ವಿಮೋಚನಕಾಂಡ 8:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
5 ಯೆಹೋವನು ಪುನಃ ಮೋಶೆಯ ಸಂಗಡ ಮಾತನಾಡಿ, “ನೀನು ಆರೋನನಿಗೆ, ನಿನ್ನ ಕೋಲನ್ನು ಹಿಡಿದುಕೊಂಡು ಹೊಳೆ, ಕಾಲುವೆ, ಕೆರೆ ಇವುಗಳ ಮೇಲೆ ಅದನ್ನು ಹಿಡಿದುಕೊಂಡು ಕೈಯನ್ನು ಚಾಚು. ಆಗ ಐಗುಪ್ತ ದೇಶದ ಮೇಲೆಲ್ಲಾ ಕಪ್ಪೆಗಳು ಬರುವವು” ಎಂದು ಹೇಳಬೇಕು ಎಂದನು.
5 ಸರ್ವೇಶ್ವರ, ಮೋಶೆಯ ಸಂಗಡ ಮಾತಾಡಿ ಹೀಗೆಂದರು: “ನೀನು ಆರೋನನಿಗೆ, ‘ನಿನ್ನ ಕೋಲನ್ನು ಕಾಲುವೆ, ಹೊಳೆ, ಕೆರೆ ಇವುಗಳ ಮೇಲೆ ಚಾಚು. ಆಗ ಈಜಿಪ್ಟ್ ದೇಶದ ಮೇಲೆಲ್ಲಾ ಕಪ್ಪೆಗಳು ಏರಿಬರುವುವು, ಎಂದು ಹೇಳು.”
5 ಬಳಿಕ ಯೆಹೋವನು ಮೋಶೆಗೆ, “ನೀನು ಆರೋನನಿಗೆ, ‘ನಿನ್ನ ಕೋಲನ್ನು ಹಿಡಿದುಕೊಂಡು ಹೊಳೆಗಳ, ಕಾಲುವೆಗಳ ಮತ್ತು ಕೆರೆಗಳ ಮೇಲೆ ಕೈಚಾಚು’ ಎಂದು ಹೇಳು. ಆಗ ಈಜಿಪ್ಟ್ ದೇಶದ ಮೇಲೆ ಕಪ್ಪೆಗಳು ಹೊರಬರುವವು” ಎಂದು ಹೇಳಿದನು.
5 ಅನಂತರ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ, “ನೀನು ಆರೋನನಿಗೆ, ‘ನೀನು ಕೋಲನ್ನು ಹಿಡಿದುಕೊಂಡು ನದಿ, ಕಾಲುವೆ, ಕೆರೆಗಳ ಮೇಲೆಲ್ಲಾ ನಿನ್ನ ಕೈಚಾಚಿ ಈಜಿಪ್ಟ್ ದೇಶದ ಮೇಲೆಲ್ಲಾ ಕಪ್ಪೆಗಳು ಬರುವಂತೆ ಮಾಡು,’ ಎಂದು ಹೇಳಬೇಕು,” ಎಂದರು.
ಯೆಹೋವನು ಮೋಶೆಯ ಸಂಗಡ ಮಾತನಾಡಿ, “ನೀನು ಆರೋನನಿಗೆ ‘ನಿನ್ನ ಕೋಲನ್ನು ತೆಗೆದುಕೊಂಡು ಐಗುಪ್ತದೇಶದಲ್ಲಿರುವ ಹೊಳೆ, ಕಾಲುವೆ, ಕೆರೆ, ಕೊಳ ಮೊದಲಾದ ನೀರಿರುವ ಎಲ್ಲಾ ಸ್ಥಳಗಳ ಮೇಲೆ ಅದನ್ನು ಚಾಚು’ ಎಂದು ಹೇಳಬೇಕು. ಅವನು ಚಾಚುವಾಗ ಆ ನೀರೆಲ್ಲಾ ರಕ್ತವಾಗುವುದು. ಐಗುಪ್ತದೇಶದಲ್ಲೆಲ್ಲಾ ಮರದ ಪಾತ್ರೆಗಳಲ್ಲಿಯೂ, ಕಲ್ಲಿನ ಪಾತ್ರೆಗಳಲ್ಲಿಯೂ ಇರುವ ನೀರು ರಕ್ತವಾಗುವುದು” ಅಂದನು.