Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 9:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಮೋಶೆಯು ತನ್ನ ಕೋಲನ್ನು ಆಕಾಶದ ಕಡೆಗೆ ಚಾಚಿದಾಗ ಯೆಹೋವನು ಗುಡುಗನ್ನು, ಆನೆಕಲ್ಲಿನ ಮಳೆಯನ್ನು ಕಳುಹಿಸಿದನು. ಸಿಡಿಲುಗಳು ನೆಲಕ್ಕೆ ಅಪ್ಪಳಿಸಿದವು. ಯೆಹೋವನು ಐಗುಪ್ತ ದೇಶದ ಮೇಲೆ ಆನೆಕಲ್ಲಿನ ಮಳೆಯನ್ನು ಸುರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅಂತೆಯೇ ಮೋಶೆ ತನ್ನ ಕೋಲನ್ನು ಆಕಾಶದ ಕಡೆಗೆ ಚಾಚಿದಾಗ ಸರ್ವೇಶ್ವರ ಗುಡುಗನ್ನೂ ಆನೆಕಲ್ಲಿನ ಮಳೆಯನ್ನೂ ಕಳುಹಿಸಿದರು. ಸಿಡಿಲುಗಳು ನೆಲಕ್ಕೆ ಅಪ್ಪಳಿಸಿದವು. ಈಜಿಪ್ಟ್ ದೇಶದ ಮೇಲೆ ಆನೆಕಲ್ಲಿನ ಮಳೆಯನ್ನು ಸುರಿಸಿದರು ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಮೋಶೆಯು ತನ್ನ ಕೋಲನ್ನು ಆಕಾಶಕ್ಕೆ ಚಾಚಿದಾಗ ಯೆಹೋವನು ಗುಡುಗನ್ನೂ ಆನೆಕಲ್ಲಿನ ಮಳೆಯನ್ನೂ ಉಂಟುಮಾಡಿದನು. ಸಿಡಿಲುಗಳು ನೆಲಕ್ಕೆ ಬಿದ್ದವು. ಯೆಹೋವನು ಐಗುಪ್ತದೇಶದ ಮೇಲೆ ಕಲ್ಲಿನ ಮಳೆಯನ್ನು ಸುರಿಸಿದನು. ಕಲ್ಲಿನ ಮಳೆಯು ಬಹು ಬಲವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದ್ದರಿಂದ ಮೋಶೆ ತನ್ನ ಕೋಲನ್ನು ಆಕಾಶದ ಕಡೆಗೆ ಚಾಚಿದನು. ಕೂಡಲೇ ಯೆಹೋವನು, ಗುಡುಗು ಮಿಂಚುಗಳಿಂದ ಕೂಡಿದ ಆಲಿಕಲ್ಲಿನ ಮಳೆಯನ್ನು ಈಜಿಪ್ಟಿನಲ್ಲೆಲ್ಲಾ ಸುರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಮೋಶೆಯು ಆಕಾಶದ ಕಡೆಗೆ ತನ್ನ ಕೋಲನ್ನು ಚಾಚಿದನು. ಆಗ ಯೆಹೋವ ದೇವರು ಗುಡುಗುಗಳನ್ನೂ ಆಲಿಕಲ್ಲಿನ ಮಳೆಯನ್ನೂ ಸುರಿಸಿದರು. ಸಿಡಿಲು ನೆಲಕ್ಕೆ ಬಡಿಯಿತು. ಸಿಡಿಲಿನ ಆರ್ಭಟದೊಂದಿಗೆ ಯೆಹೋವ ದೇವರು ಈಜಿಪ್ಟ್ ದೇಶದ ಮೇಲೆ ಆಲಿಕಲ್ಲಿನ ಮಳೆಯನ್ನು ಸುರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 9:23
22 ತಿಳಿವುಗಳ ಹೋಲಿಕೆ  

ಯೆಹೋವನು ಆಕಾಶದಲ್ಲಿ ಗುಡುಗಿದನು; ಪರಾತ್ಪರನಾದ ದೇವರು ಧ್ವನಿಗೊಟ್ಟನು. ಕಲ್ಮಳೆಯೂ, ಉರಿಗೆಂಡಗಳೂ ಹೊರಟವು.


ಅವರು ಇಸ್ರಾಯೇಲ್ಯರಿಗೆ ಬೆಂಗೊಟ್ಟು ಬೇತ್‍ಹೋರೋನಿನ ಇಳಿಜಾರಿನಲ್ಲಿ ಓಡುತ್ತಾ ಅಜೇಕವನ್ನು ತಲುಪುವವರೆಗೂ ಯೆಹೋವನು ಅವರ ಮೇಲೆ ಆಕಾಶದಿಂದ ದೊಡ್ಡ ಆಲಿಕಲ್ಲಿನ ಮಳೆಯನ್ನು ಸುರಿಸಿದನು. ಈ ಕಾರಣದಿಂದ ಅನೇಕರು ಸತ್ತರು ಇಸ್ರಾಯೇಲ್ಯರ ಕತ್ತಿಯಿಂದ ಸಂಹಾರವಾದವರಿಗಿಂತ ಆಲಿಕಲ್ಲಿನ ಮಳೆಯಿಂದ ನಾಶವಾದವರೇ ಹೆಚ್ಚು ಮಂದಿಯಾಗಿದ್ದರು.


ನಾನು ಗೋಗನ ಸಂಗಡ ವ್ಯಾಜ್ಯಮಾಡುತ್ತಾ ಅವನನ್ನು ವ್ಯಾಧಿಗೂ, ಸಾವಿಗೂ ಗುರಿಮಾಡಿ, ನಾನು ಅವನ ಮೇಲೆಯೂ, ಅವನ ದಂಡುಗಳ ಮೇಲೆಯೂ, ಅವನೊಂದಿಗಿರುವ ಅನೇಕ ಜನಾಂಗಗಳ ಮೇಲೆಯೂ ವಿಪರೀತ ಮಳೆ, ದೊಡ್ಡ ಆನೆಕಲ್ಲು, ಬೆಂಕಿ, ಗಂಧಕ, ಇವುಗಳನ್ನು ಸುರಿಸುವೆನು.


ಆಗ ಯೆಹೋವನು ತನ್ನ ಗಂಭೀರವಾದ ಧ್ವನಿಯನ್ನು ಕೇಳಮಾಡಿ, ತೀವ್ರಕೋಪ, ಕಬಳಿಸುವ ಅಗ್ನಿಜ್ವಾಲೆ, ಬಿರುಗಾಳಿ, ಅತಿವೃಷ್ಟಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿಸುವನು.


ಮೊದಲನೆಯ ದೇವದೂತನು ತನ್ನ ತುತ್ತೂರಿಯನ್ನೂದಲು ರಕ್ತ ಮಿಶ್ರಿತವಾದ ಆಲಿಕಲ್ಲಿನ ಮಳೆಯೂ ಬೆಂಕಿಯೂ ಭೂಮಿಯ ಮೇಲೆ ಸುರಿಯಿತು. ಭೂಮಿಯ ಮೂರರಲ್ಲಿ ಒಂದು ಭಾಗವು ಸುಟ್ಟು ಹೋಯಿತು. ಮರಗಳಲ್ಲಿ ಮೂರರಲ್ಲೊಂದು ಭಾಗ ಸುಟ್ಟು ಹೋದವು. ಹಸಿರು ಹುಲ್ಲೆಲ್ಲಾ ಸುಟ್ಟು ಹೋಯಿತು.


ಬೆಂಕಿ, ಕಲ್ಮಳೆ, ಹಿಮ, ಹಬೆ ಇವುಗಳು, ಆತನ ಅಪ್ಪಣೆಯನ್ನು ನೆರವೇರಿಸುವ ಬಿರುಗಾಳಿಯು,


ಬಿರುಗಾಳಿಯಲ್ಲಿ ನಿನ್ನ ಗುಡುಗು ಕೇಳಿಸಿತು; ಮಿಂಚುಗಳು ಭೂಮಂಡಲವನ್ನು ಬೆಳಗಿಸಿದವು; ಭೂಮಿಯು ಅಲ್ಲಾಡಿ ಕಂಪಿಸಿತು.


ಯೆಹೋವನ ಮಹಾಧ್ವನಿಯು ಮೇಘಮಂಡಲದಲ್ಲಿ ಕೇಳಿಸುತ್ತದೆ; ಪ್ರಭಾವಸ್ವರೂಪನಾದ ದೇವರು ಗುಡುಗುತ್ತಾನೆ; ಯೆಹೋವನು ಆಕಾಶದ ಜಲರಾಶಿಗಳ ಮೇಲೆ ಇದ್ದಾನೆ.


ಮತ್ತು ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಆಲಿಕಲ್ಲಿನ ಮಳೆ ಸುರಿಯಿತು. ಒಂದೊಂದು ಅಲಿಕಲ್ಲು ಸುಮಾರು ನಲ್ವತ್ತು ಕಿಲೊಗ್ರಾಮಿನಷ್ಟು ತೂಕವಾಗಿತ್ತು. ಆ ಆಲಿಕಲ್ಲಿನ ಮಳೆಯ ಉಪದ್ರವವು ಬಹಳ ವಿಪರೀತವಾದ್ದರಿಂದ ಆ ಮಳೆಯಲ್ಲಿ ಸಿಕ್ಕಿಕೊಂಡ ಮನುಷ್ಯರು ದೇವರನ್ನು ದೂಷಿಸಿದರು.


ಆ ಗುಡುಗು, ಮಿಂಚು, ತುತ್ತೂರಿಯ ಧ್ವನಿ, ಹಾಗೂ ಬೆಟ್ಟದಿಂದ ಹೊರಬರುತ್ತಿದ್ದ ಹೊಗೆಯನ್ನು ಜನರೆಲ್ಲರೂ ನೋಡಿ, ನಡುಗುತ್ತಾ ದೂರದಲ್ಲಿ ನಿಂತುಕೊಂಡರು.


ಮೂರನೆಯ ದಿನದಲ್ಲಿ ಸೂರ್ಯೋದಯವಾಗಲು ಆ ಬೆಟ್ಟದ ಮೇಲೆ ಗುಡುಗು, ಮಿಂಚೂ, ಕಾರ್ಮುಗಿಲೂ, ತುತ್ತೂರಿಯ ಮಹಾಧ್ವನಿಯೂ ಉಂಟಾಗಲು ಪಾಳೆಯಲ್ಲಿದ್ದ ಜನರೆಲ್ಲರೂ ನಡುಗಿದರು.


ಆಗ ಮಿಂಚುಗಳೂ, ನಾದಗಳೂ, ಗುಡುಗುಗಳೂ ಉಂಟಾದವು ಇದಲ್ಲದೆ ಮಹಾ ಭೂಕಂಪವಾಯಿತು. ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ದೊಡ್ಡ ಭೂಕಂಪವಾಗಿರಲಿಲ್ಲ.


ಆಗ ಯೆಹೋವನು ಸೊದೋಮ್ ಗೊಮೋರಗಳ ಮೇಲೆ ಆಕಾಶದಿಂದ ಅಗ್ನಿಗಂಧಕಗಳನ್ನು ಸುರಿಸಿ


ಹಾಗಾದರೆ, ನಾಳೆ ಇಷ್ಟು ಹೊತ್ತಿಗೆ ವಿಪರೀತವಾದ ಆನೆಕಲ್ಲಿನ ಮಳೆ ಬೀಳುವಂತೆ ಮಾಡುವೆನು. ಐಗುಪ್ತ ರಾಜ್ಯವು ಸ್ಥಾಪಿತವಾದ ದಿನ ಮೊದಲುಗೊಂಡು ಇಂದಿನವರೆಗೂ ಅಂಥ ಕಲ್ಲಿನ ಮಳೆ ಬಿದ್ದಿರುವುದಿಲ್ಲ.


ಆನೆಕಲ್ಲಿನ ಮಳೆಯು ಬಹು ರಭಸವಾಗಿತ್ತು. ಅದರೊಂದಿಗೆ ಮಿಂಚು ಫಳಫಳನೆ ಹೊಳೆಯುತಿತ್ತು. ಐಗುಪ್ತ್ಯದವರು ಒಂದು ರಾಷ್ಟ್ರವಾದಂದಿನಿಂದ ಆ ದೇಶದಲ್ಲಿ ಅಂಥ ಘೋರವಾದ ಆನೆಕಲ್ಲಿನ ಮಳೆ ಆಗಿರಲಿಲ್ಲ.


ಆತನು ದಂಡನೆಗಾಗಲಿ, ತನ್ನ ಭೂಮಿಯ ಹಿತಕ್ಕಾಗಲಿ, ಕೃಪೆತೋರುವುದಕ್ಕಾಗಲಿ ಹಾಗೂ ಒಡಂಬಡಿಕೆಯ ನಂಬಿಗಸ್ತಿಕೆಯಿಂದ ಆ ಮೇಘಗಳನ್ನು ಬರಮಾಡುವನು.


ರೊಟ್ಟಿ ತುಂಡುಗಳಂತಿರುವ ಆನೆಕಲ್ಲುಗಳನ್ನು ಸುರಿಸುತ್ತಾನೆ, ಆತನು ಚಳಿಯನ್ನು ಬರಮಾಡಲು ಅದನ್ನು ಸಹಿಸುವವರು ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು