Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 9:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನೀನು ನನ್ನ ಜನರನ್ನು ಇನ್ನೂ ಹೋಗಗೊಡಿಸದೆ ಅವರ ಮುಂದೆ, ಅಡ್ಡಿ ಆತಂಕಗಳನ್ನು ಒಡ್ಡುತ್ತಿರುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನೀನು ನನ್ನ ಜನರನ್ನು ಇನ್ನೂ ಹೋಗಗೊಡಿಸದೆ ಅವರ ಮುಂದೆ ಅಡ್ಡಿ ಆತಂಕಗಳನ್ನು ಒಡ್ಡುತ್ತಿರುವೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನೀನು ನನ್ನ ಜನರನ್ನು ಇನ್ನೂ ಹೋಗಗೊಡಿಸದೆ ನಿನ್ನನ್ನು ಅವರ ಮುಂದೆ ಆಟಂಕವಾಗಿ ಒಡ್ಡುತ್ತೀಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೂ ನೀನು ನನ್ನ ಜನರಿಗೆ ವಿರುದ್ಧವಾಗಿರುವೆ; ಅವರಿಗೆ ಸ್ವತಂತ್ರವನ್ನು ಕೊಡದಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನೀನು ಇನ್ನೂ ಅವರನ್ನು ಕಳುಹಿಸದೆ ನನ್ನ ಜನರಿಗೆ ವಿರೋಧವಾಗಿ ನಿನ್ನನ್ನು ನೀನೇ ಹೆಚ್ಚಿಸಿಕೊಳ್ಳುತ್ತೀಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 9:17
14 ತಿಳಿವುಗಳ ಹೋಲಿಕೆ  

ಕರ್ತನಿಗೆ ಕೋಪವನ್ನುಂಟುಮಾಡಿ ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೋ?


ಆ ಘನತೆಯನ್ನು ಅವನು ದೇವರಿಗೆ ಸಲ್ಲಿಸದೆ, ಹೋದುದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು.


ಅಯ್ಯೋ, ತನ್ನನ್ನು ರೂಪಿಸಿದಾತನ ಸಂಗಡ ವ್ಯಾಜ್ಯವಾಡುವವನ ಗತಿ ಏನು! ಮಣ್ಣಿನ ಮಡಿಕೆಗಳಲ್ಲಿ ಅವನೂ ಒಂದು ಮಡಿಕೆಯಲ್ಲವೆ! ಮಣ್ಣು ಕುಂಬಾರನಿಗೆ, ‘ನೀನು ಏನು ಮಾಡುತ್ತೀ?’ ಎಂದು ಕೇಳುವುದುಂಟೇ? ಅಥವಾ ನಿನ್ನ ಕಾರ್ಯವು, ‘ಅವನಿಗೆ ಕೈಯಿಲ್ಲ’ ಅಂದೀತೇ?


ಏಕೆಂದರೆ ನೀನು ನನ್ನ ವಿರುದ್ಧ ಕೋಪಗೊಂಡಿರುವುದೂ, ಅಸಮಾಧಾನವಾಗಿರುವುದೂ ನನಗೆ ತಿಳಿದುಬಂತು. ಆದುದರಿಂದ ನಿನಗೆ ಮೂಗುದಾರವನ್ನೂ, ಕಡಿವಾಣವನ್ನೂ ಹಾಕಿ ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು” ಎಂಬುದಾಗಿ ಹೇಳಿದ್ದಾನೆ.


ಯೆಹೋವನೇ, ನೀನು ಕೈಯೆತ್ತಿದ್ದರೂ ಅವರು ಲಕ್ಷಿಸರು. ಆದರೆ ನಿನ್ನ ಸ್ವಜನರ ಅಭಿಮಾನವನ್ನು ನೋಡಿ ನಾಚಿಕೆಪಡಲಿ; ಹೌದು, ಆ ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವುದು.


ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೇ? ಗರಗಸವು ಕತ್ತರಿಸುವವನಿಗೆ ಪ್ರತಿಯಾಗಿ ತನ್ನನ್ನು ಹೆಚ್ಚಿಸಿಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತಾಯಿತು, ಮರಕ್ಕಿಂತ ಶ್ರೇಷ್ಠನಾಗಿರುವ ಮನುಷ್ಯನನ್ನು ದೊಣ್ಣೆಯು ಎತ್ತಿಕೊಂಡ ಹಾಗಾಯಿತು.


ನಿನ್ನ ಕೈಯೂ, ದೇವರ ಕೈಯೂ ಸಮವೋ? ದೇವರ ಧ್ವನಿಯಂತೆ ಗುಡುಗಬಲ್ಲಿಯಾ?


ದೇವರ ಹೃದಯವು ವಿವೇಕವುಳ್ಳದ್ದು, ಆತನ ಶಕ್ತಿಯು ಪ್ರಬಲವಾದದ್ದು. ಆತನ ವಿರುದ್ಧವಾಗಿ ಮನಸ್ಸು ಕಠಿಣಮಾಡಿಕೊಂಡವನು ಸಾರ್ಥಕನಾದದ್ದುಂಟೇ?


ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ, ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೇ ಉಳಿಸಿರುವೆನು.


ಹಾಗಾದರೆ, ನಾಳೆ ಇಷ್ಟು ಹೊತ್ತಿಗೆ ವಿಪರೀತವಾದ ಆನೆಕಲ್ಲಿನ ಮಳೆ ಬೀಳುವಂತೆ ಮಾಡುವೆನು. ಐಗುಪ್ತ ರಾಜ್ಯವು ಸ್ಥಾಪಿತವಾದ ದಿನ ಮೊದಲುಗೊಂಡು ಇಂದಿನವರೆಗೂ ಅಂಥ ಕಲ್ಲಿನ ಮಳೆ ಬಿದ್ದಿರುವುದಿಲ್ಲ.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ. “ನೀನು ನಿನ್ನನ್ನು ದೇವರಿಗೆ ಸಮಾನವಾಗಿಸಿಕೊಂಡಿರುವೆ.


“ಹೀಗೆ ಅವನ ಹೃದಯವು ಉಬ್ಬಿ, ಅವನ ಸ್ವಭಾವವು ಕಠಿಣವಾಗಿ ಅವನಿಗೆ ಸೊಕ್ಕೇರಲು ಅವನನ್ನು ರಾಜಾಸನದಿಂದ ತಳ್ಳಿ, ಮಾನವನ್ನು ತೆಗೆದುಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು