ವಿಮೋಚನಕಾಂಡ 7:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯೆಹೋವನು ಮೋಶೆಯ ಸಂಗಡ ಮಾತನಾಡಿ, “ನೀನು ಆರೋನನಿಗೆ ‘ನಿನ್ನ ಕೋಲನ್ನು ತೆಗೆದುಕೊಂಡು ಐಗುಪ್ತದೇಶದಲ್ಲಿರುವ ಹೊಳೆ, ಕಾಲುವೆ, ಕೆರೆ, ಕೊಳ ಮೊದಲಾದ ನೀರಿರುವ ಎಲ್ಲಾ ಸ್ಥಳಗಳ ಮೇಲೆ ಅದನ್ನು ಚಾಚು’ ಎಂದು ಹೇಳಬೇಕು. ಅವನು ಚಾಚುವಾಗ ಆ ನೀರೆಲ್ಲಾ ರಕ್ತವಾಗುವುದು. ಐಗುಪ್ತದೇಶದಲ್ಲೆಲ್ಲಾ ಮರದ ಪಾತ್ರೆಗಳಲ್ಲಿಯೂ, ಕಲ್ಲಿನ ಪಾತ್ರೆಗಳಲ್ಲಿಯೂ ಇರುವ ನೀರು ರಕ್ತವಾಗುವುದು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಸರ್ವೇಶ್ವರ ಮತ್ತೆ ಮೋಶೆಗೆ ಹೀಗೆಂದರು: “ನೀನು ಆರೋನನಿಗೆ, ‘ನಿನ್ನ ಕೋಲನ್ನು ತೆಗೆದುಕೊಂಡು ಈಜಿಪ್ಟ್ ದೇಶದಲ್ಲಿರುವ ಹೊಳೆ, ಕಾಲುವೆ, ಕೆರೆ, ಕೊಳ ಮೊದಲಾದ ನೀರಿರುವ ಎಲ್ಲ ಸ್ಥಳಗಳ ಮೇಲೆ ಅದನ್ನು ಚಾಚು’ ಎಂದು ಹೇಳು. ಅವನು ಚಾಚುವಾಗ ಆ ನೀರೆಲ್ಲ ರಕ್ತವಾಗುವುದು. ಈಜಿಪ್ಟ್ ದೇಶದಲ್ಲೆಲ್ಲೂ ಮರದ ತೊಟ್ಟಿಗಳಲ್ಲೂ ಕಲ್ಲಿನ ಬಾನೆಗಳಲ್ಲೂ ಕೂಡ ರಕ್ತ ತುಂಬಿರುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಯೆಹೋವನು ಮೋಶೆಯ ಸಂಗಡ ಮಾತಾಡಿ - ನೀನು ಆರೋನನಿಗೆ - ನಿನ್ನ ಕೊಲನ್ನು ತೆಗೆದುಕೊಂಡು ಐಗುಪ್ತ ದೇಶದಲ್ಲಿರುವ ಹೊಳೆ ಕಾಲುವೆ ಕೆರೆ ಕೊಳ ಮೊದಲಾದ ನೀರಿರುವ ಎಲ್ಲಾ ಸ್ಥಳಗಳ ಮೇಲೆ ಅದನ್ನು ಚಾಚು ಎಂದು ಹೇಳಬೇಕು; ಅವನು ಚಾಚುವಾಗ ಆ ನೀರೆಲ್ಲಾ ರಕ್ತವಾಗುವದು; ಐಗುಪ್ತ ದೇಶದಲ್ಲೆಲ್ಲಾ ಮರದ ಪಾತ್ರೆಗಳಲ್ಲಿಯೂ ಕಲ್ಲಿನ ಪಾತ್ರೆಗಳಲ್ಲಿಯೂ ಇರುವ ನೀರೂ ರಕ್ತವಾಗುವದು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಯೆಹೋವನು ಮೋಶೆಗೆ, “ನೀನು ಆರೋನನಿಗೆ, ‘ನಿನ್ನ ಕೈಯಲ್ಲಿರುವ ಊರುಗೋಲನ್ನು ನದಿಗಳ, ಕಾಲುವೆಗಳ, ಕೆರೆಗಳ ಮತ್ತು ನೀರಿರುವ ಪ್ರತಿಯೊಂದು ಸ್ಥಳದ ಮೇಲೆ ಚಾಚು’ ಎಂದು ಹೇಳು. ಅವನು ಚಾಚಿದಾಗ ನೀರೆಲ್ಲಾ ರಕ್ತವಾಗುವುದು. ಮರದ ಮತ್ತು ಕಲ್ಲಿನ ಪಾತ್ರೆಗಳಲ್ಲಿರುವ ನೀರು ಸಹ ರಕ್ತವಾಗುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅನಂತರ ಯೆಹೋವ ದೇವರು ಮೋಶೆಗೆ, “ನೀನು ಆರೋನನಿಗೆ, ‘ನಿನ್ನ ಕೋಲನ್ನು ತೆಗೆದುಕೊಂಡು ಈಜಿಪ್ಟಿನ ನೀರಿನ ಮೇಲೆಯೂ ಅದರ ನದಿಗಳ ಮೇಲೆಯೂ ಕೊಳಗಳ ಮೇಲೆಯೂ ಅದರ ಕಾಲುವೆ ಮೇಲೆಯೂ ಅದರ ಕೆರೆಗಳ ಮೇಲೆಯೂ ಕೈಚಾಚು,’ ಎಂದು ಹೇಳು. ಆಗ ಅವು ರಕ್ತವಾಗುವುವು. ಈಜಿಪ್ಟ್ ದೇಶದಲ್ಲಿ ನೀರಿರುವ ಮರದ ತೊಟ್ಟಿಗಳಲ್ಲಾಗಲೀ, ಕಲ್ಲಿನ ಪಾತ್ರೆಗಳಲ್ಲಾಗಲೀ ರಕ್ತವಿರುವುದು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |