Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಗ್ಗಾಯ 1:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅರಸನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಆರನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೂ, ಯೆಹೋಚಾದಾಕನಿಗೆ ಜನಿಸಿದ ಮಹಾಯಾಜಕನಾದ ಯೆಹೋಶುವನಿಗೂ ಪ್ರವಾದಿಯಾದ ಹಗ್ಗಾಯನ ಮೂಲಕ ಹೇಳಿಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪರ್ಷಿಯಾದ ಚಕ್ರವರ್ತಿಯಾದ ಡೇರಿಯಸ್ ಅವನ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳ ಮೊದಲನೆಯ ದಿನದಂದು ಪ್ರವಾದಿ ಹಗ್ಗಾಯನ ಮುಖಾಂತರ ಸರ್ವೇಶ್ವರಸ್ವಾಮಿ ನೀಡಿದ ದೈವೋಕ್ತಿ: ಅದು ಶೆಯಲ್ತಿಯೇಲನ ಮಗನೂ ಜುದೇಯ ನಾಡಿನ ದೇಶಾಧಿಪತಿಯೂ ಆದ ಜೆರುಬ್ಬಾಬೆಲನನ್ನು ಮತ್ತು ಯೆಹೋಚಾದಾಕನ ಮಗನೂ ಮಹಾಯಾಜಕನೂ ಆದ ಯೆಹೋಶುವನನ್ನು ಉದ್ದೇಶಿಸಿ ಕೊಡಲಾದ ಸಂದೇಶವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅರಸನಾದ ದಾರ್ಯಾವೆಷನ ಆಳಿಕೆಯ ಎರಡನೆಯ ವರುಷದ ಆರನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೂ ಯೆಹೋಚಾದಾಕನಿಗೆ ಜನಿಸಿದ ಮಹಾಯಾಜಕನಾದ ಯೆಹೋಶುವನಿಗೂ ಪ್ರವಾದಿಯಾದ ಹಗ್ಗಾಯನ ಮೂಲಕ ಹೇಳಿಕಳುಹಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಪರ್ಶಿಯಾದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳಿನ ಮೊದಲನೇ ದಿನದಲ್ಲಿ ಹಗ್ಗಾಯನಿಗೆ ಯೆಹೋವನಿಂದ ಸಂದೇಶವು ಬಂದಿತು. ಈ ಸಂದೇಶವು ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನಿಗೋಸ್ಕರ, ಯೆಹೋಚಾದಾಕನ ಮಗನಾದ ಯೆಹೋಶುವನಿಗೋಸ್ಕರ ಬಂದಿತು. ಜೆರುಬ್ಬಾಬೆಲನು ಯೆಹೂದ ಪ್ರಾಂತ್ಯದ ರಾಜ್ಯಪಾಲನಾಗಿದ್ದನು; ಯೆಹೋಶುವನು ಪ್ರಧಾನ ಯಾಜಕನಾಗಿದ್ದನು. ಸಂದೇಶವು ಇದೇ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪಾರಸಿಯ ಅರಸ ದಾರ್ಯಾವೆಷನ ಆಳಿಕೆಯ ಎರಡನೆಯ ವರ್ಷದಲ್ಲಿ, ಆರನೇ ತಿಂಗಳಿನ ಮೊದಲನೇ ದಿವಸದಲ್ಲಿ, ಯೆಹೋವ ದೇವರ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮುಖಾಂತರ, ಶೆಯಲ್ತಿಯೇಲನ ಮಗನು ಮತ್ತು ಯೆಹೂದದ ಅಧಿಪತಿ ಆದ ಜೆರುಬ್ಬಾಬೆಲನಿಗೂ ಯೆಹೋಚಾದಾಕನ ಮಗನು ಮತ್ತು ಮಹಾಯಾಜಕನಾದ ಯೆಹೋಶುವನಿಗೂ ಬಂದಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಗ್ಗಾಯ 1:1
41 ತಿಳಿವುಗಳ ಹೋಲಿಕೆ  

ಅವರು ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ, ಸೆರಾಯ, ರೆಗೇಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್ ಮತ್ತು ಬಾಣ ಎಂಬ ನಾಯಕರೊಡನೆ ಹಿಂತಿರುಗಿ ಬಂದವರು:


ಅವರು ಯೆರೂಸಲೇಮಿನ ದೇವಾಲಯವನ್ನು ತಲುಪಿದ ಎರಡನೆಯ ವರ್ಷದ ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್, ಯೋಚಾದಾಕನ ಮಗನಾದ ಯೇಷೂವ ಇವರೂ, ಲೇವಿಯರೂ, ಸೆರೆಯಿಂದ ಯೆರೂಸಲೇಮಿಗೆ ಹಿಂತಿರುಗಿ ಬಂದ ಬೇರೆ ಎಲ್ಲರೂ ದೇವಾಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿ, ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸುಳ್ಳ ಲೇವಿಯರನ್ನು ಯೆಹೋವನ ಆಲಯದಲ್ಲಿ ಕಟ್ಟುವವರ ಮೇಲ್ವಿಚಾರಣೆಗಾಗಿ ನೇಮಿಸಿದರು.


ಆಗ ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಸರ್ವಾಂಗಹೋಮಗಳನ್ನು ಸಮರ್ಪಿಸುವುದಕ್ಕಾಗಿ ಯೋಚಾದಾಕನ ಮಗನಾದ ಯೇಷೂವನೂ, ಯಾಜಕರಾದ ಅವನ ಬಂಧುಗಳೂ, ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಮತ್ತು ಅವನ ಬಂಧುಗಳೂ ಇಸ್ರಾಯೇಲ್ ದೇವರ ಯಜ್ಞವೇದಿಯನ್ನು ಪುನಃ ಕಟ್ಟುವುದಕ್ಕೆ ಪ್ರಾರಂಭಿಸಿದರು.


ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಈ ವಾಕ್ಯವನ್ನು ದಯಪಾಲಿಸಿದನು.


ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಸಮಸ್ತ ಇಸ್ರಾಯೇಲ್ ಜನಶೇಷ, ಇವರೆಲ್ಲಾ ಯೆಹೋವನೆಂಬ ತಮ್ಮ ದೇವರ ನುಡಿಗೂ, ಯೆಹೋವನೆಂಬ ತಮ್ಮ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಯಾದ ಹಗ್ಗಾಯನು ಹೇಳಿದ ಮಾತುಗಳಿಗೂ ಕಿವಿಗೊಟ್ಟು ಯೆಹೋವನಲ್ಲಿ ಭಯಭಕ್ತಿಯುಳ್ಳವರಾದರು.


ಅವರು ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ. ಅಜರ್ಯ, ರಗಮ್ಯ, ನಹಮಾನೀ, ಮೊರ್ದೆಕೈ, ಬಿಲ್ಷಾನ್, ಮಿಸ್ಪೆರೆತ್, ಬಿಗ್ವೈ, ನೆಹೂಮ್, ಬಾಣ ಎಂಬ ನಾಯಕರೊಡನೆ ತಿರುಗಿ ಬಂದ ಇಸ್ರಾಯೇಲರು ಯಾರೆಂದರೆ:


ಕೂಡಲೇ ಶೆಯಲ್ತೀಯೇಲನು ಮಗನೂ, ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಮತ್ತು ಸಮಸ್ತ ಜನರೆಲ್ಲರ ಮನಸ್ಸುಗಳನ್ನು ಸೇನಾಧೀಶ್ವರನಾದ ಯೆಹೋವನು ಪ್ರೇರೇಪಿಸಲು,


ಯೆಹೂದ್ಯರ ಹಿರಿಯರು, ಪ್ರವಾದಿಯಾದ ಹಗ್ಗೈ, ಇದ್ದೋವಿನ ಮಗನಾದ ಜೆಕರೀಯ ಇವರ ಪ್ರವಾದನೆಯಿಂದ ಪ್ರೇರಿತರಾಗಿ ಕಟ್ಟುವ ಕೆಲಸವನ್ನು ಮುಂದುವರಿಸಿದರು. ಇಸ್ರಾಯೇಲ್ ದೇವರ ಆಜ್ಞಾನುಸಾರವಾಗಿಯೂ ಪರ್ಷಿಯ ರಾಜರಾದ ಕೋರೆಷ್, ದಾರ್ಯಾವೆಷ್, ಅರ್ತಷಸ್ತ ಇವರ ಅಪ್ಪಣೆಯ ಆಧಾರದಿಂದಲೂ ಕಟ್ಟಡವನ್ನು ಮುಗಿಸಿದರು.


ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನು ಹಗ್ಗಾಯನಿಗೆ ಈ ಎರಡನೆಯ ವಾಕ್ಯವನ್ನು ದಯಪಾಲಿಸಿ,


ಯೆಹೋವನು ಇಂತೆನ್ನುತ್ತಾನೆ, ‘ಜೆರುಬ್ಬಾಬೆಲನೇ ಈಗ ಧೈರ್ಯವಾಗಿರು; ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವನೇ, ಧೈರ್ಯವಾಗಿರು; ದೇಶೀಯರೇ, ನೀವೆಲ್ಲರೂ ಧೈರ್ಯಗೊಂಡು ಕೆಲಸ ನಡಿಸಿರಿ’ ಇದು ಯೆಹೋವನ ನುಡಿ; ‘ನಾನು ನಿಮ್ಮೊಂದಿಗೆ ಇದ್ದೇನೆ’ ಎಂದು ಸೇನಾಧೀಶ್ವರ ಯೆಹೋವನು ನುಡಿಯುತ್ತಾನೆ.


ಯೇಷೂವನು, ಯೋಯಾಕೀಮನನ್ನೂ, ಯೋಯಾಕೀಮನ ಎಲ್ಯಾಷೀಬನನ್ನೂ, ಎಲ್ಯಾಷೀಬನು ಯೋಯಾದನನ್ನೂ,


ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್ ಮತ್ತು ಯೇಷೂವ ಇವರೊಡನೆ ಯೆಹೂದ ದೇಶಕ್ಕೆ ಬಂದ ಯಾಜಕರು ಮತ್ತು ಲೇವಿಯರು ಯಾರಾರೆಂದರೆ: ಸೆರಾಯ, ಯೆರೆಮೀಯ, ಎಜ್ರ,


ಜನರೆಲ್ಲರೂ ಧರ್ಮೋಪದೇಶ ವಾಕ್ಯಗಳನ್ನು ಕೇಳುತ್ತಾ ಅಳುತ್ತಿದ್ದುದರಿಂದ ದೇಶಾಧಿಪತಿಯಾದ ನೆಹೆಮೀಯನೂ, ಧರ್ಮೋಪದೇಶಕನಾದ ಎಜ್ರನೂ, ಜನರಿಗೆ ಬೋಧಿಸುತ್ತಿದ್ದ ಲೇವಿಯರೂ, “ಯೆಹೋವನಿಗೆ ಈ ದಿನವು ಪರಿಶುದ್ಧವಾಗಿರುವುದರಿಂದ ನೀವು ದುಃಖಿಸುತ್ತಾ ಅಳುತ್ತಾ ಇರಬೇಡಿರಿ” ಎಂದು ಹೇಳಿದರು.


ಅರಸನಾದ ಅರ್ತಷಸ್ತನು ನನ್ನನ್ನು ಯೆಹೂದ ದೇಶದ ಅಧಿಪತಿಯನ್ನಾಗಿ ನೇಮಿಸಿದಂದಿನಿಂದ ಹನ್ನೆರಡು ವರ್ಷಗಳ ವರೆಗೆ ಅಂದರೆ ಅವನ ಆಳ್ವಿಕೆಯ ಇಪ್ಪತ್ತನೆಯ ವರ್ಷದಿಂದ ಮೂವತ್ತೆರಡನೆಯ ವರ್ಷದವರೆಗೆ ನಾನಾಗಲಿ ನನ್ನ ಸಹೋದರರಾಗಲಿ ದೇಶಾಧಿಪತಿಗೆ ಸಲ್ಲತಕ್ಕ ಭತ್ಯದಿಂದ ಜೀವನಮಾಡಲಿಲ್ಲ.


ಅಂದಿನಿಂದ ಪರ್ಷಿಯ ದೇಶದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದವರೆಗೂ ಯೆರೂಸಲೇಮಿನ ದೇವಾಲಯವನ್ನು ಕಟ್ಟುವ ಕೆಲಸವು ನಿಂತುಹೋಯಿತು.


ಆಗ ಅವರು ಜೆರುಬ್ಬಾಬೆಲನ ಬಳಿಗೂ ಗೋತ್ರಪ್ರಧಾನರ ಬಳಿಗೂ ಬಂದು ಅವರಿಗೆ, “ನಿಮ್ಮೊಡನೆ ದೇವಾಲಯ ಕಟ್ಟುವುದಕ್ಕೆ ನಮಗೂ ಅಪ್ಪಣೆಯಾಗಲಿ, ಯಾಕೆಂದರೆ ನಿಮ್ಮಂತೆ ನಾವು ನಿಮ್ಮ ದೇವರ ಭಕ್ತರಾಗಿದ್ದೇವೆ. ನಮ್ಮನ್ನು ಇಲ್ಲಿ ತಂದಿರಿಸಿದ ಅಶ್ಶೂರದ ಅರಸನಾದ ಏಸರ್ಹದ್ದೋನನ ಕಾಲದಿಂದ ನಾವು ಆತನಿಗೇ ಯಜ್ಞಸಮರ್ಪಣೆಯನ್ನು ಮಾಡುತ್ತಾ ಬಂದಿದ್ದೇವೆ” ಎಂದು ಹೇಳಿದರು.


ಊರೀಮ್ ಮತ್ತು ತುಮ್ಮೀಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ ಇವರು ಮಹಾಪರಿಶುದ್ಧ ಪದಾರ್ಥಗಳಲ್ಲಿ ಭೋಜನ ಮಾಡಬಾರದೆಂಬುದಾಗಿ ದೇಶಾಧಿಪತಿಯು ತೀರ್ಪುಮಾಡಿದನು.


ಅವನು ಅವುಗಳನ್ನು ಖಜಾನೆಯ ಅಧಿಕಾರಿಯಾದ ಮಿತ್ರದಾತನಿಗೆ ಒಪ್ಪಿಸಿದನು. ಇವನು ಅವುಗಳನ್ನು ಯೆಹೂದದ ಪ್ರಭುವಾಗಿರುವ ಶೆಷ್ಬಚ್ಚರನಿಗೆ ಲೆಕ್ಕಮಾಡಿ ಕೊಟ್ಟನು.


ಪೆದಾಯನ ಮಕ್ಕಳು: ಜೆರುಬ್ಬಾಬೆಲ್ ಮತ್ತು ಶಿಮ್ಮೀ. ಜೆರುಬ್ಬಾಬೆಲನ ಮಕ್ಕಳು: ಮೆಷುಲ್ಲಾಮ್ ಮತ್ತು ಹನನ್ಯ. ಶೆಲೋಮೀತ್ ಎಂಬ ಮಗಳೂ ಇದ್ದಳು.


ಬಾಬಿಲೋನಿಯರಿಂದ ಸೆರೆಗೆ ಒಯ್ಯಲ್ಪಟ್ಟ ಯೆಕೊನ್ಯನಿಗೆ ಹುಟ್ಟಿದ ಮಕ್ಕಳು ಶೆಯಲ್ತೀಯೇಲ್,


ಇಸ್ರಾಯೇಲರ ದೇವರಾದ ಯೆಹೋವನ ವಾಕ್ಯದ ಮೂಲಕ ತನ್ನ ಸೇವಕನೂ ಗತ್ ಹೇಫೆರಿನವನಾದ ಅಮಿತ್ತೈಯನ ಮಗನೂ ಆದ ಯೋನಾ ಎಂಬ ಪ್ರವಾದಿಯ ಮುಖಾಂತರವಾಗಿ ಮುಂತಿಳಿಸಿದಂತೆ ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ಸಮುದ್ರದವರೆಗಿದ್ದ ಇಸ್ರಾಯೇಲರ ಮೇರೆಯನ್ನು ಪುನಃ ವಶಪಡಿಸಿಕೊಂಡವನು ಇವನೇ ಆಗಿದ್ದನು.


ಯೆಹೋವನು ಪ್ರವಾದಿಯಾದ ಅಹೀಯನ ಮುಖಾಂತರವಾಗಿ ತಿಳಿಸಿದ ಪ್ರಕಾರ ಎಲ್ಲಾ ಇಸ್ರಾಯೇಲರು ಅವನಿಗೋಸ್ಕರ ಗೋಳಾಡಿ ಅವನ ಶವವನ್ನು ಸಮಾಧಿಮಾಡಿದರು.


ಯೋಹಾನನು ರೇಸನ ಮಗನು; ರೇಸನು ಜೆರುಬ್ಬಾಬೆಲನ ಮಗನು, ಜೆರುಬ್ಬಾಬೆಲನು ಸಲಥಿಯೇಲನ ಮಗನು; ಸಲಥಿಯೇಲನು ನೇರಿಯನ ಮಗನು;


ಅದಕ್ಕೆ ಮೋಶೆಯು, “ಕರ್ತನೇ, ದಯವಿಟ್ಟು ನೀನು ಬೇರೊಬ್ಬನನ್ನು ಕಳುಹಿಸಬೇಕು” ಎಂದನು.


ಅದರ ಜೊತೆಗೆ ದೇಶಾಂತರ ವ್ಯಾಪಾರಿಗಳೂ, ವರ್ತಕರೂ, ಅರಬಿಯ ಅರಸರೂ, ಪ್ರದೇಶಾಧಿಪತಿಗಳೂ ಸಹ ಸೊಲೊಮೋನನಿಗೆ ಬೆಳ್ಳಿ ಬಂಗಾರವನ್ನು ಕೊಡುತ್ತಿದ್ದರು.


ಪ್ರವಾದಿಗಳಾದ ಹಗ್ಗಾಯನೂ ಮತ್ತು ಇದ್ದೋವಿನ ಮಗನಾದ ಜೆಕರ್ಯನೂ ಇಸ್ರಾಯೇಲ್ ದೇವರಿಂದ ಪ್ರೇರಿತರಾಗಿ ಆತನ ಹೆಸರಿನಲ್ಲಿ ಯೆಹೂದದ ಮತ್ತು ಯೆರೂಸಲೇಮಿನ ಯೆಹೂದ್ಯರಿಗೆ ದೇವಾಲಯ ಕಟ್ಟಿಸುವ ಬಗ್ಗೆ ಪ್ರವಾದಿಸಿದರು.


ಆ ಸಮಯದಲ್ಲಿ ಹೊಳೆಯ ಈಚೆಯ ಪ್ರದೇಶಗಳ ದೇಶಾಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ತಮ್ಮ ಜೊತೆಗಾರರೊಂದಿಗೆ ಅವರ ಬಳಿಗೆ ಬಂದು.


ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರು ಯಾರೆಂದರೆ: ಯಾಜಕರಲ್ಲಿ: ಯೋಚಾದಾಕನ ಮಗ ಯೇಷೂವ ಮತ್ತು ಅವನ ಸಹೋದರರ ಸಂತಾನದವರಾದ ಮಾಸೇಯ, ಎಲೀಯೆಜೆರ್, ಯಾರೀಬ್ ಮತ್ತು ಗೆದಲ್ಯ ಎಂಬುವವರು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಯೆಹೋವನ ಆಲಯವನ್ನು ಕಟ್ಟುವುದಕ್ಕೆ ಸಮಯವು ಇನ್ನು ಬಂದಿಲ್ಲ” ಎಂದು ಜನರು ಅಂದುಕೊಳ್ಳುತ್ತಾರಲ್ಲಾ.


ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಈ ವಾಕ್ಯವನ್ನು ಹೇಳಿದನು,


“ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೆ ಹೀಗೆ ನುಡಿ, ನಾನು ಭೂಮ್ಯಾಕಾಶಗಳನ್ನು ಅದುರಿಸಿ,


ಕುರುಡಾದ ಪಶುವನ್ನು ಯಜ್ಞಕ್ಕೆ ಒಪ್ಪಿಸುವುದು ದೋಷವಲ್ಲವೆಂದು ನೆನಸುತ್ತೀರೋ? ಕುಂಟಾದದ್ದನ್ನೂ, ರೋಗದ ಪಶುವನ್ನೂ ಅರ್ಪಿಸುವುದು ದೋಷವಲ್ಲವೆಂದು ನಂಬುತ್ತೀರೋ? ಇಂಥದ್ದನ್ನು ನಿನ್ನ ದೇಶಾಧಿಪತಿಗೆ ಒಪ್ಪಿಸು; ನಿನಗೆ ಮೆಚ್ಚುಗೆ ವ್ಯಕ್ತಪಡಿಸುವನೋ? ನಿಮ್ಮ ಕೋರಿಕೆಯನ್ನು ನೆರವೇರಿಸುವನೋ? ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ,


ಅವರು ಅರಸನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಆರನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಬಂದು ತಮ್ಮ ದೇವರಾದ ಯೆಹೋವನ ಆಲಯದ ನಿರ್ಮಾಣ ಕಾರ್ಯಕ್ಕೆ ಕೈ ಹಾಕಿದರು.


ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಎಂಟನೆಯ ತಿಂಗಳಲ್ಲಿ ಯೆಹೋವನು ಇದ್ದೋವಿನ ಮೊಮ್ಮಗನೂ ಬೆರೆಕ್ಯನ ಮಗನೂ ಅದ ಜೆಕರ್ಯನೆಂಬ ಪ್ರವಾದಿಗೆ ಈ ವಾಕ್ಯವನ್ನು ದಯಪಾಲಿಸಿದನು.


ಅನಂತರ ಮಹಾಯಾಜಕನಾದ ಯೆಹೋಶುವನು ಯೆಹೋವನ ದೂತನ ಮುಂದೆ ನಿಂತಿರುವುದನ್ನು ಯೆಹೋವನು ನನಗೆ ತೋರಿಸಿದನು. ಸೈತಾನನು ಯೆಹೋಶುವನಿಗೆ ಪ್ರತಿವಾದಿಯಾಗಿ ಅವನ ಬಲಗಡೆಯಲ್ಲಿ ನಿಂತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು