Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 6:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದುದರಿಂದ, ನೀನು ಇಸ್ರಾಯೇಲರಿಗೆ ನನ್ನ ಹೆಸರಿನಲ್ಲಿ ಹೇಳಬೇಕಾದದ್ದೇನೆಂದರೆ, ‘ನಾನೇ ಯೆಹೋವನು ಐಗುಪ್ತರು ನಿಮ್ಮಿಂದ ಮಾಡಿಸುವ ಬಿಟ್ಟೀ ಕೆಲಸಗಳನ್ನು ತಪ್ಪಿಸಿ, ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ, ನನ್ನ ಕೈಚಾಚಿ ಅವರಿಗೆ ಮಹಾ ಶಿಕ್ಷೆಗಳನ್ನು ವಿಧಿಸಿ ನಿಮ್ಮನ್ನು ರಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆದುದರಿಂದ ನೀನು ಇಸ್ರಯೇಲರಿಗೆ ನನ್ನ ಪರವಾಗಿ ಹೀಗೆಂದು ಹೇಳು: ‘ನಾನೇ ಸರ್ವೇಶ್ವರ. ಈಜಿಪ್ಟಿನವರು ನಿಮ್ಮ ಮೇಲೆ ಹೊರಿಸಿರುವ ದುಡಿಮೆಯನ್ನು ನೀಗಿಸುವೆನು, ದಾಸತ್ವವನ್ನು ತೊಲಗಿಸುವೆನು. ಅವರಿಗೆ ಕಠಿಣಶಿಕ್ಷೆಗಳನ್ನು ವಿಧಿಸುವೆನು, ನಿಮ್ಮನ್ನು ಸಂರಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾನು ಮಾಡಿದ ವಾಗ್ದಾನವನ್ನು ನೆನಸಿಕೊಂಡೆನು. ಆದದರಿಂದ ನೀನು ಇಸ್ರಾಯೇಲ್ಯರಿಗೆ [ನನ್ನ ಹೆಸರಿನಲ್ಲಿ] ಹೇಳಬೇಕಾದದ್ದೇನಂದರೆ - ನಾನು ಯೆಹೋವನು; ಐಗುಪ್ತ್ಯರು ನಿಮ್ಮಿಂದ ಮಾಡಿಸುವ ಬಿಟ್ಟೀಕೆಲಸಗಳನ್ನು ನಾನು ತಪ್ಪಿಸಿ ಅವರಲ್ಲಿ ನಿಮಗಿರುವ ದಾಸತ್ವವನ್ನು ತೊಲಗಿಸಿ ನನ್ನ ಕೈ ಚಾಚಿ ಅವರಿಗೆ ಮಹಾಶಿಕ್ಷೆಗಳನ್ನು ವಿಧಿಸಿ ನಿಮ್ಮನ್ನು ರಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದ್ದರಿಂದ ನನ್ನ ಈ ಮಾತುಗಳನ್ನು ಇಸ್ರೇಲರಿಗೆ ತಿಳಿಸು: ‘ನಾನೇ ಯೆಹೋವನು. ಈಜಿಪ್ಟಿನವರು ನಿಮ್ಮಿಂದ ಮಾಡಿಸುವ ಬಿಟ್ಟೀಕೆಲಸದಿಂದ ತಪ್ಪಿಸಿ ಈಜಿಪ್ಟಿನವರ ಗುಲಾಮಗಿರಿಯಿಂದ ಬಿಡಿಸುವೆನು. ನನ್ನ ಮಹಾಶಕ್ತಿಯಿಂದ ಈಜಿಪ್ಟಿನವರನ್ನು ಭಯಂಕರವಾಗಿ ದಂಡಿಸುವೆನು; ಬಳಿಕ ನಿಮ್ಮನ್ನು ರಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ಆದ್ದರಿಂದ ಇಸ್ರಾಯೇಲರಿಗೆ, ‘ನಾನೇ ಯೆಹೋವ ದೇವರು. ನಾನು ನಿಮ್ಮನ್ನು ಈಜಿಪ್ಟಿನ ಬಿಟ್ಟಿಕೆಲಸದಿಂದ ಅವರಿಗೆ ದಾಸತ್ವದಲ್ಲಿರುವುದರಿಂದ, ನಾನು ಚಾಚಿದ ಬಾಹುವಿನಿಂದಲೂ ಬಲವಾದ ನ್ಯಾಯತೀರ್ಪುಗಳಿಂದಲೂ ನಿಮ್ಮನ್ನು ಬಿಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 6:6
46 ತಿಳಿವುಗಳ ಹೋಲಿಕೆ  

ಆತನು ತನ್ನ ಭುಜಬಲವನ್ನೂ, ಶಿಕ್ಷಾಹಸ್ತವನ್ನೂ, ಮಹಾಭೀತಿಗಳನ್ನೂ, ಮಹತ್ಕಾರ್ಯಗಳನ್ನೂ ಮತ್ತು ಸೂಚಕಕಾರ್ಯಗಳನ್ನು ಪ್ರಯೋಗಿಸಿ ನಮ್ಮನ್ನು ಬಿಡಿಸಿದನು.


ನಿನ್ನ ಇಸ್ರಾಯೇಲ್ ಪ್ರಜೆಗೆ ಸಮಾನವಾದ ಜನಾಂಗವು ಭೂಲೋಕದಲ್ಲಿ ಯಾವುದಿರುತ್ತದೆ? ದೇವರಾದ ನೀನೇ ಚಿತ್ತೈಯಿಸಿ, ಅದನ್ನು ವಿಮೋಚಿಸಿ, ಸ್ವಪ್ರಜೆಯಾಗಿ ಮಾಡಿಕೊಂಡಿ. ಭಯಂಕರವಾದ ಮಹತ್ಕಾರ್ಯಗಳಿಂದ ನಿನ್ನ ಹೆಸರನ್ನು ಪ್ರಸಿದ್ಧಿಪಡಿಸಿದಿ. ನೀನು ಐಗುಪ್ತರ ಕೈಯೊಳಗಿಂದ ತಪ್ಪಿಸಿ ರಕ್ಷಿಸಿದ ನಿನ್ನ ಪ್ರಜೆಯ ಎದುರಿನಿಂದ ಅನ್ಯಜನಾಂಗಗಳನ್ನು ಹೊರಡಿಸಿಬಿಟ್ಟಿ.


ಯೆಹೋವನು ನಿಮ್ಮನ್ನು ಪ್ರೀತಿಸಿ, ತಾನು ನಿಮ್ಮ ಪೂರ್ವಿಕರಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಬೇಕೆಂದು ಐಗುಪ್ತ್ಯರ ಅರಸನಾದ ಫರೋಹನ ಕೈಕೆಳಗೆ ದಾಸರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ತನ್ನ ಭುಜಬಲವನ್ನು ಪ್ರಯೋಗಿಸಿ ಆ ದೇಶದೊಳಗಿಂದ ಬರಮಾಡಿದನು.


ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ. ಆಗ ನಾನು ಐಗುಪ್ತದೇಶದವರನ್ನು ಬಾಧಿಸಿ, ಅವರಿಗೆ ಮಹಾಶಿಕ್ಷೆಗಳನ್ನು ವಿಧಿಸಿ, ನನ್ನ ಜನರಾಗಿರುವ ಇಸ್ರಾಯೇಲರ ಸೈನ್ಯವನ್ನೆಲ್ಲಾ ಐಗುಪ್ತದೇಶದಿಂದ ಹೊರತರುವೆನು.


“ಅವರು ನಿನ್ನ ಸೇವಕರೂ, ನೀನು ನಿನ್ನ ಮಹಾಶಕ್ತಿ, ಭುಜಪರಾಕ್ರಮಗಳಿಂದ ವಿಮೋಚಿಸಿದ ನಿನ್ನ ಪ್ರಜೆಗಳೂ ಆಗಿರುತ್ತಾರಲ್ಲಾ.


“ಅವನ ಹೆಗಲನ್ನು ಹೊರೆಗೆ ತಪ್ಪಿಸಿದೆನು; ಅವನ ಕೈಗಳನ್ನು ಪುಟ್ಟಿಯಿಂದ ಬಿಡಿಸಿದೆನು.


ಐಗುಪ್ತದೇಶದಲ್ಲಿ ನೀವೇ ದಾಸರಾಗಿರಲು ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡುಗಡೆಮಾಡಿದನು ಎಂಬುದನ್ನು ಜ್ಞಾಪಕಮಾಡಿಕೊಳ್ಳಿರಿ. ಇದಕ್ಕೋಸ್ಕರವಾಗಿಯೇ ನಾನು ಈ ಆಜ್ಞೆಯನ್ನು ನಿಮಗೆ ಈಗ ಕೊಟ್ಟಿದ್ದೇನೆ.


ನಿನ್ನ ಒಡಂಬಡಿಕೆಯ ನಂಬಿಗಸ್ತಿಕೆಯಲ್ಲಿ ನೀನು ನಿನ್ನ ಪ್ರಜೆಯನ್ನು ಬಿಡುಗಡೆ ಮಾಡಿರುವೆ. ನಿನ್ನ ಶಕ್ತಿಯಿಂದ ಅವರನ್ನು ನೀನು ವಾಸಮಾಡುವ ಪರಿಶುದ್ಧ ನಿವಾಸಕ್ಕೆ ನಡೆಸಿರುವೆ.


ಐಗುಪ್ತ ದೇಶದಲ್ಲಿ ನಿಮಗುಂಟಾದ ದುರವಸ್ಥೆಯಿಂದ ನಿಮ್ಮನ್ನು ಬಿಡಿಸಿ, ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರೂ, ಹಿತ್ತಿಯರೂ, ಅಮೋರಿಯರೂ, ಪೆರಿಜೀಯರೂ, ಹಿವ್ವಿಯರೂ, ಯೆಬೂಸಿಯರೂ, ವಾಸವಾಗಿರುವ ದೇಶಕ್ಕೆ ಬರಮಾಡಬೇಕೆಂದು ನಿರ್ಣಯಿಸಿದ್ದೇನೆ” ಎಂಬುದಾಗಿ ಅವರಿಗೆ ಹೇಳು.


ನಿಮ್ಮನ್ನು ಮಹಾಶಕ್ತಿ, ಭುಜಬಲಪರಾಕ್ರಮ ಇವುಗಳ ಮೂಲಕವಾಗಿ ಐಗುಪ್ತ ದೇಶದಿಂದ ಕರೆದುಕೊಂಡು ಬಂದ ಯೆಹೋವನಾದ ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನಗೊಬ್ಬನಿಗೇ ಕೈಮುಗಿದು ಯಜ್ಞವರ್ಪಿಸಬೇಕು.


ಎಚ್ಚರಿಕೆಯಾಗಿರಿ, ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ನೀವು ಮರೆತು, ಪೂಜಿಸಬೇಡಿರೆಂದು ಆತನು ನಿಷೇಧಿಸಿದ ಯಾವ ವಸ್ತುವಿನ ವಿಗ್ರಹವನ್ನೂ ಮಾಡಿಕೊಳ್ಳಬಾರದು.


ಮನಸ್ಸೆಯು ಎಫ್ರಾಯೀಮನ್ನು, ಎಫ್ರಾಯೀಮ ಮನಸ್ಸೆಯನ್ನು ತಿಂದುಬಿಡುತ್ತದೆ. ಈ ಎರಡೂ ಒಟ್ಟಾಗಿ ಯೆಹೂದಕ್ಕೆ ವಿರುದ್ಧವಾಗಿರುವುದು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇರುವುದು.


ಆತನು ಮೋಶೆಗೆ, “ನಾನು ಯೆಹೋವನು ನಾನು ನಿನಗೆ ಹೇಳುವುದನ್ನೆಲ್ಲಾ ನೀನು ಐಗುಪ್ತ್ಯರ ಅರಸನಾದ ಫರೋಹನನಿಗೆ ತಿಳಿಸು” ಎಂದನು.


ಇದಲ್ಲದೆ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ನಾನು ಕೈ ಎತ್ತಿ ಪ್ರಮಾಣಮಾಡಿದ ದೇಶದಲ್ಲಿ ನಿಮ್ಮನ್ನು ಬರಮಾಡಿ, ಅದನ್ನು ನಿಮಗೆ ಸ್ವತ್ತಾಗಿ ಕೊಡುವೆನೆಂದು ಹೇಳಿದವನು ಯೆಹೋವನೆಂಬ ನಾನೇ’ ಎಂದು ಅವರಿಗೆ ಹೇಳು” ಅಂದನು.


ದೇವರು ಮೋಶೆಯ ಸಂಗಡ ಪುನಃ ಮಾತನಾಡಿ ಇಂತೆಂದನು, “ನಾನೇ ಯೆಹೋವನು,


ಅವರ ಮುಂದೆ ಪೂರ್ವದಿಂದ ಅರಾಮ್ಯರನ್ನು ಮತ್ತು ಅವರ ಹಿಂದೆ ಪಶ್ಚಿಮದಿಂದ ಫಿಲಿಷ್ಟಿಯರನ್ನು ಒಟ್ಟುಗೂಡಿಸುವನು. ಇವರು ಇಸ್ರಾಯೇಲರನ್ನು ಬಾಯಿದೆರೆದು ನುಂಗುವರು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.


ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಉಲ್ಲಾಸಿಸುವುದಿಲ್ಲ. ಅವರಲ್ಲಿನ ಅನಾಥರನ್ನೂ, ವಿಧವೆಯರನ್ನೂ ಕರುಣಿಸುವುದಿಲ್ಲ. ಪ್ರತಿಯೊಬ್ಬನೂ ಭ್ರಷ್ಟನೂ, ದುಷ್ಟನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದುದರಿಂದ ಎಷ್ಟು ದಂಡಿಸಿದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.


“ಇಸ್ರಾಯೇಲ್ ಜನರೇ, ಮತ್ತು ಯೆಹೂದ್ಯ ಮತಾವಲಂಬಿಗಳೇ, ಕೇಳಿರಿ. ನಮ್ಮ ಇಸ್ರಾಯೇಲ್ ಜನರ ದೇವರು ಆರಿಸಿಕೊಂಡ ನಮ್ಮ ಪೂರ್ವಿಕರು ಐಗುಪ್ತದೇಶದಲ್ಲಿ ವಾಸಿಸುತ್ತಿದ್ದಾಗ ಅವರನ್ನು ಪ್ರಬಲರನ್ನಾಗಿ ಮಾಡಿ, ಅಭಿವೃದ್ಧಿಗೆ ತಂದು ತನ್ನ ಭುಜಬಲದಿಂದ ಅವರನ್ನು ಆ ದೇಶದಿಂದ ಬರಮಾಡಿದನು.


ಅವರನ್ನು ಬಿಟ್ಟೀ ಕೆಲಸಗಳಿಂದ ಪೀಡಿಸುವುದಕ್ಕಾಗಿ, ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ಇರಿಸಿದನು. ಅವರು ಫರೋಹನನಿಗೆ ಪಿತೋಮ್ ಮತ್ತು ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದನು.


ಮೋಶೆಯು ದೊಡ್ಡವನಾದ ಮೇಲೆ, ಸ್ವಜನರ ಬಳಿಗೆ ಹೋಗಿ ಅವರ ಬಿಟ್ಟೀಕೆಲಸಗಳನ್ನು ನೋಡುತ್ತಿದ್ದನು. ಆಗ ಒಬ್ಬ ಐಗುಪ್ತ್ಯದವನು ತನ್ನ ಸ್ವಂತ ಜನರಾದ ಸಹೋದರರಲ್ಲಿ ಒಬ್ಬನಾದ ಇಬ್ರಿಯನನ್ನು ಹೊಡೆಯುವುದನ್ನು ಕಂಡನು.


ನಾನೂರಮೂವತ್ತು ವರ್ಷಗಳು ಕಳೆದನಂತರ ಅದೇ ದಿನದಲ್ಲಿಯೇ ಯೆಹೋವನ ಸೈನ್ಯಗಳೆಲ್ಲಾ ಐಗುಪ್ತ ದೇಶವನ್ನು ಬಿಟ್ಟು ಹೊರಟುಹೋದವು.


ಅದೇ ದಿನದಲ್ಲಿ ಯೆಹೋವನು ಇಸ್ರಾಯೇಲರನ್ನು ಅವರವರ ಸೈನ್ಯಗಳ ಪ್ರಕಾರವಾಗಿ ಐಗುಪ್ತ ದೇಶದಿಂದ ಹೊರಗೆ ತಂದನು.


ಮೋಶೆಯು ಇಸ್ರಾಯೇಲರಿಗೆ, “ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದ್ದಾನೆ. ಈ ದಿನದಲ್ಲಿ ನೀವು ಹುಳಿಬೆರೆಸಿದ್ದನ್ನು ತಿನ್ನಬಾರದು.


ಮುಂದೆ ನಿಮ್ಮ ಮಕ್ಕಳು, ‘ಇದರ ಅರ್ಥ ಏನು?’ ಎಂದು ನಿಮ್ಮನ್ನು ವಿಚಾರಿಸುವಾಗ ನೀವು ಅವರಿಗೆ, ‘ನಾವು ದಾಸತ್ವದಲ್ಲಿದ್ದ ಐಗುಪ್ತ ದೇಶದಿಂದ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡಿಸಿದನು.


ಮೋಶೆ ಮತ್ತು ಆರೋನರು ಇಸ್ರಾಯೇಲರಿಗೆ, “ನಿಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದಾತನು ಯೆಹೋವನೇ ಎಂಬುದು ಇಂದು ಸಾಯಂಕಾಲದಲ್ಲಿ ನಿಮಗೆ ಗೊತ್ತಾಗುವುದು.


ದೇವರು ಮೋಶೆಗೂ ತನ್ನ ಜನರಾದ ಇಸ್ರಾಯೇಲರಿಗೂ ಮಹೋಪಕಾರಗಳನ್ನು ಮಾಡಿದ್ದನ್ನೂ, ಯೆಹೋವನು ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಕರತಂದದ್ದನ್ನೂ, ಮಿದ್ಯಾನ್ಯರ ಆಚಾರ್ಯನೂ ಮೋಶೆಯ ಮಾವನೂ ಆಗಿದ್ದ ಇತ್ರೋವನು ಕೇಳಿದನು.


ಬೇರೆ ಯಾವ ದೇವರೂ ಮನಪರಿಶೋಧನೆ, ಮಹತ್ಕಾರ್ಯ, ಉತ್ಪಾತ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಮಹಾಭೀತಿ ಇವುಗಳನ್ನು ಪ್ರಯೋಗಿಸಿ, ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯೊಳಗಿಂದ ತಪ್ಪಿಸುವುದಕ್ಕೆ ಪ್ರಯತ್ನಿಸಿದ್ದಾನೇ? ನಿಮ್ಮ ದೇವರಾದ ಯೆಹೋವನಾದರೋ ಐಗುಪ್ತದೇಶದಲ್ಲಿ ನಿಮಗೋಸ್ಕರ ಇದನ್ನೆಲ್ಲಾ ನಿಮ್ಮ ಕಣ್ಣು ಮುಂದೆ ನಡಿಸಿದ್ದಾನಲ್ಲಾ.


ಐಗುಪ್ತ ದೇಶದಲ್ಲಿ ನೀವು ದಾಸತ್ವದಲ್ಲಿದ್ದುದ್ದನ್ನೂ, ನಿಮ್ಮ ದೇವರಾದ ಯೆಹೋವನು ಭುಜಪರಾಕ್ರಮದಿಂದಲೂ ಮತ್ತು ಶಿಕ್ಷಾಹಸ್ತದಿಂದಲೂ ನಿಮ್ಮನ್ನು ಬಿಡುಗಡೆಮಾಡಿದ್ದನ್ನೂ ಜ್ಞಾಪಕಮಾಡಿಕೊಳ್ಳಿರಿ. ನೀವು ಸಬ್ಬತ್‍ ದಿನವನ್ನು ಆಚರಿಸಬೇಕೆಂದು ನಿಮ್ಮ ದೇವರಾದ ಯೆಹೋವನು ಇದಕ್ಕಾಗಿಯೇ ಆಜ್ಞಾಪಿಸಿದ್ದಾನೆ.


ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆ ಮಾಡಿದ ಯೆಹೋವನನ್ನು ಮರೆಯದೇ ಎಚ್ಚರದಿಂದಿರಿ.


ನಾನೇ ಕೋಪ, ರೋಷ, ಮಹಾಕ್ರೋಧಭರಿತನಾಗಿ ಶಿಕ್ಷಾಹಸ್ತದಿಂದಲೂ ಮತ್ತು ಭುಜಪರಾಕ್ರಮದಿಂದಲೂ ನಿಮ್ಮ ವಿರುದ್ಧವಾಗಿ ಯುದ್ಧಮಾಡುವೆನು.


ಅದು ಈಗಲೂ ಸ್ಥಿರವಾಗಿದೆ; ನೀನು ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿ, ಭುಜಪರಾಕ್ರಮವನ್ನು ತೋರಿಸಿ, ಶಿಕ್ಷಾಹಸ್ತವನ್ನು ಎತ್ತಿ, ಮಹಾ ಭೀತಿಯನ್ನುಂಟುಮಾಡಿ ನಿನ್ನ ಜನರಾದ ಇಸ್ರಾಯೇಲರನ್ನು ಐಗುಪ್ತದೇಶದೊಳಗಿಂದ ಬರಮಾಡಿದಿ.


ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ಬಿಡಿಸುವುದಕ್ಕೂ ಆ ದೇಶದಿಂದ ಅವರನ್ನು ಹಾಲೂ ಮತ್ತು ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.


ನಾನು ಐಗುಪ್ತ್ಯರಿಗೆ ವಿರೋಧವಾಗಿ ಕೈಚಾಚಿ ಅವರ ಮಧ್ಯದಿಂದ ಇಸ್ರಾಯೇಲರನ್ನು ಹೊರತಂದಾಗ ನಾನು ಯೆಹೋವನು ಎಂಬುವುದನ್ನು ಐಗುಪ್ತ್ಯರು ತಿಳಿದುಕೊಳ್ಳುವರು” ಅಂದನು.


ಯೆಹೋವನು ಭುಜಬಲದಿಂದ ನಿಮ್ಮನ್ನು ಐಗುಪ್ತ ದೇಶದಿಂದ ಬಿಡಿಸಿದ ಸಂಗತಿಯನ್ನು ನೀವು ಜ್ಞಾಪಕದಲ್ಲಿಟ್ಟುಕೊಳ್ಳುವುದರ ಗುರುತಾಗಿ ಅದನ್ನು ನಿಮ್ಮ ಕೈಗಳ ಮೇಲೆಯೂ, ಹಣೆಯ ಮೇಲೆ ಜ್ಞಾಪಕಪಟ್ಟಿಯಂತೆಯೂ ಇರಬೇಕು.


ಆಗ ಮೋಶೆ ತನ್ನ ದೇವರಾದ ಯೆಹೋವನನ್ನು ಬೇಡಿಕೊಂಡು, “ಯೆಹೋವನೇ ನೀನು ಮಹಾ ಶಕ್ತಿಯಿಂದಲೂ, ಭುಜಬಲದಿಂದಲೂ ಐಗುಪ್ತ ದೇಶದಿಂದ ಹೊರಗೆ ಕರೆತಂದ ನಿನ್ನ ಪ್ರಜೆಗಳ ಮೇಲೆ ಕೋಪದಿಂದುರಿಯುವುದೇತಕೆ?


ಆಗ ನೀವು ಕಣ್ಣಾರೆ ನೋಡಿದ ಪ್ರಕಾರ ಆತನು ವಿಶೇಷ ಪರಿಶೋಧನೆ, ಮಹತ್ಕಾರ್ಯ, ಉತ್ಪಾತ, ಭುಜಪರಾಕ್ರಮ, ಶಿಕ್ಷೆ ಇವುಗಳನ್ನು ಪ್ರಯೋಗಿಸಿ ನಿಮ್ಮನ್ನು ಬಿಡುಗಡೆಮಾಡಿದನಲ್ಲಾ. ನೀವು ಹೆದರಿಕೊಳ್ಳುವ ಆ ಎಲ್ಲಾ ಜನಾಂಗಗಳಿಗೂ ಆತನು ಹಾಗೆಯೇ ಮಾಡುವನು.


