Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 8:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಕಪ್ಪೆಗಳು ನಿನ್ನನ್ನೂ, ನಿನ್ನ ಮನೆಗಳನ್ನೂ, ನಿನ್ನ ಪ್ರಜಾಪರಿವಾರದವರನ್ನೂ ಬಿಟ್ಟು, ನೈಲ್ ನದಿಯಲ್ಲಿ ಮಾತ್ರ ಇರುವವು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಕಪ್ಪೆಗಳು ತಮ್ಮನ್ನೂ ತಮ್ಮ ಮನೆಮಾರುಗಳನ್ನೂ ತಮ್ಮ ಪ್ರಜಾಪರಿವಾರಗಳನ್ನೂ ಬಿಟ್ಟು ನದಿಯಲ್ಲಿ ಮಾತ್ರ ಇರುವುವು. ಇದರಿಂದ ನಮ್ಮ ದೇವರಾದ ಸರ್ವೇಶ್ವರನಿಗೆ ಸಮಾನರು ಯಾರೂ ಇಲ್ಲವೆಂದು ತಾವೇ ತಿಳಿದುಕೊಳ್ಳುವಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕಪ್ಪೆಗಳು ನಿನ್ನನ್ನೂ ನಿನ್ನ ಮನೆಗಳನ್ನೂ ನಿನ್ನ ಪ್ರಜಾಪರಿವಾರದವರನ್ನೂ ಬಿಟ್ಟು ನದಿಯಲ್ಲಿ ಮಾತ್ರ ಇರುವವು; ಇದರಿಂದ ನಮ್ಮ ದೇವರಾಗಿರುವ ಯೆಹೋವನಿಗೆ ಸಮಾನರು ಬೇರೆ ಯಾರೂ ಇಲ್ಲವೆಂದು ತಿಳಿದುಕೊಳ್ಳುವಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಕಪ್ಪೆಗಳು ನಿನ್ನನ್ನೂ ನಿನ್ನ ಮನೆಗಳನ್ನೂ ನಿನ್ನ ಅಧಿಕಾರಿಗಳನ್ನೂ ನಿನ್ನ ಜನರನ್ನೂ ಬಿಟ್ಟುಹೋಗಿ ನದಿಯಲ್ಲಿ ಮಾತ್ರ ಉಳಿದುಕೊಳ್ಳುವವು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಕಪ್ಪೆಗಳು ನಿನ್ನಿಂದಲೂ ನಿನ್ನ ಮನೆಗಳಿಂದಲೂ ನಿನ್ನ ಸೇವಕರಿಂದಲೂ ನಿನ್ನ ಜನರಿಂದಲೂ ಹೊರಟುಹೋಗಿ, ನೈಲ್ ನದಿಯಲ್ಲಿ ಮಾತ್ರ ಇರುವುವು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 8:11
7 ತಿಳಿವುಗಳ ಹೋಲಿಕೆ  

ಅದಕ್ಕೆ ಮೋಶೆ ಫರೋಹನಿಗೆ, “ಈ ಕಪ್ಪೆಗಳು ನಿನ್ನ ಬಳಿಯಿಂದಲೂ, ನಿನ್ನ ಪ್ರಜೆಗಳ ಬಳಿಯಿಂದಲೂ, ನಿನ್ನ ಮನೆಗಳಿಂದಲೂ ತೊಲಗಿ ನೈಲ್ ನದಿಯಲ್ಲಿ ಮಾತ್ರ ಉಳಿಯುವಂತೆ ನಿನಗೋಸ್ಕರವೂ, ನಿನ್ನ ಪರಿವಾರದವರಿಗೋಸ್ಕರವೂ ನಾನು ಯಾವಾಗ ಬೇಡಿಕೊಳ್ಳಲಿ? ನಿನ್ನ ಚಿತ್ತಕ್ಕೆ ಸರಿ ತೋರುವಂತೆ ನೀನೇ ಅದಕ್ಕೊಂದು ಕಾಲವನ್ನು ನೇಮಿಸಬೇಕು” ಎಂದು ಫರೋಹನನ್ನು ವಿನಂತಿಸಿಕೊಂಡನು.


ನೈಲ್ ನದಿಯಲ್ಲಿ ಕಪ್ಪೆಗಳು ಅಸಂಖ್ಯಾತವಾಗಿ ಹುಟ್ಟುವವು. ಅವು ಹೊರಟು ಬಂದು ನಿನ್ನ ಅರಮನೆಯಲ್ಲಿಯೂ, ಮಲಗುವ ಕೋಣೆಯಲ್ಲಿಯೂ, ಮಂಚದ ಮೇಲೆಯೂ ಬರುವುದಲ್ಲದೆ ನಿನ್ನ ಪರಿವಾರದವರ ಮನೆಗಳಲ್ಲಿಯೂ, ನಿನ್ನ ಪ್ರಜೆಗಳ ಮೇಲೆಯೂ, ಒಲೆಗಳಲ್ಲಿಯೂ, ಹಿಟ್ಟು ನಾದುವ ಪಾತ್ರೆಗಳಲ್ಲಿಯೂ ಬರುವವು.


ಯೆಹೋವನು ಮೋಶೆಯ ಮಾತಿನ ಪ್ರಕಾರವೇ ಮಾಡಿದನು. ಮನೆಗಳಲ್ಲಿಯೂ, ಅಂಗಳಗಳಲ್ಲಿಯೂ, ಬಯಲಿನಲ್ಲಿಯೂ ಇದ್ದ ಕಪ್ಪೆಗಳು ಸತ್ತುಹೋದವು.


ಮೋಶೆ ಮತ್ತು ಆರೋನರು ಫರೋಹನ ಬಳಿಯಿಂದ ಹೊರಟು ಹೋದರು. ಆಗ ಮೋಶೆಯು ಯೆಹೋವನಿಗೆ, ನೀನು ಫರೋಹನ ಮೇಲೆ ಬರಮಾಡಿರುವ ಕಪ್ಪೆಗಳನ್ನು ತೊಲಗಿಸಬೇಕೆಂದು ಮೊರೆಯಿಟ್ಟನು.


ಯೆಹೋವನು ಮೋಶೆಗೆ ಇಂತೆಂದನು, “ನೀನು ಐಗುಪ್ತ ದೇಶಕ್ಕೆ ಹಿಂತಿರುಗಿ ಬಂದಾಗ ನಾನು ನಿನ್ನ ಕೈಯಿಂದ ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ಫರೋಹನ ಮುಂದೆ ಮಾಡಬೇಕು. ಆದರೂ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಆದ್ದರಿಂದ ಅವನು ಜನರನ್ನು ಹೋಗಲು ಬಿಡುವುದಿಲ್ಲ.


ಯೆಹೋವನು ಮೊದಲು ಹೇಳಿದಂತೆಯೇ ಫರೋಹನ ಹೃದಯವು ಕಠಿಣವಾಯಿತು. ಅವನು ಅವರ ಮಾತಿಗೆ ಕಿವಿಗೊಡದೆ ಹೋದನು.


ಆಗ ಯೆಹೋವನು ಮೋಶೆಗೆ, “ಫರೋಹನ ಹೃದಯವು ಕಠಿಣವಾಗಿದೆ, ತಾನು ಜನರಿಗೆ ಹೋಗುವುದಕ್ಕೆ ಅಪ್ಪಣೆಕೊಡುವುದಿಲ್ಲ ಎನ್ನುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು