Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 6:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅದಕ್ಕೆ ಮೋಶೆ ಯೆಹೋವನ ಸನ್ನಿಧಿಯಲ್ಲಿ, “ಇಗೋ, ಇಸ್ರಾಯೇಲರೇ ನನ್ನ ಮಾತುಗಳನ್ನು ಕೇಳುತ್ತಿಲ್ಲ; ಹೀಗಿರುವಾಗ ತೊದಲು ಮಾತನಾಡುವ ನನ್ನ ಮಾತುಗಳಿಗೆ ಫರೋಹನು ಕಿವಿಗೊಟ್ಟಾನೇ?” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅದಕ್ಕೆ ಮೋಶೆ ಸರ್ವೇಶ್ವರನ ಸನ್ನಿಧಿಯಲ್ಲಿ, “ಆಲಿಸಬೇಕು, ಇಸ್ರಯೇಲರೇ ನನ್ನ ಮಾತನ್ನು ಕೇಳಲಿಲ್ಲ; ಇನ್ನು ಫರೋಹನು ಕಿವಿಗೊಟ್ಟಾನೆ? ನನಗಾದರೂ ಚುರುಕಾದ ನಾಲಿಗೆಯಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅದಕ್ಕೆ ಮೋಶೆ ಯೆಹೋವನ ಸನ್ನಿಧಿಯಲ್ಲಿ - ಇಗೋ, ಇಸ್ರಾಯೇಲ್ಯರೇ ನನ್ನ ಮಾತನ್ನು ಕೇಳಲಿಲ್ಲ. ಫರೋಹನು ಕಿವಿಗೊಟ್ಟಾನೇ? ನಾನು ಮಾತಾಡುವದರಲ್ಲಿ ಜಾಣನಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅದಕ್ಕೆ ಮೋಶೆ, “ಇಸ್ರೇಲರು ನನ್ನ ಮಾತನ್ನು ಕೇಳುವುದಿಲ್ಲ! ಆದ್ದರಿಂದ ಫರೋಹನು ನನ್ನ ಮಾತನ್ನು ಖಂಡಿತವಾಗಿ ಕೇಳುವುದಿಲ್ಲ. ನಾನು ಮಾತಾಡುವುದರಲ್ಲಿ ಜಾಣನಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದರೆ ಮೋಶೆಯು ಯೆಹೋವ ದೇವರ ಸನ್ನಿಧಿಯಲ್ಲಿ, “ಇಗೋ, ಇಸ್ರಾಯೇಲರೇ ನನ್ನ ಮಾತನ್ನು ಕೇಳದಿರುವಲ್ಲಿ, ತೊದಲು ಮಾತನಾಡುವ ನನ್ನ ಮಾತನ್ನು ಫರೋಹನು ಕೇಳುವುದು ಹೇಗೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 6:12
16 ತಿಳಿವುಗಳ ಹೋಲಿಕೆ  

ಆಗ ಮೋಶೆಯು ಯೆಹೋವನಿಗೆ, “ಕರ್ತನೇ, ನಾನು ಮೊದಲಿನಿಂದಲೂ, ನೀನು ನಿನ್ನ ದಾಸನ ಸಂಗಡ ಮಾತನಾಡಿದ ಮೇಲೆಯೂ ನಾನು ವಾಕ್ಚಾತುರ್ಯವಿಲ್ಲದವನು. ನಾನು ತೊದಲುವವನಾಗಿದ್ದು ನನ್ನ ನಾಲಿಗೆಯೂ ಮಂದವಾಗಿವೆ” ಎಂದು ಹೇಳಿದನು.


ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ನಾನು ಮಾತು ಬಲ್ಲವನಲ್ಲ, ಬಾಲಕನು” ಎಂದು ಅರಿಕೆ ಮಾಡಿದೆನು.


ಆದರೆ ಮೋಶೆಯು ಯೆಹೋವನಿಗೆ, “ಇಗೋ, ಸ್ವಾಮಿ ನಾನು ಮಾತನಾಡುವುದರಲ್ಲಿ ಜಾಣನಲ್ಲ, ಫರೋಹನು ನನ್ನ ಮಾತನ್ನು ಹೇಗೆ ಕೇಳಾನು” ಅಂದನು.


ನಾನು, ಯಾರ ಸಂಗಡ ಮಾತನಾಡಿ ಅವರು ಗಮನಿಸುವಂತೆ ಸಾಕ್ಷಿಕೊಡಲಿ? ಇಗೋ, ಅವರ ಕಿವಿ ಮುಚ್ಚಲ್ಪಟ್ಟಿವೆ. ಅಯ್ಯೋ, ಯೆಹೋವನ ಮಾತು ಅವರಿಗೆ ತಿರಸ್ಕಾರ, ಅದರಲ್ಲಿ ಅವರಿಗೆ ಆನಂದವೇ ಇಲ್ಲ.


“ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪೂರ್ವಿಕರು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ.


