Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 7:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನದಿಯಲ್ಲಿರುವ ಮೀನುಗಳು ಸಾಯುವವು. ನದಿಯು ಹೊಲಸಾಗಿ ನಾರುವುದು. ಅದನ್ನು ಕುಡಿಯುವುದಕ್ಕೆ ಐಗುಪ್ತರಿಗೆ ಹೇಸಿಗೆಯಾಗುವುದು’ ಎಂದು ಹೇಳಬೇಕು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನದಿಯಲ್ಲಿರುವ ಮೀನುಗಳು ಸಾಯುವುವು. ನದಿಯು ಹೊಲಸಾಗಿ ನಾರುವುದು. ಅದರಲ್ಲಿ ನೀರನ್ನು ಕುಡಿಯಲು ಈಜಿಪ್ಟಿನವರಿಗೆ ಹೇಸಿಗೆಯಾಗುವುದು'.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನದಿಯಲ್ಲಿರುವ ಮೀನುಗಳು ಸಾಯುವವು; ನದಿಯು ಹೊಲಸು ನಾರುವದು; ಅದರಲ್ಲಿ ಕುಡಿಯುವದಕ್ಕೆ ಐಗುಪ್ತ್ಯರಿಗೆ ಹೇಸಿಗೆಯಾಗುವದು ಎಂದು ಹೇಳಬೇಕು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನದಿಯಲ್ಲಿರುವ ಮೀನುಗಳು ಸಾಯುವವು; ನದಿಯು ಹೊಲಸಾಗುವುದು; ಈಜಿಪ್ಟಿನವರು ನದಿಯ ನೀರನ್ನು ಕುಡಿಯಲಾಗುವುದಿಲ್ಲ’ ಎಂದು ಹೇಳಬೇಕು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನದಿಯಲ್ಲಿರುವ ಮೀನುಗಳು ಸಾಯುವುವು. ನೈಲ್ ನದಿಯು ಹೊಲಸಾಗಿ ನಾರುವುದು. ಈಜಿಪ್ಟಿನವರು ನದಿಯ ನೀರನ್ನು ಕುಡಿಯುವುದಕ್ಕೆ ಅಸಹ್ಯಪಡುವರು,’ ಎಂದು ಹೇಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 7:18
5 ತಿಳಿವುಗಳ ಹೋಲಿಕೆ  

ಐಗುಪ್ತ್ಯರೆಲ್ಲರೂ ನದಿಯ ನೀರನ್ನು ಕುಡಿಯಲಾರದೆ ಕುಡಿಯುವ ನೀರಿಗಾಗಿ ನದಿಯ ಸುತ್ತಲೂ ಗುಂಡಿಗಳನ್ನು ತೆಗೆದರು.


ಅದರಲ್ಲಿದ್ದ ಮೀನುಗಳು ಸತ್ತುಹೋದವು. ನದಿಯು ದುರ್ವಾಸನೆಗೊಂಡಿದ್ದರಿಂದ ಐಗುಪ್ತರು ನೈಲ್ ನದಿಯ ನೀರನ್ನು ಕುಡಿಯಲಾರದೆ ಹೋದರು. ಐಗುಪ್ತ ದೇಶದಲ್ಲೆಲ್ಲಾ ರಕ್ತವೇ ಕಾಣುತಿತ್ತು.


ಆಗ ಅವರು ದೇವರಿಗೂ ಮತ್ತು ಮೋಶೆಗೂ ವಿರುದ್ಧವಾಗಿ ಮಾತನಾಡಿ, “ನೀವು ನಮ್ಮನ್ನು ಈ ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಐಗುಪ್ತ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ. ಈ ರುಚಿ ಇಲ್ಲದ ಆಹಾರವನ್ನು ತಿಂದು ನಮಗೆ ಬೇಸರವಾಯಿತು” ಎಂದು ಹೇಳಿದರು.


ಆದರೆ ನೀವು ಪೂರ್ತಿಯಾಗಿ ಒಂದು ತಿಂಗಳು ಮಾಂಸವನ್ನು ಊಟಮಾಡುವಿರಿ. ಅದು ವಾಕರಿಕೆಯಾಗಿ ನಿಮ್ಮ ಮೂಗಿನಲ್ಲಿ ಹೊರಟು ನಿಮಗೆ ಅಸಹ್ಯವಾಗುವ ತನಕ ಅದನ್ನು ಊಟಮಾಡುವಿರಿ. ನಿಮ್ಮ ಮಧ್ಯದಲ್ಲಿರುವ ಯೆಹೋವನನ್ನು ನೀವು ಅಲಕ್ಷ್ಯಮಾಡಿ ಆತನ ಎದುರಿನಲ್ಲಿ ಅತ್ತು, ‘ನಾವು ಏಕೆ ಐಗುಪ್ತ ದೇಶವನ್ನು ಬಿಟ್ಟುಬಂದೆವು ಎಂದು ಹೇಳುತ್ತೀರಲ್ಲಾ’ ಎಂದು ಹೇಳು” ಎಂದನು.


ಕಾಲುವೆಗಳು ನಾರುವವು. ಐಗುಪ್ತದ ಹೊಳೆಗಳು ಇಳಿದು, ನೀರಿಲ್ಲದೆ ಒಣಗಿ ಹೋಗುವವು. ಆಪು ಮತ್ತು ಜಂಬುಹುಲ್ಲುಗಳು ಬಾಡುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು