ವಿಮೋಚನಕಾಂಡ 8:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆಗ ಆ ಮಂತ್ರಗಾರರು ಫರೋಹನಿಗೆ, “ಇದು ದೇವರ ಕೈಕೆಲಸವೇ ಸರಿ” ಎಂದು ಹೇಳಿದರು. ಆದರೂ ಫರೋಹನ ಹೃದಯವು ಕಠಿಣವಾಗಿತ್ತು. ಯೆಹೋವನು ಮೋಶೆಗೆ ಮುಂತಿಳಿಸಿದಂತೆಯೇ ಫರೋಹನು ಅವರ ಮಾತನ್ನು ಕೇಳದೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆಗ ಆ ಮಾಟಗಾರರು, “ಇದು ದೇವರ ಕೆಲಸವೇ ಸರಿ,” ಎಂದು ಫರೋಹನಿಗೆ ತಿಳಿಸಿದರು. ಆದರೂ ಫರೋಹನ ಹೃದಯ ಕಲ್ಲಾಗಿತ್ತು. ಸರ್ವೇಶ್ವರ ಮುಂತಿಳಿಸಿದಂತೆಯೇ ಅವನು ಅವರ ಮಾತನ್ನು ಕೇಳದೆಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆಗ ಆ ಜೋಯಿಸರು - ಇದು ದೇವರ ಕೈಕೆಲಸವೇ ಸರಿ ಎಂದು ಫರೋಹನಿಗೆ ಹೇಳಿದರು. ಆದರೂ ಫರೋಹನ ಹೃದಯವು ಕಠಿಣವಾಗಿತ್ತು; ಯೆಹೋವನು ಮೋಶೆಗೆ ಮುಂತಿಳಿಸಿದಂತೆಯೇ ಅವನು ಅವರ ಮಾತನ್ನು ಕೇಳದೆ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆದ್ದರಿಂದ ಮಾಂತ್ರಿಕರು ಫರೋಹನಿಗೆ, “ಇದು ದೇವರ ಕಾರ್ಯವೇ” ಎಂದು ಹೇಳಿದರು. ಆದರೆ ಫರೋಹನು ಅವರ ಮಾತಿಗೆ ಕಿವಿಗೊಡಲಿಲ್ಲ. ಯೆಹೋವನು ಹೇಳಿದಂತೆಯೇ ಇದಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆಗ ಮಂತ್ರಗಾರರು ಫರೋಹನಿಗೆ, “ಇದು ದೇವರ ಕೈಕೆಲಸವೇ ಸರಿ,” ಎಂದರು. ಆದರೆ ಯೆಹೋವ ದೇವರು ಹೇಳಿದಂತೆ ಫರೋಹನ ಹೃದಯ ಕಠಿಣವಾಯಿತು. ಆದ್ದರಿಂದ ಅವನು ಅವರ ಮಾತನ್ನು ಕೇಳಲಿಲ್ಲ. ಅಧ್ಯಾಯವನ್ನು ನೋಡಿ |