ನಾನು ಅವರಿಗೆ ವಿರೋಧವಾಗಿ ನಡೆದುಕೊಂಡು ಶತ್ರುದೇಶದಲ್ಲಿ ಸೆರೆಯವರನ್ನಾಗಿ ಮಾಡಬೇಕಾಯಿತೆಂದೂ ಒಪ್ಪಿ, ತಮ್ಮ ಮೊಂಡತನವನ್ನು ಬಿಟ್ಟು ನನ್ನ ಆಜ್ಞೆಗೆ ತಲೆ ಬಾಗಿ ತಮ್ಮ ಪಾಪದಿಂದುಂಟಾದ ಶಿಕ್ಷೆಯನ್ನು ಸ್ವೀಕರಿಸುವುದಾದರೆ,


ಮೋಶೆ ಈ ಮಾತುಗಳನ್ನು ಅದೇ ಪ್ರಕಾರವಾಗಿ ಇಸ್ರಾಯೇಲರಿಗೆ ಹೇಳಿದಾಗ, ಅವರ ಮನಸ್ಸು ಕುಗ್ಗಿಹೋದದ್ದರಿಂದಲೂ, ಕಠಿಣವಾಗಿ ದಾಸತ್ವದ ಸೇವೆ ಮಾಡಬೇಕಾಗಿ ಬಂದದ್ದರಿಂದಲೂ ಅವರು ಮೋಶೆಯ ಮಾತಿಗೆ ಕಿವಿಗೊಡಲೇ ಇಲ್ಲ.


ಅದಕ್ಕೆ ಮೋಶೆಯು ದೇವರಿಗೆ, “ನಾನು ಇಸ್ರಾಯೇಲರ ಬಳಿಗೆ ಹೋಗಿ, ‘ನಿಮ್ಮ ಪೂರ್ವಿಕರ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ’ ಎಂದು ಹೇಳಿದಾಗ, ನನಗೆ ಒಂದು ವೇಳೆ ಅವರು, ಆತನ ಹೆಸರು ಏನು? ಎಂದು ಕೇಳಿದರೆ ನಾನೇನು ಉತ್ತರಕೊಡಬೇಕು” ಎಂದನು.


ಏಕೆಂದರೆ ಸಕಲ ಜನಾಂಗಗಳವರೂ ಸುನ್ನತಿಹೀನರು, ಎಲ್ಲಾ ಇಸ್ರಾಯೇಲ್ ವಂಶದವರೂ ಹೃದಯ ಸುನ್ನತಿಯಿಲ್ಲದವರು” ಎಂದು ಯೆಹೋವನು ನುಡಿಯುತ್ತಾನೆ.


ಆಗ ನಾನು, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು. ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು. ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡೆವಲ್ಲಾ!” ಎಂದು ಕೂಗಿಕೊಳ್ಳಲು,


ನಿಮ್ಮ ದೇವರಾದ ಯೆಹೋವನು ನಿಮ್ಮ ಮತ್ತು ನಿಮ್ಮ ಸಂತತಿಯವರ ಹೃದಯಕ್ಕೆ ಸುನ್ನತಿಮಾಡುವನು. ಆಗ ನೀವು ಆತನನ್ನು ಸಂಪೂರ್ಣವಾದ ಹೃದಯದಿಂದಲೂ ಮತ್ತು ಸಂಪೂರ್ಣವಾದ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಕೊಳ್ಳುವಿರಿ.


ಆಗ ಮೋಶೆಯು ದೇವರಿಗೆ, “ಫರೋಹನ ಬಳಿಗೆ ಹೋಗುವುದಕ್ಕೂ ಮತ್ತು ಇಸ್ರಾಯೇಲರನ್ನು ಐಗುಪ್ತದೇಶದಿಂದ ಕರೆದುಕೊಂಡು ಬರುವುದಕ್ಕೂ ನಾನು ಎಷ್ಟರವನು?” ಎಂದು ಹೇಳಿದನು.


ಅದಕ್ಕೆ ಮೋಶೆಯು ಉತ್ತರವಾಗಿ, “ಅವರು ನನ್ನನ್ನು ನಂಬದೆ, ನನ್ನ ಮಾತಿಗೆ ಕಿವಿಗೊಡದೆ, ಯೆಹೋವನು ನಿನಗೆ ಕಾಣಿಸಿಕೊಂಡೇ ಇಲ್ಲ ಎಂದು ಹೇಳಬಹುದು?” ಎಂದನು.


ಯೆಹೋವನು ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ, ಇಸ್ರಾಯೇಲರನ್ನು ಐಗುಪ್ತದೇಶದೊಳಗಿಂದ ಬರಮಾಡಬೇಕೆಂದು ಅವರಿಗೆ ಆಜ್ಞಾಪಿಸಿ ಅವರನ್ನು ಇಸ್ರಾಯೇಲರ ಬಳಿಗೂ ಐಗುಪ್ತದ ಅರಸನಾದ ಫರೋಹನ ಬಳಿಗೂ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು