ವಿಮೋಚನಕಾಂಡ 7:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ‘ಇಬ್ರಿಯರ ದೇವರಾದ ಯೆಹೋವನು ನನ್ನನ್ನು ನಿನ್ನ ಬಳಿಗೆ ಕಳುಹಿಸಿ, ಅರಣ್ಯದಲ್ಲಿ ತನ್ನನ್ನು ಆರಾಧಿಸುವಂತೆ ತನ್ನ ಜನರಿಗೆ ಅಪ್ಪಣೆಕೊಡಬೇಕೆಂದು ನಿನಗೆ ಆಜ್ಞಾಪಿಸಿದ್ದಾನಷ್ಟೇ. ಈ ವರೆಗೂ ನೀನು ಅದನ್ನು ಲಕ್ಷ್ಯಕ್ಕೆ ತರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅವನಿಗೆ “ಹಿಬ್ರಿಯರ ದೇವರಾದ ಸರ್ವೇಶ್ವರ ನನ್ನನ್ನು ನಿನ್ನ ಬಳಿಗೆ ಕಳಿಸಿದ್ದಾರೆ. ಅವರು ನಿನಗೆ ಹೇಳುವ ಮಾತಿದು: ಮರುಭೂಮಿಯಲ್ಲಿ ನನ್ನನ್ನು ಆರಾಧಿಸಲು ನನ್ನ ಜನರಿಗೆ ಅಪ್ಪಣೆ ಕೊಡಬೇಕೆಂದು ನಿನಗೆ ಆಜ್ಞಾಪಿಸಿದೆ. ಆದರೆ ನೀನು ಈವರೆಗೂ ಅದನ್ನು ಲಕ್ಷ್ಯಕ್ಕೆ ತಂದುಕೊಂಡಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಇಬ್ರಿಯರ ದೇವರಾದ ಯೆಹೋವನು ನನ್ನನ್ನು ನಿನ್ನ ಬಳಿಗೆ ಕಳುಹಿಸಿ ಅರಣ್ಯದಲ್ಲಿ ತನ್ನನ್ನು ಆರಾಧಿಸುವಂತೆ ತನ್ನ ಜನರಿಗೆ ಅಪ್ಪಣೆಕೊಡಬೇಕೆಂದು ನಿನಗೆ ಆಜ್ಞಾಪಿಸಿದನಷ್ಟೆ; ಈವರೆಗೂ ನೀನು ಲಕ್ಷ್ಯಕ್ಕೆ ತರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ‘ಇಬ್ರಿಯರ ದೇವರಾದ ಯೆಹೋವನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ. ಆತನ ಜನರು ಅರಣ್ಯದಲ್ಲಿ ಆತನನ್ನು ಆರಾಧಿಸುವುದಕ್ಕೆ ನೀನು ಅವರಿಗೆ ಅಪ್ಪಣೆಕೊಡಬೇಕೆಂದು ಆತನು ನಿನಗೆ ಆಜ್ಞಾಪಿಸುತ್ತಾನೆ. ಇದುವರೆಗೆ ನೀನು ಯೆಹೋವನ ಮಾತಿಗೆ ಕಿವಿಗೊಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅವನಿಗೆ ನೀನು, ‘ಹಿಬ್ರಿಯರ ದೇವರಾದ ಯೆಹೋವ ದೇವರು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆ. ಮರುಭೂಮಿಯಲ್ಲಿ ನನಗೆ ಆರಾಧನೆ ಮಾಡುವ ಹಾಗೆ ನನ್ನ ಜನರನ್ನು ಕಳುಹಿಸು, ಎಂದು ಅವರು ಹೇಳಿದ್ದಾರೆ. ಆದರೆ ಇಗೋ, ಇಂದಿನವರೆಗೂ ನೀನು ಕೇಳಲಿಲ್ಲ. ಅಧ್ಯಾಯವನ್ನು ನೋಡಿ |
ಫರೋಹನು ಹಠಹಿಡಿದು ನಮ್ಮನ್ನು ಹೋಗಗೊಡಿಸದೇ ಇದ್ದಾಗ ಯೆಹೋವನು ಐಗುಪ್ತ ದೇಶದಲ್ಲಿ ಮನುಷ್ಯರ ಚೊಚ್ಚಲಮಕ್ಕಳನ್ನು, ಪಶುಗಳ ಚೊಚ್ಚಲು ಮರಿಗಳನ್ನು ಅಂತೂ ಆ ದೇಶದಲ್ಲಿ ಚೊಚ್ಚಲಾಗಿದ್ದ ಎಲ್ಲವನ್ನು ಸಂಹಾರ ಮಾಡಿದನು. ಆದಕಾರಣ ಗಂಡಾಗಿ ಹುಟ್ಟುವ ಪ್ರಥಮ ಗರ್ಭಫಲವನ್ನೆಲ್ಲಾ ನಾವು ಯೆಹೋವನಿಗೆ ಸಮರ್ಪಿಸುವುದುಂಟು. ಮನುಷ್ಯರಿಂದಾದ ಪ್ರಥಮ ಗರ್ಭಫಲವನ್ನಾದರೋ ಅದನ್ನು ಬದಲುಕೊಟ್ಟು ಬಿಡಿಸುತ್ತೇವೆ’” ಎಂದು ಹೇಳಬೇಕು.