “ನಿನ್ನ ಸೇವಕರಾದ ನಮಗೆ ನೀನು ಯಾಕೆ ಈ ರೀತಿ ಮಾಡುತ್ತಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇಸ್ರಾಯೇಲರ ಮೇಲ್ವಿಚಾರಕರು ಫರೋಹನ ಬಳಿಗೆ ಹೋಗಿ, “ಏಕೆ ನಿಮ್ಮ ದಾಸರಿಗೆ ಹೀಗೆ ಮಾಡುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 5:15
4 ತಿಳಿವುಗಳ ಹೋಲಿಕೆ  

ಫರೋಹನ ಅಧಿಕಾರಿಗಳು ತಾವೇ ನೇಮಿಸಿದ ಇಸ್ರಾಯೇಲರ ಮೇಲ್ವಿಚಾರಕರಿಗೆ, “ನೀವು ಮೊದಲು ಇಟ್ಟಿಗೆಗಳ ಲೆಕ್ಕ ಒಪ್ಪಿಸುತ್ತಿದ್ದಂತೆ ನಿನ್ನೆ ಹಾಗೂ ಈ ಹೊತ್ತು ಯಾಕೆ ಒಪ್ಪಿಸಲಿಲ್ಲ” ಎಂದು ಹೇಳಿ ಅವರನ್ನು ಹೊಡೆದರು.


ನಿನ್ನ ದಾಸರಿಗೆ, ನೇಮಿಸಿದ ಅಧಿಕಾರಿಗಳು ಹುಲ್ಲನ್ನು ಕೊಡದೆ ‘ಇಟ್ಟಿಗೆಗಳನ್ನು ಮಾಡಿರಿ!’ ಎಂದು ಹೇಳುತ್ತಾ ನಮ್ಮನ್ನು ಹೊಡೆಯುತ್ತಿದ್ದಾರೆ. ಹೀಗೆ ನಿನ್ನ ಜನರು ಮಾಡುತ್ತಿರುವುದು ಪಾಪಕಾರ್ಯವಾಗಿದೆ” ಎಂದು ಗೋಳಾಡಿದರು.


ಅವರನ್ನು ಬಿಟ್ಟೀ ಕೆಲಸಗಳಿಂದ ಪೀಡಿಸುವುದಕ್ಕಾಗಿ, ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ಇರಿಸಿದನು. ಅವರು ಫರೋಹನನಿಗೆ ಪಿತೋಮ್ ಮತ್ತು ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದನು.


ಸೆರೆಯಾದವರು ಬಾಧಿಸುವ ಅಧಿಕಾರಿಯ ಧ್ವನಿಯನ್ನೇ ಕೇಳದೆ, ಗುಂಪುಗುಂಪಾಗಿ ವಿಶ್ರಮಿಸಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು