Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 8:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಂತರ ಯೆಹೋವನು ಮೋಶೆಯ ಸಂಗಡ ಮಾತನಾಡಿ ಅವನಿಗೆ, “ನೀನು ಫರೋಹನ ಬಳಿಗೆ ಹೋಗಿ ಹೀಗೆ ಹೇಳಬೇಕು, ‘ಯೆಹೋವನು ಆಜ್ಞಾಪಿಸುವುದೇನೆಂದರೆ: ನನ್ನನ್ನು ಆರಾಧಿಸುವುದಕ್ಕೆ ನನ್ನ ಜನರಿಗೆ ಅಪ್ಪಣೆಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ತರುವಾಯ ಸರ್ವೇಶ್ವರ ಸ್ವಾಮಿ ಮೋಶೆಗೆ ಇಂತೆಂದರು: “ನೀನು ಫರೋಹನ ಬಳಿಗೆ ಹೋಗಿ ಹೀಗೆಂದು ಹೇಳು - ‘ಸರ್ವೇಶ್ವರ ನಿನಗೆ ಮಾಡುವ ಆಜ್ಞೆ ಇದು - ನನ್ನನ್ನು ಆರಾಧಿಸಲು ನನ್ನ ಜನರಿಗೆ ಹೋಗಲು ಅಪ್ಪಣೆ ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ತರುವಾಯ ಯೆಹೋವನು ಮೋಶೆಗೆ ಇಂತೆಂದನು - ನೀನು ಫರೋಹನ ಬಳಿಗೆ ಹೋಗಿ ಹೀಗನ್ನಬೇಕು - ಯೆಹೋವನು ಆಜ್ಞಾಪಿಸುವದೇನಂದರೆ - ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆಗ ಯೆಹೋವನು ಮೋಶೆಗೆ, “ಫರೋಹನ ಬಳಿಗೆ ಹೋಗಿ ಯೆಹೋವನು ಹೀಗೆನ್ನುತ್ತಾನೆ ಎಂದು ಹೇಳು: ‘ನನ್ನನ್ನು ಆರಾಧಿಸುವುದಕ್ಕೆ ನನ್ನ ಜನರು ಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅನಂತರ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಅವನಿಗೆ, “ನೀನು ಫರೋಹನ ಬಳಿಗೆ ಹೋಗಿ ಅವನಿಗೆ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನನ್ನನ್ನು ಆರಾಧಿಸುವಂತೆ ನನ್ನ ಜನರನ್ನು ಕಳುಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 8:1
15 ತಿಳಿವುಗಳ ಹೋಲಿಕೆ  

ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನು ಮತ್ತು ಇಸ್ರಾಯೇಲರ ಹಿರಿಯರು ಐಗುಪ್ತದೇಶದ ಅರಸನ ಬಳಿಗೆ ಹೋಗಿ ಅವನಿಗೆ, “ಇಬ್ರಿಯರ ದೇವರಾಗಿರುವ ಯೆಹೋವನು ನಮಗೆ ಪ್ರತ್ಯಕ್ಷನಾದನು. ಆದುದರಿಂದ ನಾವು ಮರುಭೂಮಿಯಲ್ಲಿ ಮೂರು ದಿನದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾಗಿರುವ ಯೆಹೋವನಿಗಾಗಿ ಯಜ್ಞಮಾಡಬೇಕಾಗಿದೆ, ಅದಕ್ಕೆ ಅಪ್ಪಣೆಯಾಗಬೇಕು” ಎಂದು ಕೇಳಿಕೊಳ್ಳಿರಿ.


ಅದಕ್ಕೆ ದೇವರು, “ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು. ನೀನು ನನ್ನ ಜನರನ್ನು ಐಗುಪ್ತದೇಶದಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ನನ್ನನ್ನು ಆರಾಧಿಸುವಿರಿ. ನಿನ್ನನ್ನು ಕಳುಹಿಸಿದವನು ನಾನೇ ಎಂಬುವುದಕ್ಕೆ ಇದು ನಿನಗೆ ಗುರುತಾಗಿರುವುದು” ಅಂದನು.


ಬಳಿಕ ಮೋಶೆ ಮತ್ತು ಆರೋನರು ಫರೋಹನ ಸನ್ನಿಧಿಗೆ ಹೋಗಿ, “ಇಸ್ರಾಯೇಲರ ದೇವರಾದ ಯೆಹೋವನು, ನನ್ನ ಜನರು ನನಗಾಗಿ ಅರಣ್ಯದೊಳಗೆ ಜಾತ್ರೆ ನಡೆಸುವಂತೆ ಅವರಿಗೆ ಅಪ್ಪಣೆ ಕೊಡಬೇಕು ಎಂದು ಹೇಳಿದ್ದಾನೆ” ಅಂದರು.


‘ಇಬ್ರಿಯರ ದೇವರಾದ ಯೆಹೋವನು ನನ್ನನ್ನು ನಿನ್ನ ಬಳಿಗೆ ಕಳುಹಿಸಿ, ಅರಣ್ಯದಲ್ಲಿ ತನ್ನನ್ನು ಆರಾಧಿಸುವಂತೆ ತನ್ನ ಜನರಿಗೆ ಅಪ್ಪಣೆಕೊಡಬೇಕೆಂದು ನಿನಗೆ ಆಜ್ಞಾಪಿಸಿದ್ದಾನಷ್ಟೇ. ಈ ವರೆಗೂ ನೀನು ಅದನ್ನು ಲಕ್ಷ್ಯಕ್ಕೆ ತರಲಿಲ್ಲ.


ಹಾಗೂ ನನ್ನ ಮಗನು ನಿನ್ನ ದೇಶದಿಂದ ಹೊರಟು ನನ್ನನ್ನು ಆರಾಧಿಸುವುದಕ್ಕೆ ಅವನಿಗೆ ಅಪ್ಪಣೆಕೊಡಬೇಕು. ಅದಕ್ಕೆ ನೀನು ಒಪ್ಪದೇ ಹೋದರೆ, ನಾನು ನಿನಗಿರುವ ಚೊಚ್ಚಲಮಗನನ್ನು ಸಾಯಿಸುವೆನೆಂದು ಯೆಹೋವನು ಹೇಳುತ್ತಾನೆ’” ಎಂದು ತಿಳಿಸಬೇಕು.


ಆಗ ಅವರು, “ಇಬ್ರಿಯರ ದೇವರು ನಮ್ಮನ್ನು ಎದುರುಗೊಂಡನು. ಅಪ್ಪಣೆಯಾದರೆ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣಮಾಡಿ, ನಮ್ಮ ದೇವರಾದ ಯೆಹೋವನಿಗೋಸ್ಕರ ಯಜ್ಞಮಾಡಿ ಬರುವೆವು. ಇಲ್ಲವಾದರೆ ಆತನು ನಮ್ಮನ್ನು ವ್ಯಾಧಿಯಿಂದಾದರೂ, ಕತ್ತಿಯಿಂದಾದರೂ ಸಂಹಾರಮಾಡುವನು” ಎಂದು ಹೇಳಿದರು.


ಯೆಹೋವನು ನೈಲ್ ನದಿಯನ್ನು ಹೊಡೆದ ಮೇಲೆ ಏಳು ದಿನಗಳು ತುಂಬಿದವು.


ಅಪ್ಪಣೆಕೊಡದೆ ಹೋದರೆ, ನಾನು ನಿನ್ನ ದೇಶದಲ್ಲೆಲ್ಲಾ ಕಪ್ಪೆಗಳಿಂದ ಉಪದ್ರವ ಕೊಡುವೆನು.


ತರುವಾಯ ಯೆಹೋವನು ಮೋಶೆಗೆ, “ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೋ. ಅವನು ಹೊರಗೆ ನದಿಯ ಬಳಿಗೆ ಬರುತ್ತಾನೆ. ನೀನು ಅವನಿಗೆ ಹೀಗೆಂದು ಹೇಳು, ‘ಯೆಹೋವನು ಆಜ್ಞಾಪಿಸುವುದೇನೆಂದರೆ, ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆಕೊಡಬೇಕು.


ತರುವಾಯ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು, ಫರೋಹನ ಬಳಿಗೆ ಹೋಗಿ ಅವನಿಗೆ, ‘ಇಬ್ರಿಯರ ದೇವರಾದ ಯೆಹೋವನು ತನ್ನನ್ನು ಆರಾಧಿಸುವಂತೆ ತನ್ನ ಜನರಿಗೆ ಅಪ್ಪಣೆಕೊಡಬೇಕೆಂಬುದಾಗಿ ಹೇಳಿದ್ದಾನೆ.


ಯೆಹೋವನು ಯೆಹೋಶುವನಿಗೆ “ನಿನ್ನ ಕೈಯಲ್ಲಿರುವ ಈಟಿಯನ್ನು ಆಯಿ ಎಂಬ ಊರಿನ ಕಡೆಗೆ ಚಾಚು; ಆ ಪಟ್ಟಣವನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ” ಎನ್ನಲು ಅವನು ಅದನ್ನು ಚಾಚಿದನು.


ಅವರ ದೇಶದಲ್ಲೆಲ್ಲಾ ಕಪ್ಪೆಗಳು ತುಂಬಿಕೊಂಡವು; ಅರಮನೆಯಲ್ಲಿಯೂ ವ್ಯಾಪಿಸಿಕೊಂಡವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು