ವಿಮೋಚನಕಾಂಡ 6:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆನಂತರ ಯೆಹೋವನು ಮೋಶೆಗೆ, “ನಾನು ಫರೋಹನಿಗೆ ಮಾಡುವುದನ್ನು ನೀನು ಈಗ ನೋಡುವೆ. ಅವನು ನನ್ನ ಬಲವಾದ ಹಸ್ತವನ್ನು ನೋಡಿ ಅವರನ್ನು ಹೋಗಗೊಡಿಸುವನು. ನನ್ನ ಭುಜಬಲದಿಂದ ಪೀಡಿತನಾಗಿ ಅವರನ್ನು ತನ್ನ ದೇಶದಿಂದ ಹೊರಡಿಸುವನು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಅದಕ್ಕೆ ಸರ್ವೇಶ್ವರ ಸ್ವಾಮಿ ಮೋಶೆಗೆ, “ನಾನು ಫರೋಹನಿಗೆ ಮಾಡಲು ಹೋಗುವುದನ್ನು ನೀನು ಇಷ್ಟರಲ್ಲೇ ನೋಡುವೆ. ಅವನು ನನ್ನ ಭುಜಬಲವನ್ನು ಕಂಡು ಅವರನ್ನು ಹೋಗಲು ಬಿಡುವನು. ನನ್ನ ಭುಜಬಲದಿಂದ ಪೀಡಿತನಾಗಿ ಅವರನ್ನು ತನ್ನ ನಾಡಿನಿಂದ ಹೊರಡಿಸುವನು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅದಕ್ಕೆ ಯೆಹೋವನು - ನಾನು ಫರೋಹನಿಗೆ ಮಾಡುವದನ್ನು ನೀನು ಈಗ ನೋಡುವಿ. ಅವನು ನನ್ನ ಭುಜಬಲದಿಂದ ಅವರನ್ನು ಹೋಗಗೊಡಿಸುವನು; ನನ್ನ ಭುಜಬಲದಿಂದ ಪೀಡಿತನಾಗಿ ಅವರನ್ನು ತನ್ನ ದೇಶದಿಂದ ಹೊರಡಿಸುವನು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಆಗ ಯೆಹೋವನು ಮೋಶೆಗೆ, “ನಾನು ಫರೋಹನಿಗೆ ಮಾಡುವುದನ್ನು ಈಗ ನೀನು ನೋಡುವೆ. ನಾನು ನನ್ನ ಮಹಾಶಕ್ತಿಯನ್ನು ಅವನಿಗೆ ವಿರುದ್ಧವಾಗಿ ಉಪಯೋಗಿಸುವುದರಿಂದ ಅವನು ನನ್ನ ಜನರನ್ನು ಹೋಗಗೊಡಿಸುವನು; ಬಲವಂತದಿಂದ ಅವರನ್ನು ಹೊರಡಿಸುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆಗ ಯೆಹೋವ ದೇವರು ಮೋಶೆಗೆ, “ನಾನು ಫರೋಹನಿಗೆ ಮಾಡುವುದನ್ನು ಈಗ ನೀನು ನೋಡುವೆ. ನನ್ನ ಬಲವಾದ ಹಸ್ತವನ್ನು ಕಂಡು ಅವನು ಅವರನ್ನು ಹೋಗಗೊಡಿಸುವನು. ನನ್ನ ಬಲವಾದ ಹಸ್ತದ ಕಾರಣದಿಂದ ಅವನು ಅವರನ್ನು ತನ್ನ ದೇಶದೊಳಗಿಂದ ಹೊರಡಿಸುವನು,” ಎಂದರು. ಅಧ್ಯಾಯವನ್ನು ನೋಡಿ |