ಹಗ್ಗಾಯ 1:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಕೂಡಲೇ ಶೆಯಲ್ತೀಯೇಲನು ಮಗನೂ, ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಮತ್ತು ಸಮಸ್ತ ಜನರೆಲ್ಲರ ಮನಸ್ಸುಗಳನ್ನು ಸೇನಾಧೀಶ್ವರನಾದ ಯೆಹೋವನು ಪ್ರೇರೇಪಿಸಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಕೂಡಲೆ ಶೆಯಲ್ತೀಯೇಲನ ಮಗನೂ ಜುದೇಯ ನಾಡಿನ ದೇಶಾಧಿಪತಿಯೂ ಆದ ಜೆರುಬ್ಬಾಬೆಲ್, ಯೆಹೋಚಾದಕನ ಮಗನೂ ಮಹಾಯಾಜಕನೂ ಆದ ಯೆಹೋಶುವ, ಮತ್ತು ಅಳಿದುಳಿದ ಜನರೆಲ್ಲರು ಸ್ವಾಮಿಯ ಪ್ರೇರಣೆಯನ್ನು ಪಡೆದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಕೂಡಲೆ ಶೆಯಲ್ತೀಯೇಲನ ಮಗನೂ ಯೆಹೂದ ದೇಶಾಧಿಪತಿಯೂ ಆದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಸಮಸ್ತಜನಶೇಷ, ಇವೆಲ್ಲರ ಮನಸ್ಸುಗಳನ್ನು ಯೆಹೋವನು ಪ್ರೇರಿಸಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಬಳಿಕ ದೇವರಾದ ಯೆಹೋವನು ಆಲಯವನ್ನು ಕಟ್ಟುವಂತೆ ಜನರನ್ನು ಪ್ರೇರೇಪಿಸಿದನು. ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನು ಯೆಹೂದ ಪ್ರಾಂತ್ಯದ ರಾಜ್ಯಪಾಲನಾಗಿದ್ದನು. ಯೆಹೋವನು ಅವನನ್ನು ಪ್ರೇರೇಪಿಸಿದನು. ಯೆಹೋಚಾದಾಕನ ಮಗನಾದ ಯೆಹೋಶುವನು ಪ್ರಧಾನ ಯಾಜಕನಾಗಿದ್ದನು. ಯೆಹೋವನು ಅವನನ್ನು ಪ್ರೇರೇಪಿಸಿದನು ಅಲ್ಲದೆ ಯೆಹೋವನು ಆಲಯವನ್ನು ಕಟ್ಟಲು ಎಲ್ಲಾ ಜನರನ್ನು ಪ್ರೋತ್ಸಾಹಿಸಿದನು. ಆದ್ದರಿಂದ ಅವರೆಲ್ಲರೂ ತಮ್ಮ ದೇವರಾದ ಯೆಹೋವನಿಗೆ ಆಲಯವನ್ನು ಕಟ್ಟಲು ಪ್ರಾರಂಭಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14-15 ಯೆಹೋವ ದೇವರು ಶೆಯಲ್ತಿಯೇಲನ ಮಗ ಮತ್ತು ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನ ಆತ್ಮವನ್ನೂ, ಯೆಹೋಚಾದಾಕನ ಮಗ ಮತ್ತು ಮಹಾಯಾಜಕ ಯೆಹೋಶುವನ ಆತ್ಮವನ್ನೂ, ಜನರಲ್ಲಿ ಉಳಿದವರೆಲ್ಲರ ಆತ್ಮವನ್ನೂ ಪ್ರೇರೇಪಿಸಿದರು. ಅವರು ಬಂದು ಅರಸನಾದ ದಾರ್ಯಾವೆಷನ ಆಳಿಕೆಯ ಎರಡನೇ ವರ್ಷದ, ಆರನೆಯ ತಿಂಗಳಿನ, ಇಪ್ಪತ್ನಾಲ್ಕನೆಯ ದಿವಸದಲ್ಲಿ ತಮ್ಮ ದೇವರಾದ ಸೇನಾಧೀಶ್ವರ ಯೆಹೋವ ದೇವರ ಆಲಯದ ಕೆಲಸ ಪ್ರಾರಂಭಿಸಿದರು. ಅರಸನಾದ ದಾರ್ಯಾವೆಷನ ಎರಡನೇ ವರ್ಷದಲ್ಲಿ, ಅಧ್ಯಾಯವನ್ನು ನೋಡಿ |