ವಿಮೋಚನಕಾಂಡ 9:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಅದಕ್ಕೆ ಮೋಶೆ, “ನಾನು ಈ ಪಟ್ಟಣದಿಂದಾಚೆಗೆ ಹೋದ ಕೂಡಲೇ ಕೈಯೆತ್ತಿ ಯೆಹೋವನನ್ನು ಪ್ರಾರ್ಥಿಸುವೆನು. ಆಗ ಗುಡುಗು ಮತ್ತು ಆನೆಕಲ್ಲಿನ ಮಳೆಯು ನಿಂತುಹೋಗುವದು. ಇದರಿಂದ ಸಮಸ್ತ ಭೂಲೋಕವು ಯೆಹೋವನ ಅಧೀನದಲ್ಲಿದೆ ಎಂದು ನೀನು ತಿಳಿದುಕೊಳ್ಳುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಅದಕ್ಕೆ ಮೋಶೆ, “ನಾನು ಈ ಪಟ್ಟಣದಿಂದಾಚೆಗೆ ಹೋದ ಕೂಡಲೆ ಸರ್ವೇಶ್ವರ ಸ್ವಾಮಿಯ ಕಡೆಗೆ ಕೈಯೆತ್ತಿ ಪ್ರಾರ್ಥಿಸುವೆನು. ಆಗ ಗುಡುಗು ಮತ್ತು ಕಲ್ಲಿನ ಮಳೆಯು ನಿಂತುಹೋಗುವುವು. ಇದರಿಂದ ಇಡೀ ಲೋಕವು ಸರ್ವೇಶ್ವರನ ಅಧೀನದಲ್ಲಿದೆ ಎಂದು ತಾವು ತಿಳಿದುಕೊಳ್ಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಅದಕ್ಕೆ ಮೋಶೆ - ನಾನು ಪಟ್ಟಣದಿಂದಾಚೆಗೆ ಹೋದಕೂಡಲೇ ಕೈ ಎತ್ತಿ ಯೆಹೋವನನ್ನು ಪ್ರಾರ್ಥಿಸುವೆನು; ಆಗ ಗುಡುಗೂ ಕಲ್ಲಿನ ಮಳೆಯೂ ನಿಂತುಹೋಗುವವು. ಇದರಿಂದ ಸಮಸ್ತ ಭೂಲೋಕವು ಯೆಹೋವನ ಅಧಿಕಾರದೊಳಗೆ ಇದೆ ಎಂದು ನೀನು ತಿಳಿದುಕೊಳ್ಳುವಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಮೋಶೆಯು ಫರೋಹನಿಗೆ, “ನಾನು ಪಟ್ಟಣದಿಂದಾಚೆಗೆ ಹೋದಕೂಡಲೇ ಕೈಯೆತ್ತಿ ಯೆಹೋವನಲ್ಲಿ ಪ್ರಾರ್ಥಿಸುವೆನು, ಆಗ ಗುಡುಗೂ ಆಲಿಕಲ್ಲಿನ ಮಳೆಯೂ ನಿಂತುಹೋಗುವವು. ಭೂಲೋಕವು ಯೆಹೋವನ ಅಧೀನದಲ್ಲಿದೆಯೆಂದು ಆಗ ನೀನು ತಿಳಿದುಕೊಳ್ಳುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಮೋಶೆಯು ಅವನಿಗೆ, “ನಾನು ಪಟ್ಟಣವನ್ನು ಬಿಟ್ಟುಹೋದ ಕೂಡಲೇ, ಯೆಹೋವ ದೇವರ ಕಡೆಗೆ ನನ್ನ ಕೈಗಳನ್ನು ಚಾಚಿ ಪ್ರಾರ್ಥಿಸುವೆನು. ಭೂಮಿಯು ಯೆಹೋವ ದೇವರದೇ ಎಂದು ನೀನು ತಿಳಿದುಕೊಳ್ಳುವಂತೆ ಗುಡುಗುಗಳು ನಿಂತುಹೋಗುವುವು. ಆಲಿಕಲ್ಲಿನ ಮಳೆಯು ಇನ್ನು ಇರದು. ಅಧ್ಯಾಯವನ್ನು ನೋಡಿ |