ವಿಮೋಚನಕಾಂಡ 7:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅದರಲ್ಲಿದ್ದ ಮೀನುಗಳು ಸತ್ತುಹೋದವು. ನದಿಯು ದುರ್ವಾಸನೆಗೊಂಡಿದ್ದರಿಂದ ಐಗುಪ್ತರು ನೈಲ್ ನದಿಯ ನೀರನ್ನು ಕುಡಿಯಲಾರದೆ ಹೋದರು. ಐಗುಪ್ತ ದೇಶದಲ್ಲೆಲ್ಲಾ ರಕ್ತವೇ ಕಾಣುತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅದರಲ್ಲಿದ್ದ ಮೀನುಗಳು ಸತ್ತುಹೋದವು. ನದಿ ಹೊಲಸಾಗಿ ನಾರುತ್ತಿತ್ತು. ಈಜಿಪ್ಟಿನವರು ಅದರ ನೀರನ್ನು ಕುಡಿಯಲಾರದೆ ಹೋದರು. ಈಜಿಪ್ಟ್ ದೇಶವೆಲ್ಲಾ ರಕ್ತಮಯ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅದರಲ್ಲಿದ್ದ ಮೀನುಗಳು ಸತ್ತುಹೋದವು; ನದಿಯು ಹೊಲಸು ನಾರಿದ್ದರಿಂದ ಐಗುಪ್ತ್ಯರು ಅದರಲ್ಲಿ ಕುಡಿಯಲಾರದೆ ಹೋದರು. ಐಗುಪ್ತ ದೇಶದಲ್ಲೆಲ್ಲಾ ರಕ್ತವೇ ಆಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ನದಿಯಲ್ಲಿದ್ದ ಮೀನುಗಳು ಸತ್ತವು; ನದಿಯು ಹೊಲಸಾಗತೊಡಗಿತು. ಆದ್ದರಿಂದ ಈಜಿಪ್ಟಿನವರು ನದಿಯ ನೀರನ್ನು ಕುಡಿಯಲಾಗಲಿಲ್ಲ. ಈಜಿಪ್ಟಿನ ನೀರೆಲ್ಲಾ ರಕ್ತವೇ ಆಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನದಿಯಲ್ಲಿದ್ದ ಮೀನುಗಳು ಸತ್ತವು, ನದಿಯು ದುರ್ವಾಸನೆಗೊಂಡಿತು. ಈಜಿಪ್ಟಿನವರು ನೈಲ್ ನದಿಯ ನೀರನ್ನು ಕುಡಿಯಲಾರದೆ ಹೋದರು. ಆಗ ಈಜಿಪ್ಟ್ ದೇಶದಲ್ಲೆಲ್ಲಾ ರಕ್ತವಿತ್ತು. ಅಧ್ಯಾಯವನ್ನು ನೋಡಿ |