ವಿಮೋಚನಕಾಂಡ 8:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ತರುವಾಯ ಯೆಹೋವನು ಮೋಶೆಗೆ, “ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೋ. ಅವನು ಹೊರಗೆ ನದಿಯ ಬಳಿಗೆ ಬರುತ್ತಾನೆ. ನೀನು ಅವನಿಗೆ ಹೀಗೆಂದು ಹೇಳು, ‘ಯೆಹೋವನು ಆಜ್ಞಾಪಿಸುವುದೇನೆಂದರೆ, ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ತರುವಾಯ ಸರ್ವೇಶ್ವರ ಮೋಶೆಗೆ ಇಂತೆಂದರು: “ನೀನು ಬೆಳಿಗ್ಗೆ ಎದ್ದು ಫರೋಹನಿಗಾಗಿ ಕಾದು ನಿಂತುಕೊ. ಅವನು ನದಿಗೆ ಹೋಗಲು ಬರುತ್ತಾನೆ. ಅವನಿಗೆ ಹೀಗೆಂದು ಹೇಳು: ‘ಸರ್ವೇಶ್ವರ ನಿಮಗೆ ಆಜ್ಞಾಪಿಸುವ ಮಾತುಗಳಿವು - ನನ್ನನ್ನು ಆರಾಧಿಸಲು ನನ್ನ ಜನರಿಗೆ ಅಪ್ಪಣೆಕೊಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ತರುವಾಯ ಯೆಹೋವನು ಮೋಶೆಗೆ - ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೋ; ಅವನು ನದಿಗೆ ಹೋಗುತ್ತಾನಲ್ಲಾ. ನೀನು ಅವನಿಗೆ ಹೀಗನ್ನಬೇಕು - ಯೆಹೋವನು ಆಜ್ಞಾಪಿಸುವದೇನಂದರೆ, ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆಕೊಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಯೆಹೋವನು ಮೋಶೆಗೆ, “ಬೆಳಿಗ್ಗೆ ಎದ್ದು ಫರೋಹನ ಬಳಿಗೆ ಹೋಗು. ಫರೋಹನು ನದಿಗೆ ಹೋಗುವನು. ನೀನು ಅವನಿಗೆ, ‘ಯೆಹೋವನು ಹೀಗೆನ್ನುತ್ತಾನೆ: ನನ್ನ ಜನರು ಹೋಗಿ ನನ್ನನ್ನು ಆರಾಧಿಸಲಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆಗ ಯೆಹೋವ ದೇವರು ಮೋಶೆಗೆ, “ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೋ. ಅವನು ಹೊರಗೆ ನದಿಯ ಬಳಿಗೆ ಬರುತ್ತಾನೆ. ನೀನು ಅವನಿಗೆ ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಜನರು ನನ್ನನ್ನು ಆರಾಧಿಸುವಂತೆ ಅವರನ್ನು ಕಳುಹಿಸು. ಅಧ್ಯಾಯವನ್ನು ನೋಡಿ |