ವಿಮೋಚನಕಾಂಡ 6:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯೆಹೋವನು ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ, ಇಸ್ರಾಯೇಲರನ್ನು ಐಗುಪ್ತದೇಶದೊಳಗಿಂದ ಬರಮಾಡಬೇಕೆಂದು ಅವರಿಗೆ ಆಜ್ಞಾಪಿಸಿ ಅವರನ್ನು ಇಸ್ರಾಯೇಲರ ಬಳಿಗೂ ಐಗುಪ್ತದ ಅರಸನಾದ ಫರೋಹನ ಬಳಿಗೂ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಸರ್ವೇಶ್ವರ ಮೋಶೆ ಮತ್ತು ಆರೋನರ ಸಂಗಡ ಮಾತಾಡಿ ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಬೇಕೆಂದು ಅವರಿಗೆ ಆಜ್ಞಾಪಿಸಿ ಅವರನ್ನು ಇಸ್ರಯೇಲರ ಬಳಿಗೂ ಅರಸ ಫರೋಹನ ಬಳಿಗೂ ಕಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಯೆಹೋವನು ಮೋಶೆ ಆರೋನರ ಸಂಗಡ ಮಾತಾಡಿ ಇಸ್ರಾಯೇಲ್ಯರನ್ನು ಐಗುಪ್ತದೇಶದೊಳಗಿಂದ ಬರಮಾಡಬೇಕೆಂದು ಅವರಿಗೆ ಆಜ್ಞಾಪಿಸಿ ಅವರನ್ನು ಇಸ್ರಾಯೇಲ್ಯರ ಬಳಿಗೂ ಐಗುಪ್ತದ ಅರಸನಾದ ಫರೋಹನ ಬಳಿಗೂ ಕಳುಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆದರೆ, ಯೆಹೋವನು ಮೋಶೆ ಮತ್ತು ಆರೋನರ ಸಂಗಡ ಮಾತಾಡಿ ಇಸ್ರೇಲರೊಡನೆಯೂ ಫರೋಹನೊಡನೆಯೂ ಮಾತಾಡಬೇಕೆಂದು ಆಜ್ಞಾಪಿಸಿದನು. ಅಲ್ಲದೆ ಈಜಿಪ್ಟಿನಿಂದ ಇಸ್ರೇಲರನ್ನು ಬಿಡಿಸಿಕೊಂಡು ಹೋಗಬೇಕೆಂದು ಯೆಹೋವನು ಅವರಿಗೆ ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಯೆಹೋವ ದೇವರು ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ, ಇಸ್ರಾಯೇಲರನ್ನು ಈಜಿಪ್ಟಿನ ದೇಶದೊಳಗಿಂದ ಹೊರಗೆ ಬರಮಾಡುವಂತೆ ಇಸ್ರಾಯೇಲರ ಬಳಿಗೂ ಅರಸನಾದ ಫರೋಹನ ಬಳಿಗೂ ಹೋಗಬೇಕೆಂದು ಅವರಿಗೆ ಆಜ್ಞಾಪಿಸಿದರು. ಅಧ್ಯಾಯವನ್ನು ನೋಡಿ |