ಇವರು ಮಹಾಶಕ್ತಿಯಿಂದಲೂ ಮತ್ತು ಭುಜಬಲದಿಂದಲೂ ನೀನು ಬಿಡಿಸಿದ ನಿನ್ನ ಸ್ವಕೀಯ ಜನರಲ್ಲವೇ” ಎಂದು ಬಿನ್ನೈಸಿದೆನು.


ನೀವು ನಿಮ್ಮ ದೇವರಾದ ಯೆಹೋವನ ಶಿಕ್ಷಣ ಕ್ರಮವನ್ನೂ, ಮಹಿಮೆಯನ್ನೂ, ಭುಜಬಲವನ್ನೂ ಮತ್ತು ಶಿಕ್ಷಾಹಸ್ತವನ್ನೂ ಅಂದರೆ,


ಅಲ್ಲಿ ನಿನ್ನ ನಾಮಮಹತ್ತು, ಭುಜಬಲ, ಶಿಕ್ಷಾಹಸ್ತ ಇವುಗಳ ವರ್ತಮಾನವು ಪರರಾಜ್ಯಗಳವರಿಗೂ ಗೊತ್ತಾಗುವುದು. ಅವನು ಈ ಆಲಯದ ಮುಂದೆ ನಿಂತು ನಿನ್ನನ್ನು ಪ್ರಾರ್ಥಿಸುವುದಾದರೆ,


ದೇವರೇ, ಜಲರಾಶಿಗಳು ನಿನ್ನನ್ನು ಕಂಡವು; ಕಾಣುತ್ತಲೇ ತಳಮಳಗೊಂಡು ತಳದವರೆಗೂ ಅಲ್ಲಕಲ್ಲೋಲವಾದವು.


ಕಷ್ಟದಲ್ಲಿ ಮೊರೆಯಿಟ್ಟ ನಿನ್ನನ್ನು ವಿಮೋಚಿಸಿದೆನು; ಗುಡುಗುವ ಮೋಡದಲ್ಲಿದ್ದು ನಿನಗೆ ಉತ್ತರವನ್ನು ಕೊಟ್ಟೆನು; ಮೆರೀಬಾ ಪ್ರವಾಹಗಳ ಬಳಿಯಲ್ಲಿ ನಿನ್ನನ್ನು ಪರೀಕ್ಷಿಸಿದೆನು. ಸೆಲಾ.


ಆದರೆ ನನ್ನ ಜನರು ನನ್ನ ಮಾತು ಕೇಳಲಿಲ್ಲ; ಇಸ್ರಾಯೇಲರು ನನಗೆ ಸಮ್ಮತಿಸಲಿಲ್ಲ.


‘ನಾನೇ ಕೈ ನೀಡಿ ನನ್ನ ಮಹಾ ಶಕ್ತಿಯಿಂದ ಲೋಕವನ್ನೂ ಭೂಮಿಯ ಮೇಲಣ ಮಾನವರನ್ನೂ ಪಶುಗಳನ್ನೂ ಸೃಷ್ಟಿಸಿದ್ದೇನೆ; ಈ ನನ್ನ ಸೃಷ್ಟಿಯನ್ನು ನನಗೆ ಸರಿತೋಚಿದವನಿಗೇ ಕೊಡಬಲ್ಲೆನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನಾನು ಶಿಕ್ಷಾಹಸ್ತವನ್ನೆತ್ತಿ, ಭುಜಪರಾಕ್ರಮವನ್ನು ತೋರಿಸಿ, ರೋಷಾಗ್ನಿಯನ್ನು ಸುರಿಸುತ್ತಾ ನಿಮ್ಮ ಮೇಲೆ ದೊರೆತನ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು