Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 8:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವರು ಹಾಗೆಯೇ ಮಾಡಿದರು. ಆರೋನನು ಕೋಲನ್ನು ಹಿಡಿದುಕೊಂಡು ಅದನ್ನು ಚಾಚಿ, ಭೂಮಿಯ ಧೂಳನ್ನು ಹೊಡೆದನು. ಆಗ ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ ಹೇನುಗಳು ಬಂದವು. ಐಗುಪ್ತ ದೇಶದ ಭೂಮಿಯಲ್ಲಿದ್ದ ಧೂಳು ಹೇನುಗಳಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅವರು ಹಾಗೆಯೆ ಮಾಡಿದರು. ಆರೋನನು ಕೋಲನ್ನು ಹಿಡಿದು ಕೈಚಾಚಿ ಧೂಳನ್ನು ಹೊಡೆದನು. ಹೇನುಗಳು ನರಮಾನವರ ಮೇಲೂ ಪಶುಪ್ರಾಣಿಗಳ ಮೇಲೂ ಮುತ್ತಿಕೊಂಡವು. ಈಜಿಪ್ಟ್ ದೇಶದಲ್ಲೆಲ್ಲಾ ನೆಲದ ಧೂಳು ಹೇನುಗಳಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವರು ಹಾಗೆಯೇ ಮಾಡಿದರು; ಆರೋನನು ಕೋಲನ್ನು ಹಿಡುಕೊಂಡು ಕೈಚಾಚಿ ಭೂವಿುಯ ಧೂಳನ್ನು ಹೊಡೆಯಲು ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಹೇನುಗಳು ಬಂದವು; ಐಗುಪ್ತ ದೇಶದಲ್ಲೆಲ್ಲಾ ಭೂವಿುಯಲ್ಲಿರುವ ಧೂಳು ಹೇನುಗಳಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅವರು ಹಾಗೆಯೇ ಮಾಡಿದರು. ಆರೋನನು ತನ್ನ ಕೈಯಲ್ಲಿದ್ದ ಕೋಲನ್ನು ಎತ್ತಿ ನೆಲದ ಧೂಳನ್ನು ಹೊಡೆದನು. ಆಗ ಈಜಿಪ್ಟಿನ ಪ್ರತಿಯೊಂದು ಸ್ಥಳದ ಧೂಳು ಹೇನುಗಳಾಗಿ ಪ್ರಾಣಿಗಳ ಮೇಲೂ ಜನರ ಮೇಲೂ ಏರಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವರು ಹಾಗೆಯೇ ಮಾಡಲಾರಂಭಿಸಿದರು. ಆರೋನನು ಕೋಲನ್ನು ಕೈಯಲ್ಲಿ ಹಿಡಿದು, ಅದನ್ನು ಚಾಚಿ, ಭೂಮಿಯ ಧೂಳನ್ನು ಹೊಡೆದನು. ಆಗ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಹೇನುಗಳಾದವು. ಈಜಿಪ್ಟ್ ದೇಶದಲ್ಲೆಲ್ಲಾ ನೆಲದ ಧೂಳು ಹೇನುಗಳಾದವು

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 8:17
7 ತಿಳಿವುಗಳ ಹೋಲಿಕೆ  

ಆತನು ಆಜ್ಞಾಪಿಸಲು ಅವರ ಎಲ್ಲಾ ಪ್ರಾಂತ್ಯಗಳಲ್ಲಿ, ವಿಷದ ಹುಳಗಳೂ, ಹೇನುಗಳೂ ಉಂಟಾದವು.


ಆ ಘನತೆಯನ್ನು ಅವನು ದೇವರಿಗೆ ಸಲ್ಲಿಸದೆ, ಹೋದುದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು.


ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇಕೆಂತಲೂ, ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವಮಾನಪಡಿಸಬೇಕೆಂತಲೂ ಸೇನಾಧೀಶ್ವರನಾದ ಯೆಹೋವನೇ ಹೀಗೆ ಸಂಕಲ್ಪಿಸಿದ್ದಾನೆ.


ತರುವಾಯ ಯೆಹೋವನು ಮೋಶೆಯ ಸಂಗಡ ಮಾತನಾಡಿ, “ನೀನು ಆರೋನನಿಗೆ, ‘ನಿನ್ನ ಕೋಲನ್ನು ಚಾಚಿ ಭೂಮಿಯ ಧೂಳನ್ನು ಹೊಡೆ, ಆಗ ಐಗುಪ್ತ ದೇಶದ ಭೂಮಿಯಲ್ಲಿದ್ದ ಧೂಳೆಲ್ಲಾ ಹೇನುಗಳಾಗುವುದು’” ಎಂದನು.


ಹಾಗೂ ನನ್ನ ಮಗನು ನಿನ್ನ ದೇಶದಿಂದ ಹೊರಟು ನನ್ನನ್ನು ಆರಾಧಿಸುವುದಕ್ಕೆ ಅವನಿಗೆ ಅಪ್ಪಣೆಕೊಡಬೇಕು. ಅದಕ್ಕೆ ನೀನು ಒಪ್ಪದೇ ಹೋದರೆ, ನಾನು ನಿನಗಿರುವ ಚೊಚ್ಚಲಮಗನನ್ನು ಸಾಯಿಸುವೆನೆಂದು ಯೆಹೋವನು ಹೇಳುತ್ತಾನೆ’” ಎಂದು ತಿಳಿಸಬೇಕು.


ಬಳಿಕ ಮೋಶೆ ಮತ್ತು ಆರೋನರು ಫರೋಹನ ಸನ್ನಿಧಿಗೆ ಹೋಗಿ, “ಇಸ್ರಾಯೇಲರ ದೇವರಾದ ಯೆಹೋವನು, ನನ್ನ ಜನರು ನನಗಾಗಿ ಅರಣ್ಯದೊಳಗೆ ಜಾತ್ರೆ ನಡೆಸುವಂತೆ ಅವರಿಗೆ ಅಪ್ಪಣೆ ಕೊಡಬೇಕು ಎಂದು ಹೇಳಿದ್ದಾನೆ” ಅಂದರು.


ಅವರನ್ನು ನಾಶಮಾಡುವ ವಿಷದ ಹುಳಗಳನ್ನು, ಹಾಳುಮಾಡುವ ಕಪ್ಪೆಗಳನ್ನು ಕಳುಹಿಸಿಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು