ವಿಮೋಚನಕಾಂಡ 8:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆದರೆ ಮೋಶೆ, “ಹಾಗೆ ಮಾಡುವುದು ಸರಿಯಲ್ಲ, ನಮ್ಮ ದೇವರಾದ ಯೆಹೋವನಿಗೆ ನಾವು ಯಜ್ಞವನ್ನರ್ಪಿಸುವುದು ಐಗುಪ್ತ್ಯರಿಗೆ ಅಸಹ್ಯವಾಗಿದೆ. ಐಗುಪ್ತ್ಯರಿಗೆ ಅಸಹ್ಯವಾಗಿರುವುದನ್ನು ಅವರ ಕಣ್ಣೆದುರಿಗೆ ಯಜ್ಞ ಅರ್ಪಿಸಿದರೆ ಅವರು ನಮ್ಮನ್ನು ಕಲ್ಲೆಸೆದು ಕೊಲ್ಲುವರಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಆದರೆ ಮೋಶೆ, “ಹಾಗೆ ಮಾಡುವುದು ಸರಿಯಲ್ಲ. ನಮ್ಮ ದೇವರಾದ ಸರ್ವೇಶ್ವರನಿಗೆ ನಾವು ಬಲಿಯಾಗಿ ಕೊಡುವ ಆಹುತಿ ಈಜಿಪ್ಟಿನವರಿಗೆ ನಿಷಿದ್ಧವಾದದ್ದು. ನಿಷಿದ್ಧವೆಂದು ಈಜಿಪ್ಟಿನವರು ತಿಳಿದುಕೊಂಡು ಇರುವ ಆಹುತಿಯನ್ನು ನಾವು ಅವರ ಕಣ್ಮುಂದೆಯೇ ಮಾಡಿದರೆ ಅವರು ನಮ್ಮನ್ನು ಕಲ್ಲೆಸೆದು ಕೊಲ್ಲುವರಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆದರೆ ಮೋಶೆ - ಹಾಗೆ ಮಾಡುವದು ಯುಕ್ತವಲ್ಲ. ನಮ್ಮ ದೇವರಾದ ಯೆಹೋವನಿಗೆ ನಾವು ಯಜ್ಞದಲ್ಲಿ ಕೊಡುವ ಆಹುತಿ ಐಗುಪ್ತ್ಯರಿಗೆ ನಿಷೇಧ. ನಿಷಿದ್ಧವೆಂದು ಐಗುಪ್ತ್ಯರು ತಿಳುಕೊಂಡಿರುವ ಆಹುತಿಯನ್ನು ನಾವು ಅವರ ಕಣ್ಣಿನ ಮುಂದೆ ಮಾಡಿದರೆ ಅವರು ನಮ್ಮನ್ನು ಕೊಲ್ಲುವದಕ್ಕೆ ಕಲ್ಲೆಸೆಯುವರಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಅದಕ್ಕೆ ಮೋಶೆ, “ಅದು ಸರಿಯಲ್ಲ. ನಮ್ಮ ದೇವರಾದ ಯೆಹೋವನಿಗೆ ನಾವು ಅರ್ಪಿಸುವ ಯಜ್ಞಗಳು ಈಜಿಪ್ಟಿನವರಿಗೆ ನಿಷಿದ್ಧವಾಗಿವೆ. ಹೀಗಿರಲು ಅವರ ಕಣ್ಣೆದುರಿಗೇ ಅಂಥ ಯಜ್ಞಗಳನ್ನು ಅರ್ಪಿಸಿದರೆ, ಅವರು ನಮ್ಮನ್ನು ಕಲ್ಲೆಸೆದು ಕೊಲ್ಲುವುದಿಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆದರೆ ಮೋಶೆಯು ಫರೋಹನಿಗೆ, “ಹಾಗೆ ಮಾಡುವುದು ಯುಕ್ತವಲ್ಲ. ಏಕೆಂದರೆ ನಮ್ಮ ಯೆಹೋವ ದೇವರಾದ ದೇವರಿಗೆ ಯಜ್ಞವನ್ನರ್ಪಿಸುವುದು ಈಜಿಪ್ಟಿನವರಿಗೆ ಅಸಹ್ಯವಾಗಿರುವುದು. ಈಜಿಪ್ಟಿನವರಿಗೆ ಅಸಹ್ಯವಾಗಿರುವುದನ್ನು ಅವರ ಕಣ್ಣೆದುರಿಗೆ ಅರ್ಪಿಸಿದರೆ, ಅವರು ನಮ್ಮ ಮೇಲೆ ಕಲ್ಲೆಸೆದಾರು. ಅಧ್ಯಾಯವನ್ನು ನೋಡಿ |