Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಗ್ಗಾಯ 1:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನ ದೂತನಾದ ಹಗ್ಗಾಯನು ಯೆಹೋವನ ಸಂದೇಶವನ್ನು ಜನರಿಗೆ ಈ ರೀತಿಯಾಗಿ ನುಡಿದನು, “ನಿಮ್ಮೊಂದಿಗೆ ಇದ್ದೇನೆ ಎಂದು ಯೆಹೋವನು ನುಡಿಯುತ್ತಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇದನ್ನು ನೋಡಿ ಸ್ವಾಮಿಯ ದೂತನಾದ ಹಗ್ಗಾಯನು ಜನರಿಗೆ, “ನಾನು ನಿಮ್ಮೊಡನೆ ಇದ್ದೇನೆ ಎಂದು ಸರ್ವೇಶ್ವರ ನುಡಿದಿದ್ದಾರೆ. ಇದು ಸರ್ವೇಶ್ವರಸ್ವಾಮಿಯ ಸಂದೇಶ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೋವನ ದೂತನಾದ ಹಗ್ಗಾಯನು ಇದನ್ನು ನೋಡಿ ಜನರಿಗೆ - ನಿಮ್ಮೊಂದಿಗೆ ಇದ್ದೇನೆ ಎಂದು ಯೆಹೋವನು ನುಡಿಯುತ್ತಾನೆ ಎಂಬದನ್ನು ಯೆಹೋವನ ದೂತನಾಗಿಯೇ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ದೇವರು ತನ್ನ ಈ ಸಂದೇಶವನ್ನು ಜನರಿಗೆ ತಲುಪಿಸುವಂತೆ ಹಗ್ಗಾಯನನ್ನು ಉಪಯೋಗಿಸಿದನು. ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮ್ಮೊಂದಿಗಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಯೆಹೋವ ದೇವರ ಸೇವಕನಾದ ಹಗ್ಗಾಯನು, ಯೆಹೋವ ದೇವರ ಜನರಿಗೆ, “ನಾನು ನಿಮ್ಮ ಸಂಗಡ ಇದ್ದೇನೆ” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಗ್ಗಾಯ 1:13
27 ತಿಳಿವುಗಳ ಹೋಲಿಕೆ  

ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು, ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಳುಗಿಸುವುದಿಲ್ಲ, ಬೆಂಕಿಯಲ್ಲಿ ನಡೆಯುವಾಗ ನೀನು ಸುಟ್ಟುಹೋಗುವುದಿಲ್ಲ, ಜ್ವಾಲೆಯು ನಿನ್ನನ್ನು ದಹಿಸದು.


ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.


ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು?


“ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಪಕ್ಕನೇ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಬರುತ್ತಾನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಯೆಹೋವನು ಇಂತೆನ್ನುತ್ತಾನೆ, ‘ಜೆರುಬ್ಬಾಬೆಲನೇ ಈಗ ಧೈರ್ಯವಾಗಿರು; ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವನೇ, ಧೈರ್ಯವಾಗಿರು; ದೇಶೀಯರೇ, ನೀವೆಲ್ಲರೂ ಧೈರ್ಯಗೊಂಡು ಕೆಲಸ ನಡಿಸಿರಿ’ ಇದು ಯೆಹೋವನ ನುಡಿ; ‘ನಾನು ನಿಮ್ಮೊಂದಿಗೆ ಇದ್ದೇನೆ’ ಎಂದು ಸೇನಾಧೀಶ್ವರ ಯೆಹೋವನು ನುಡಿಯುತ್ತಾನೆ.


ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ.


ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ, ಅನ್ಯ ಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು. ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.


ಏಕೆಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬರುತ್ತಾರೋ ಅಲ್ಲಿ ಅವರ ಮಧ್ಯದಲ್ಲಿ ನಾನು ಇದ್ದೇನೆ” ಅಂದನು.


“ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.”


ಜ್ಞಾನಾನುಸಾರವಾಗಿ ಮಾತನಾಡುವುದು ಯಾಜಕನ ತುಟಿಗಳ ಧರ್ಮವಷ್ಟೆ; ಅವನು ಸೇನಾಧೀಶ್ವರನಾದ ಯೆಹೋವನ ದೂತನಾಗಿರುವ ಕಾರಣ ಜನರು ಅವನ ಬಾಯಿಂದ ಧರ್ಮೋಪದೇಶವನ್ನು ಕೇಳುವುದು ಧರ್ಮ. ನೀವೋ ದಾರಿತಪ್ಪಿದ್ದೀರಿ;


ಯೆಹೋವನು ಇಂತೆನ್ನುತ್ತಾನೆ, “ನಾನು ನಿನ್ನನ್ನು ರಕ್ಷಿಸಲು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಓಡಿಸಿಬಿಟ್ಟು ಚದರಿಸಿದೆನೋ, ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು. ನಿನ್ನನ್ನೋ ನಿರ್ಮೂಲಮಾಡೆನು; ನಿನ್ನನ್ನು ಮಿತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡುವುದಿಲ್ಲ.”


ಯೆಹೋವನಾದರೋ ಭಯಂಕರಶೂರನಾಗಿ ನನ್ನ ಸಂಗಡ ಇದ್ದಾನೆ. ಆದುದರಿಂದ ನನ್ನ ಹಿಂಸಕರು ಗೆಲ್ಲದೆ ಮುಗ್ಗರಿಸುವರು. ತಮ್ಮ ಇಷ್ಟಾರ್ಥವು ನೆರವೇರದ ಕಾರಣ ದೊಡ್ಡ ನಾಚಿಕೆಗೆ ಈಡಾಗುವರು, ಎಂದಿಗೂ ಮರೆಯದ ಶಾಶ್ವತ ಅವಮಾನಕ್ಕೆ ಒಳಗಾಗುವರು.


ನಾನು ನಿನ್ನನ್ನು ಈ ಜನರಿಗೆ ದುರ್ಗಮವಾದ ತಾಮ್ರದ ಪೌಳಿಗೋಡೆಯನ್ನಾಗಿ ಮಾಡುವೆನು. ಅವರು ನಿನ್ನ ವಿರುದ್ಧವಾಗಿ ಯುದ್ಧಮಾಡುವರು. ಆದರೆ ನಿನ್ನನ್ನು ಸೋಲಿಸಲಾಗುವುದಿಲ್ಲ. ನಿನ್ನನ್ನು ಉದ್ಧರಿಸಿ ರಕ್ಷಿಸಲು ನಾನೇ ನಿನ್ನೊಂದಿಗಿರುವೆನು. ಇದು ಯೆಹೋವನಾದ ನನ್ನ ಮಾತು.


ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬ ವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ


ಅವನಿಗಿರುವ ಸಹಾಯವು ನಶ್ವರವಾದ ತೋಳುಬಲ; ನಮಗಾದರೋ ನಮ್ಮ ಸಹಾಯಕನು ದೇವರಾದ ಯೆಹೋವನೇ. ಆತನು ನಮಗೆ ನೆರವಾಗಿ, ಯುದ್ಧಗಳಲ್ಲಿ ನಮಗೋಸ್ಕರ ಕಾದಾಡುವನು” ಎಂದು ಹೇಳಿ ಧೈರ್ಯಪಡಿಸಿದನು. ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳನ್ನು ಕೇಳಿ ಭರವಸೆಯುಳ್ಳವರಾದರು.


ಈ ಸಮೂಹದೊಂದಿಗೆ ನೀವು ಯುದ್ಧಮಾಡುವುದು ಅವಶ್ಯವಿಲ್ಲ. ಯೆಹೂದ್ಯರೇ, ಯೆರೂಸಲೇಮಿನವರೇ, ಸುಮ್ಮನೆ ನಿಂತುಕೊಂಡು ಯೆಹೋವನು ನಿಮಗೋಸ್ಕರ ಮಾಡುವ ರಕ್ಷಣಾ ಕಾರ್ಯವನ್ನು ನೋಡಿರಿ; ಹೆದರಬೇಡಿರಿ, ಕಳವಳಗೊಳ್ಳಬೇಡಿರಿ. ನಾಳೆ ಅವರೆದುರಿಗೆ ಹೊರಡಿರಿ, ಯೆಹೋವನು ನಿಮ್ಮ ಸಂಗಡ ಇರುವನು” ಎಂದು ಹೇಳಿದನು.


“ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಹೀಗಿರಲು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ, ನನ್ನ ಪರವಾಗಿ ಅವರನ್ನು ಎಚ್ಚರಿಸು.


ನನ್ನ ಸೇವಕನ ಮಾತನ್ನು ಸ್ಥಾಪಿಸಿ ನನ್ನ ದೂತರ ಮಂತ್ರಾಲೋಚನೆಯನ್ನು ನೆರವೇರಿಸುವವನಾಗಿದ್ದೇನೆ. ಯೆರೂಸಲೇಮಿಗೆ, ‘ನೀನು ಜನ ನಿವಾಸವಾಗುವಿ’ ಎಂದು ಯೆಹೂದದ ಪಟ್ಟಣಗಳಿಗೆ, ‘ಅವು ತಿರುಗಿ ಕಟ್ಟಲ್ಪಡುವವು, ಅಲ್ಲಿನ ಹಾಳು ಸ್ಥಳಗಳನ್ನು ನೆಟ್ಟಗೆ ಮಾಡುವೆನು’ ಎಂದು ಮುಂತಿಳಿಸಿ


ಕರ್ತನು ನಿನ್ನ ಆತ್ಮದೊಂದಿಗೆ ಇರಲಿ. ಆತನ ಕೃಪೆಯು ನಿಮ್ಮೊಂದಿಗಿರಲಿ.


ಆದ್ದರಿಂದ ನಾವು ಕ್ರಿಸ್ತನ ರಾಯಭಾರಿಗಳು. ದೇವರೇ ನಮ್ಮ ಮುಖಾಂತರ ಕರೆನೀಡುತ್ತಿದ್ದಾನೆ. ದೇವರೊಡನೆ ನೀವು ಸಂಧಾನಮಾಡಿಕೊಳ್ಳಿರೆಂದು ಕ್ರಿಸ್ತನ ಹೆಸರಿನಲ್ಲಿ ನಾವು ನಿಮ್ಮನ್ನು ವಿನಂತಿಸುತೇವೆ.


ನನ್ನ ಸೇವಕನ ಹೊರತು ಯಾರು ಕುರುಡರು? ನಾನು ಕಳುಹಿಸುವ ದೂತನಂತೆ ಯಾರು ಕಿವುಡರು? ನನ್ನ ಭಕ್ತನ ಹಾಗೆ ಯಾರು ಕುರುಡರು? ಯೆಹೋವನ ಸೇವಕನ ಪ್ರಕಾರ ಅಂಧರು ಯಾರು?


ಅವನು ಆಸನನ್ನು ಎದುರುಗೊಳ್ಳುವುದಕ್ಕೆ ಹೋಗಿ ಅವನಿಗೆ, “ಆಸನೇ, ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರೇ, ಕಿವಿಗೊಡಿರಿ, ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟುಬಿಡುವನು.


ಯೆಹೋವನ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು ಇಸ್ರಾಯೇಲ್ಯರಿಗೆ, “ನಾನು ನಿಮ್ಮನ್ನು ಐಗುಪ್ತದಿಂದ ಬರಮಾಡಿ, ನಿಮ್ಮ ಪೂರ್ವಿಕರಿಗೆ ಪ್ರಮಾಣ ಮಾಡಿದ ದೇಶಕ್ಕೆ ಕರೆತಂದೆನು. ‘ನಿಮ್ಮೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದೂ ಭಂಗಪಡಿಸುವುದಿಲ್ಲವೆಂದು ನಾನು ಮಾತು ಕೊಟ್ಟಾಗ,


ಆ ಮೇಲೆ ದಾವೀದನು ತನ್ನ ಮಗನಾದ ಸೊಲೊಮೋನನಿಗೆ, “ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು, ಅಂಜಬೇಡ, ಕಳವಳಗೊಳ್ಳಬೇಡ, ನನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇರುತ್ತಾನೆ. ಆತನು ತನ್ನ ಆಲಯದ ಎಲ್ಲಾ ಕೆಲಸಗಳು ತೀರುವವರೆಗೂ ನಿನ್ನನ್ನು ಕೈಬಿಡುವುದಿಲ್ಲ ತೊರೆಯುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು