Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 7:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ. ಆಗ ನಾನು ಐಗುಪ್ತದೇಶದವರನ್ನು ಬಾಧಿಸಿ, ಅವರಿಗೆ ಮಹಾಶಿಕ್ಷೆಗಳನ್ನು ವಿಧಿಸಿ, ನನ್ನ ಜನರಾಗಿರುವ ಇಸ್ರಾಯೇಲರ ಸೈನ್ಯವನ್ನೆಲ್ಲಾ ಐಗುಪ್ತದೇಶದಿಂದ ಹೊರತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಫರೋಹನು ನಿನ್ನ ಮಾತನ್ನು ಕೇಳುವುದಿಲ್ಲ. ಆಗ ನಾನು ಈಜಿಪ್ಟ್ ದೇಶದವರನ್ನು ಬಾಧಿಸಿ ಅವರಿಗೆ ಕಠಿಣ ಶಿಕ್ಷೆಗಳನ್ನು ವಿಧಿಸುವೆನು. ನನ್ನ ಜನರಾದ ಇಸ್ರಯೇಲರ ಗೋತ್ರಗಳನ್ನೆಲ್ಲ ಈಜಿಪ್ಟ್ ದೇಶದಿಂದ ಹೊರತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಫರೋಹನು ನಿಮ್ಮ ಮಾತನ್ನು ಕೇಳುವದಿಲ್ಲ; ಆಗ ನಾನು ಐಗುಪ್ತದೇಶದವರನ್ನು ಬಾಧಿಸಿ ಅವರಿಗೆ ಮಹಾಶಿಕ್ಷೆಗಳನ್ನು ವಿಧಿಸಿ ನನ್ನ ಜನರಾಗಿರುವ ಇಸ್ರಾಯೇಲ್ಯರ ಸೈನ್ಯವನ್ನೆಲ್ಲಾ ಐಗುಪ್ತದೇಶದಿಂದ ಹೊರ ತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ನಾನು ಈಜಿಪ್ಟನ್ನು ಭಯಂಕರವಾಗಿ ದಂಡಿಸಿ ನನ್ನ ಜನರನ್ನು ಆ ದೇಶದಿಂದ ಹೊರತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ. ಆದರೆ ನನ್ನ ಕೈಯನ್ನು ಈಜಿಪ್ಟಿನ ಮೇಲೆ ಇಟ್ಟು, ದೊಡ್ಡ ನ್ಯಾಯ ತೀರ್ಪುಗಳಿಂದ ನನ್ನ ಜನರಾದ ಇಸ್ರಾಯೇಲರನ್ನೂ, ಅವರ ಸೈನ್ಯಗಳನ್ನೂ ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 7:4
28 ತಿಳಿವುಗಳ ಹೋಲಿಕೆ  

ಯೆಹೋವನು ಮೋಶೆಗೆ, “ಐಗುಪ್ತ ದೇಶದಲ್ಲಿ ನನ್ನ ಮಹತ್ಕಾರ್ಯಗಳನ್ನು ಇನ್ನೂ ಹೆಚ್ಚಾಗಿ ನಡೆಯಬೇಕಾಗಿರುವುದರಿಂದ ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ” ಎಂದು ಹೇಳಿದನು.


ಆದುದರಿಂದ, ನೀನು ಇಸ್ರಾಯೇಲರಿಗೆ ನನ್ನ ಹೆಸರಿನಲ್ಲಿ ಹೇಳಬೇಕಾದದ್ದೇನೆಂದರೆ, ‘ನಾನೇ ಯೆಹೋವನು ಐಗುಪ್ತರು ನಿಮ್ಮಿಂದ ಮಾಡಿಸುವ ಬಿಟ್ಟೀ ಕೆಲಸಗಳನ್ನು ತಪ್ಪಿಸಿ, ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ, ನನ್ನ ಕೈಚಾಚಿ ಅವರಿಗೆ ಮಹಾ ಶಿಕ್ಷೆಗಳನ್ನು ವಿಧಿಸಿ ನಿಮ್ಮನ್ನು ರಕ್ಷಿಸುವೆನು.


ಅದೇ ದಿನದಲ್ಲಿ ಯೆಹೋವನು ಇಸ್ರಾಯೇಲರನ್ನು ಅವರವರ ಸೈನ್ಯಗಳ ಪ್ರಕಾರವಾಗಿ ಐಗುಪ್ತ ದೇಶದಿಂದ ಹೊರಗೆ ತಂದನು.


ಆತನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ, ತನ್ನ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಅವಳು ಆತನ ಸೇವಕರನ್ನು ಕೊಂದದ್ದಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.” ಎಂದು ಹೇಳಿ,


ಆ ಮೇಲೆ ಯಜ್ಞವೇದಿಯು ಮಾತನಾಡುತ್ತಾ, “ದೇವರಾದ ಕರ್ತನೇ ಸರ್ವಶಕ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ” ಎಂದು ಹೇಳುವುದನ್ನು ಕೇಳಿದೆನು.


ಕರ್ತನೇ, ನಿನಗೆ ಭಯಪಡದವರು ಮತ್ತು ನಿನ್ನ ನಾಮವನ್ನು ಮಹಿಮೆ ಪಡಿಸದವರು ಯಾರಾದರು ಇದ್ದಾರೆಯೇ? ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ನ್ಯಾಯತೀರ್ಪು ಬೆಳಕಿಗೆ ಬಂದುದರಿಂದ ಸರ್ವಜನಾಂಗಗಳು ನಿನ್ನ ಸನ್ನಿಧಾನಕ್ಕೆ ಬಂದು ನಿನ್ನನ್ನು ಆರಾಧಿಸುವರು.”


ಹೀಗೆ ನಾನು ಐಗುಪ್ತ್ಯರಿಗೆ ದಂಡನೆಗಳನ್ನು ವಿಧಿಸಿ ತೀರಿಸುವಾಗ ನಾನೇ ಯೆಹೋವನು” ಎಂದು ಅವರಿಗೆ ಗೊತ್ತಾಗುವುದು.


ನಾನು ಪತ್ರೋಸನ್ನು ಹಾಳುಮಾಡಿ, ಚೋವನಿಗೆ ಬೆಂಕಿಯಿಡುವೆನು. ನೋಪುರವನ್ನು ದಂಡಿಸಿ,


ಮೋವಾಬ್ಯರಿಗೂ ದಂಡನೆಗಳನ್ನು ವಿಧಿಸಿ ತೀರಿಸುವೆನು. ಆಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.”


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಖಡ್ಗ, ಕ್ಷಾಮ, ದುಷ್ಟಮೃಗ ಮತ್ತು ವ್ಯಾಧಿ ಎಂಬ ನಾಲ್ಕು ಬಾಧೆಗಳನ್ನು ಯೆರೂಸಲೇಮಿನ ಮೇಲೆ ಒಟ್ಟಿಗೆ ತಂದು, ಜನರನ್ನು, ಪಶುಗಳನ್ನು ನಿರ್ಮೂಲ ಮಾಡುವಾಗ ಹೇಳತಕ್ಕದ್ದೇನು!


ನಿಶ್ಚಯವಾಗಿ ಆತನು ನನಗೆ ವಿರುದ್ಧವಾಗಿದ್ದಾನೆ. ದಿನವೆಲ್ಲಾ ನನ್ನ ಮೇಲೆ ಕೈಮಾಡುತ್ತಾ ಬಂದಿದ್ದಾನೆ.


ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಹಾರೈಸಿದ್ದೇವೆ, ಹೌದು, ನಮ್ಮ ಆತ್ಮದಲ್ಲಿ ನಿನ್ನನ್ನು ತವಕದಿಂದ ಹುಡುಕಿದ್ದೇವೆ. ನೀನು ಲೋಕದಲ್ಲಿ ನ್ಯಾಯಕಾರ್ಯಗಳನ್ನು ನಡೆಸುವಾಗ ಭೂನಿವಾಸಿಗಳು ಧರ್ಮಜ್ಞಾನವನ್ನು ಪಡೆದುಕೊಳ್ಳುವರು.


ಧರ್ಮನಿಂದಕರಿಗೆ ದಂಡನೆಯ ತೀರ್ಪು ಸಿದ್ಧ, ಮೂಢರ ಬೆನ್ನಿಗೆ ಪೆಟ್ಟು ಖಂಡಿತ.


ಯೆಹೋವನು ತಾನು ಮೊದಲೇ ಆಣೆಯಿಟ್ಟು ಹೇಳಿದಂತೆ ಇಸ್ರಾಯೇಲರು ಎಲ್ಲಿ ಹೋದರೂ ಆತನ ಕೈ ಅವರಿಗೆ ವಿರೋಧವಾಗಿಯೇ ಇತ್ತು. ಅವರು ಬಹು ಕಷ್ಟಗಳಿಗೆ ಗುರಿಯಾದರು.


ತರುವಾಯ ಯೆಹೋವನು ಮೋಶೆಗೆ, “ಫರೋಹನ ಬಳಿಗೆ ಹಿಂತಿರುಗಿ ಹೋಗು. ನಾನು ಫರೋಹನ ಮತ್ತು ಅವನ ಪರಿವಾರದವರ ಹೃದಯಗಳನ್ನು ಕಠಿಣಗೊಳಿಸಿದ್ದೇನೆ. ಏಕೆಂದರೆ ನಾನು ಈ ಮಹತ್ಕಾರ್ಯಗಳನ್ನು ಅವರ ಮುಂದೆ ನಡೆಸುವುದಕ್ಕೆ ಇದು ಕಾರಣವಾಯಿತು.


ಯೆಹೋವನು ಅಡವಿಯಲ್ಲಿರುವ ನಿನ್ನ ಎಲ್ಲಾ ಪಶುಗಳಿಗೂ, ಕುದುರೆ, ಕತ್ತೆ, ಒಂಟೆ, ದನ, ಕುರಿ, ಆಡು ಇವೆಲ್ಲವುಗಳಿಗೂ ವಿರೋಧವಾಗಿ ತನ್ನ ಕೈಯನ್ನು ಎತ್ತಿ ಘೋರವ್ಯಾಧಿಯನ್ನು ಉಂಟುಮಾಡುವನೆಂದು ತಿಳಿದುಕೋ.


ಇಸ್ರಾಯೇಲರನ್ನು ಅವರ ಗೋತ್ರಗಳಿಗನುಸಾರವಾಗಿ, ಐಗುಪ್ತದೇಶದಿಂದ ಹೊರಗೆ ಬರಮಾಡಬೇಕೆಂದು ಯೆಹೋವನು ಯಾರಿಗೆ ಹೇಳಿದನೋ ಅವರೇ ಆರೋನ್ ಮತ್ತು ಮೋಶೆ.


ಆದಕಾರಣ ನಾನು ನನ್ನ ಕೈಯನ್ನು ಚಾಚಿ ಐಗುಪ್ತ ದೇಶದಲ್ಲಿ ಮಹತ್ಕಾರ್ಯಗಳನ್ನು ಮಾಡಿ ಅದನ್ನು ನಾನಾ ವಿಧವಾಗಿ ಬಾಧಿಸುವೆನು. ಅನಂತರ ಅರಸನು ನಿಮ್ಮನ್ನು ಕಳುಹಿಸಿಕೊಡುವನು.


ಆ ಐಗುಪ್ತದ ಅರಸನು ನೀವು ಎಷ್ಟು ಬಲವಂತ ಮಾಡಿದರೂ ನಿಮ್ಮನ್ನು ಬಿಡುವುದಿಲ್ಲವೆಂದು ನನಗೆ ತಿಳಿದಿದೆ.


ಆನಂತರ ಯೆಹೋವನು ಮೋಶೆಗೆ, “ನಾನು ಫರೋಹನಿಗೆ ಮಾಡುವುದನ್ನು ನೀನು ಈಗ ನೋಡುವೆ. ಅವನು ನನ್ನ ಬಲವಾದ ಹಸ್ತವನ್ನು ನೋಡಿ ಅವರನ್ನು ಹೋಗಗೊಡಿಸುವನು. ನನ್ನ ಭುಜಬಲದಿಂದ ಪೀಡಿತನಾಗಿ ಅವರನ್ನು ತನ್ನ ದೇಶದಿಂದ ಹೊರಡಿಸುವನು” ಅಂದನು.


ಯೆಹೋವನು ಮೊದಲು ಹೇಳಿದಂತೆಯೇ ಫರೋಹನ ಹೃದಯವು ಕಠಿಣವಾಯಿತು. ಅವನು ಅವರ ಮಾತಿಗೆ ಕಿವಿಗೊಡದೆ ಹೋದನು.


‘ಇಬ್ರಿಯರ ದೇವರಾದ ಯೆಹೋವನು ನನ್ನನ್ನು ನಿನ್ನ ಬಳಿಗೆ ಕಳುಹಿಸಿ, ಅರಣ್ಯದಲ್ಲಿ ತನ್ನನ್ನು ಆರಾಧಿಸುವಂತೆ ತನ್ನ ಜನರಿಗೆ ಅಪ್ಪಣೆಕೊಡಬೇಕೆಂದು ನಿನಗೆ ಆಜ್ಞಾಪಿಸಿದ್ದಾನಷ್ಟೇ. ಈ ವರೆಗೂ ನೀನು ಅದನ್ನು ಲಕ್ಷ್ಯಕ್ಕೆ ತರಲಿಲ್ಲ.


ಆದರೆ ಫರೋಹನು ಕಪ್ಪೆಗಳ ಕಾಟವು ತೀರಿತೆಂದು ತಿಳಿದುಕೊಂಡಾಗ, ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು. ಯೆಹೋವನು ಹೇಳಿದಂತೆಯೇ ಅವನು, ಮೋಶೆ ಮತ್ತು ಆರೋನನ ಮಾತನ್ನು ಕೇಳದೆ ಹೋದನು.


ಆಗ ಆ ಮಂತ್ರಗಾರರು ಫರೋಹನಿಗೆ, “ಇದು ದೇವರ ಕೈಕೆಲಸವೇ ಸರಿ” ಎಂದು ಹೇಳಿದರು. ಆದರೂ ಫರೋಹನ ಹೃದಯವು ಕಠಿಣವಾಗಿತ್ತು. ಯೆಹೋವನು ಮೋಶೆಗೆ ಮುಂತಿಳಿಸಿದಂತೆಯೇ ಫರೋಹನು ಅವರ ಮಾತನ್ನು ಕೇಳದೆ ಹೋದನು.


ಆದರೂ ಯೆಹೋವನು ಮೋಶೆಗೆ ಹೇಳಿದಂತೆಯೇ ಆಯಿತು. ಯೆಹೋವನು ಫರೋಹನ ಹೃದಯವನ್ನು ಕಠಿಣಮಾಡಿದ್ದರಿಂದ ಅವನು ಅವರ ಮಾತಿಗೆ ಕಿವಿಗೊಡದೆ ಹೋದನು.


ಮೋಶೆಯು ಇಸ್ರಾಯೇಲರಿಗೆ, “ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದ್ದಾನೆ. ಈ ದಿನದಲ್ಲಿ ನೀವು ಹುಳಿಬೆರೆಸಿದ್ದನ್ನು ತಿನ್ನಬಾರದು.


ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಐಗುಪ್ತ ದೇಶದಿಂದ ಬಿಡಿಸಿದ್ದರಿಂದ ಆತನ ನಿಯಮವನ್ನು ಕುರಿತು ನೀವು ಹೇಳಬೇಕು. ಈ ಆಚರಣೆಯು ನಿಮ್ಮ ಕೈಗಳ ಮೇಲೆ ಗುರುತಾಗಿಯೂ, ಹಣೆಗೆ ಕಟ್ಟಿಕೊಂಡಿರುವ ಜ್ಞಾಪಕಪಟ್ಟಿಯಂತೆಯೂ ಇರಬೇಕು.


ಆ ನಂತರ ಮೋಶೆಯು ಯೆಹೋವನು ಇಸ್ರಾಯೇಲರ ಪರವಾಗಿ ಫರೋಹನಿಗೂ, ಐಗುಪ್ತ್ಯರಿಗೂ ಮಾಡಿದ್ದೆಲ್ಲವನ್ನೂ, ದಾರಿಯಲ್ಲಿ ತಮಗುಂಟಾದ ಎಲ್ಲಾ ಕಷ್ಟಗಳನ್ನೂ, ಯೆಹೋವನು ಆ ಕಷ್ಟಗಳಿಂದ ತಪ್ಪಿಸಿದ್ದನ್ನೂ ತನ್ನ ಮಾವನಿಗೆ ವಿವರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು