ವಿಮೋಚನಕಾಂಡ 5:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅದಕ್ಕೆ ಫರೋಹನು, “ಯೆಹೋವನೆಂಬುವವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಾಯೇಲರನ್ನು ಹೋಗಗೊಡಿಸುವುದೇತಕ್ಕೆ? ಯೆಹೋವನು ಯಾರೋ ನನಗೆ ಗೊತ್ತಿಲ್ಲ. ಇದು ಮಾತ್ರವಲ್ಲದೆ, ಇಸ್ರಾಯೇಲರನ್ನು ಹೋಗಲು ನಾನು ಬಿಡುವುದೇ ಇಲ್ಲ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅದಕ್ಕೆ ಫರೋಹನು, “ 'ಸರ್ವೇಶ್ವರ' ಎಂಬುವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಯೇಲರನ್ನು ಹೋಗಬಿಡಬೇಕೊ? ಆ ಸರ್ವೇಶ್ವರನು ಯಾರೋ ನನಗೆ ಗೊತ್ತಿಲ್ಲ. ಇಸ್ರಯೇಲರನ್ನು ನಾನು ಹೋಗಬಿಡುವುದಿಲ್ಲ,” ಎಂದು ಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅದಕ್ಕೆ ಫರೋಹನು - ಯೆಹೋವನೆಂಬವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಾಯೇಲ್ಯರನ್ನು ಹೋಗಗೊಡಿಸುವದೇಕೆ? ಯೆಹೋವನು ಯಾರೋ ನನಗೆ ಗೊತ್ತಿಲ್ಲ. ಇದು ಮಾತ್ರವಲ್ಲದೆ ಇಸ್ರಾಯೇಲ್ಯರು ಹೊರಟುಹೋಗುವದಕ್ಕೆ ನಾನು ಒಪ್ಪುವದೇ ಇಲ್ಲ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆದರೆ ಫರೋಹನು, “ಯೆಹೋವನು ಯಾರು? ನಾನು ಆತನಿಗೆ ಯಾಕೆ ವಿಧೇಯನಾಗಬೇಕು. ಇಸ್ರೇಲರನ್ನು ನಾನು ಯಾಕೆ ಹೋಗಗೊಡಿಸಬೇಕು. ನೀವು ಯೆಹೋವನೆಂದು ಕರೆಯುವ ಆತನನ್ನು ನಾನು ಅರಿಯೆನು, ಆದ್ದರಿಂದ ಇಸ್ರೇಲರನ್ನು ಹೋಗಗೊಡಿಸುವುದಿಲ್ಲ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ಫರೋಹನು, “ನಾನು ಆತನ ಮಾತಿಗೆ ವಿಧೇಯನಾಗಿ ಇಸ್ರಾಯೇಲರನ್ನು ಕಳುಹಿಸಿಬಿಡುವಂತೆ ಆ ಯೆಹೋವ ಯಾರು? ಆ ಯೆಹೋವ ದೇವರನ್ನು ನಾನರಿಯೆನು. ಇಸ್ರಾಯೇಲರನ್ನೂ ಕಳುಹಿಸುವುದಿಲ್ಲ,” ಎಂದನು. ಅಧ್ಯಾಯವನ್ನು ನೋಡಿ |