Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 9:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆದಕಾರಣ ನೀನು ಆಳುಗಳನ್ನು ಕಳುಹಿಸಿ ನಿನ್ನ ಪಶುಗಳನ್ನೂ, ನಿನಗೆ ಹೊಲದಲ್ಲಿರುವುದೆಲ್ಲವನ್ನೂ ಬೇಗ ಭದ್ರಪಡಿಸು. ಮನೆಯೊಳಗೆ ಬಾರದೆ ಬಯಲಿನಲ್ಲೇ ಇರುವ ಎಲ್ಲಾ ಮನುಷ್ಯರೂ, ಪಶುಗಳೂ ಆ ಕಲ್ಲಿನ ಮಳೆಯ ಹೊಡೆತದಿಂದ ಸಾಯುವರು’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆದಕಾರಣ ಆಳುಗಳನ್ನು ಕಳಿಸಿ ನಿನ್ನ ಪಶುಪ್ರಾಣಿಗಳನ್ನೂ ನಿನ್ನ ಹೊಲಗದ್ದೆಯಲ್ಲಿ ಇರುವದೆಲ್ಲವನ್ನು ಭದ್ರಪಡಿಸು. ಮನೆಗೆ ಸೇರದೆ ಹೊರಗೆ ಇರುವ ಎಲ್ಲ ನರಮಾನವರೂ, ಪಶುಪ್ರಾಣಿಗಳೂ ಆ ಕಲ್ಲಿನ ಮಳೆಯ ಹೊಡೆತದಿಂದ ಸಾಯುವರು'.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆದ ಕಾರಣ ನೀನು ಆಳುಗಳನ್ನು ಕಳುಹಿಸಿ ನಿನ್ನ ಪಶುಗಳನ್ನೂ ನಿನಗೆ ಅಡವಿಯಲ್ಲಿರುವದೆಲ್ಲವನ್ನೂ ಬೇಗ ಭದ್ರಮಾಡಿಸು. ಮನೆಯೊಳಗೆ ಬಾರದೆ ಬೈಲಿನಲ್ಲೇ ಇರುವ ಎಲ್ಲಾ ಮನುಷ್ಯರೂ ಪಶುಗಳೂ ಆ ಕಲ್ಲಿನ ಮಳೆಯ ಹೊಡೆತದಿಂದ ಸಾಯುವರು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಈಗ ನೀನು ನಿನ್ನ ಪಶುಗಳನ್ನೂ ನಿನ್ನ ಹೊಲದಲ್ಲಿರುವ ನಿನ್ನ ಪ್ರತಿಯೊಂದನ್ನೂ ಸುರಕ್ಷಿತವಾದ ಸ್ಥಳದಲ್ಲಿ ಇರಿಸಬೇಕು. ಮನೆಯೊಳಗಿರದೆ ಹೊಲದಲ್ಲಿರುವ ಮನುಷ್ಯರೂ ಪಶುಗಳೂ ಆಲಿಕಲ್ಲಿನ ಮಳೆಗೆ ಸಿಕ್ಕಿಕೊಂಡು ಸಾಯುವರು’ ಎಂದು ಹೇಳಬೇಕು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಹೀಗಿರುವುದರಿಂದ ಯಾರನ್ನಾದರೂ ಕಳುಹಿಸಿ ನಿನ್ನ ಪಶುಗಳನ್ನೂ, ಹೊಲದಲ್ಲಿ ನಿನಗಿರುವವುಗಳನ್ನೂ ಭದ್ರಪಡಿಸು. ಏಕೆಂದರೆ ಮನೆಗಳಿಗೆ ಬಾರದೆ ಹೊಲದಲ್ಲಿ ಸಿಕ್ಕುವ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಆಲಿಕಲ್ಲಿನ ಮಳೆಯು ಸುರಿದು ಕೊಲ್ಲುವುದು,’ ಎಂದು ಹೇಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 9:19
5 ತಿಳಿವುಗಳ ಹೋಲಿಕೆ  

ಯೆಹೋವನೇ, ನಾನು ನಿನ್ನ ಸುದ್ದಿಯನ್ನು ಕೇಳಿ ಹೆದರಿದ್ದೇನೆ; ಯೆಹೋವನೇ, ಯುಗದ ಮಧ್ಯದಲ್ಲಿ ನಿನ್ನ ರಕ್ಷಣಾಕಾರ್ಯವನ್ನು ಪುನಃ ಮಾಡು, ಯುಗದ ಮಧ್ಯದಲ್ಲಿ ಅದನ್ನು ಪ್ರಸಿದ್ಧಿಪಡಿಸು; ನೀನು ರೋಷಗೊಂಡಿದ್ದರೂ ಕರುಣೆಯನ್ನು ಚಿತ್ತಕ್ಕೆ ತಂದುಕೋ.


ಮರುದಿನ ಯೆಹೋವನು ಆ ಕಾರ್ಯವುಂಟಾಗುವಂತೆ ಮಾಡಿದನು. ಐಗುಪ್ತ್ಯರ ಪಶುಗಳೆಲ್ಲಾ ಸತ್ತುಹೋದವು. ಇಸ್ರಾಯೇಲರ ಪಶುಗಳಲ್ಲಿ ಒಂದೂ ಸಾಯಲಿಲ್ಲ.


ಆ ಮಳೆಯಿಂದ ಐಗುಪ್ತ ದೇಶದ ಎಲ್ಲಾ ಕಡೆಗಳಲ್ಲಿದ್ದ ಮನುಷ್ಯರು, ಪಶುಗಳು, ಬಯಲಿನಲ್ಲಿದ್ದ ಎಲ್ಲವೂ ನಾಶವಾದವು. ಆನೆಕಲ್ಲಿನ ಮಳೆಯಿಂದ ಹೊಲಗಳಲ್ಲಿದ್ದ ಪೈರುಗಳು ಹಾಳಾದವು. ಹೊಲಗಳಲ್ಲಿದ್ದ ಮರಗಳು ಮುರಿದುಹೋದವು.


ಅವರ ದನಗಳನ್ನು ಕಲ್ಮಳೆಗೂ, ಕುರಿಹಿಂಡುಗಳನ್ನು ಸಿಡಿಲಿಗೂ ಒಪ್ಪಿಸಿದನು.


ಏಕೆಂದರೆ ಅವನು ಕೊಂಬಿನ ಧ್ವನಿಯನ್ನು ಕೇಳಿಯೂ ಎಚ್ಚರಗೊಳ್ಳಲಿಲ್ಲ; ತನ್ನ ಮರಣಕ್ಕೆ ತಾನೇ ಕಾರಣನಾಗುವನು; ಎಚ್ಚರಗೊಂಡಿದ್ದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು