Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಗ್ಗಾಯ 1:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೀವು ಬಿತ್ತಿದ ಬೀಜವು ಬಹಳ, ತಂದ ಫಲವು ಸ್ವಲ್ಪ; ಅದನ್ನು ಸೇವಿಸುವಿರಿ ತೃಪ್ತಿಯಾಗದು, ಕುಡಿಯುತ್ತೀರಿ ಆನಂದವಾಗದು; ಹೊದ್ದುಕೊಳ್ಳುವಿರಿ ಬೆಚ್ಚಗಾಗದು; ಸಂಬಳಗಾರನು ಸಂಬಳಹಾಕುವ ಚೀಲವು ತೂತಾಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನೀವು ಬಿತ್ತಿದ ಬೀಜ ಬಹಳ, ಪಡೆದ ಫಲ ವಿರಳ; ತಿನ್ನುತ್ತೀರಿ, ಆದರೆ ತೃಪ್ತಿಯಿಲ್ಲ; ಕುಡಿಯುತ್ತೀರಿ, ಆದರೆ ದಾಹ ನೀಗುವುದಿಲ್ಲ. ಹೊದೆಯುತ್ತೀರಿ, ಆದರೆ ಚಳಿ ಹೋಗುವುದಿಲ್ಲ. ದುಡಿಮೆಗಾರನ ದುಡ್ಡಿನ ಚೀಲ ತೂತಿನ ಚೀಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೀವು ಬಿತ್ತಿದ ಬೀಜವು ಬಹಳ, ತಂದ ಫಲವು ಸ್ವಲ್ಪ; ತಿನ್ನುತ್ತೀರಿ, ತೃಪ್ತಿಯಾಗದು, ಕುಡಿಯುತ್ತೀರಿ, ಆನಂದವಾಗದು; ಹೊದಿಯುತ್ತೀರಿ, ಬೆಚ್ಚಗಾಗದು; ಸಂಬಳಗಾರನು ಸಂಬಳಹಾಕುವ ಚೀಲವು ತೂತಿನದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನೀವು ಬಹಳ ಬೀಜವನ್ನು ಭೂಮಿಯಲ್ಲಿ ಬಿತ್ತಿದ್ದರೂ ಸ್ವಲ್ಪವೇ ಪೈರನ್ನು ಕೊಯ್ದಿದ್ದೀರಿ. ನಿಮಗೆ ಊಟಮಾಡಲು ಆಹಾರವಿದ್ದರೂ ತೃಪ್ತಿಯಾಗುವಷ್ಟಿಲ್ಲ. ನಿಮ್ಮಲ್ಲಿ ಕುಡಿಯಲು ಸ್ವಲ್ಪ ಪಾನೀಯವಿದ್ದರೂ ಕುಡಿದು ಅಮಲೇರುವಷ್ಟು ಇಲ್ಲ. ನಿಮ್ಮಲ್ಲಿ ತೊಟ್ಟುಕೊಳ್ಳಲು ಸ್ವಲ್ಪ ಬಟ್ಟೆಯಿದ್ದರೂ ನಿಮ್ಮನ್ನು ಬೆಚ್ಚಗಿಟ್ಟುಕೊಳ್ಳುವಷ್ಟು ಇಲ್ಲ. ನೀವು ಸ್ವಲ್ಪ ಹಣ ಸಂಪಾದನೆ ಮಾಡಿದರೂ ಅದು ಹೇಗೆ ಖರ್ಚಾಗುತ್ತದೋ ನಿಮಗೆ ತಿಳಿಯುವುದಿಲ್ಲ. ನಿಮ್ಮ ಜೇಬಿಗೆ ರಂಧ್ರ ಇದೆಯೋ ಎಂಬಂತೆ ಅದು ಖರ್ಚಾಗುತ್ತದೆ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಬಹಳವಾಗಿ ಬಿತ್ತಿದ್ದೀರಿ, ಆದರೆ ಕೊಂಚವಾಗಿ ಸುಗ್ಗಿ ಮಾಡಿದ್ದೀರಿ; ತಿನ್ನುತ್ತೀರಿ, ಆದರೆ ಸಾಕಾಗಲಿಲ್ಲ; ಕುಡಿಯುತ್ತೀರಿ, ಆದರೆ ತೃಪ್ತಿಯಾಗಲಿಲ್ಲ; ಬಟ್ಟೆಯನ್ನು ಧರಿಸುತ್ತೀರಿ, ಆದರೆ ಬೆಚ್ಚಗೆ ಆಗಲಿಲ್ಲ; ಸಂಬಳ ಸಂಪಾದಿಸುತ್ತೀರಿ, ಅದನ್ನು ತೂತುಗಳುಳ್ಳ ಚೀಲಗಳಲ್ಲಿ ಹಾಕಿಡುತ್ತೀರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಗ್ಗಾಯ 1:6
31 ತಿಳಿವುಗಳ ಹೋಲಿಕೆ  

ನೀವು ಬಹು ಬೆಳೆಯನ್ನು ನಿರೀಕ್ಷಿಸಿದಿರಿ, ಆದರೆ, ಸ್ವಲ್ಪ ಮಾತ್ರ ಮನೆಗೆ ಸಾಗಿಸಲು ಸಾಧ್ಯವಾಯಿತು; ಯಾಕೆಂದರೆ ನಾನು ಅದನ್ನು ಫಲಿಸಲು ಬಿಡಲಿಲ್ಲ. ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇದಕ್ಕೆಲ್ಲಾ ಕಾರಣವೇನು? ನನ್ನ ಆಲಯವು ಪಾಳು ಬಿದ್ದಿದೆ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಮನೆಯ ಕೆಲಸಕ್ಕೆ ತವಕಪಡುತ್ತಿದ್ದಾನೆ, ಇದೇ ಕಾರಣ.”


ಅವರು ಉಣ್ಣುತ್ತಿದ್ದರೂ ತೃಪ್ತಿ ದೊರೆಯದು, ಹಾದರ ಮಾಡುತ್ತಿದ್ದರೂ ಪ್ರಜಾಭಿವೃದ್ಧಿಯಾಗದು; ಯೆಹೋವನ ಕಡೆಗೆ ಗಮನಿಸುವುದನ್ನು ಬಿಟ್ಟುಬಿಟ್ಟಿದ್ದಾರಷ್ಟೆ.


ಆ ಕಾಲದಲ್ಲೆಲ್ಲಾ ಒಬ್ಬನು ಇಪ್ಪತ್ತು ಸೇರಿನ ರಾಶಿಗೆ ಬಂದಾಗ ಹತ್ತು ಸೇರು ಧಾನ್ಯ ಮಾತ್ರ ಸಿಕ್ಕುತ್ತಿತ್ತಲ್ಲವೇ; ಐವತ್ತು ಸೇರು ದ್ರಾಕ್ಷಾರಸವನ್ನು ಮೊಗೆಯಬೇಕೆಂದು ತೊಟ್ಟಿಗೆ ಬಂದಾಗ ಇಪ್ಪತ್ತು ಮಾತ್ರ ದೊರೆಯುತ್ತಿತ್ತು.


ಅವರು ಗಾಳಿಯನ್ನು ಬಿತ್ತುತ್ತಾರೆ, ಬಿರುಗಾಳಿಯನ್ನು ಕೊಯ್ದುಕೊಳ್ಳುವರು. ಇಸ್ರಾಯೇಲರ ಪೈರು ತೆನೆಗೆ ಬಾರದು; ಬೀಜ ಮೊಳೆತರೂ ಹಿಟ್ಟು ಸಿಕ್ಕದು; ಒಂದು ವೇಳೆ ಸಿಕ್ಕಿದರೂ ಅನ್ಯರು ಅದನ್ನು ನುಂಗಿಬಿಡುವರು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ನಾಮವನ್ನು ಘನಪಡಿಸಬೇಕೆಂಬ ಆಜ್ಞೆಯನ್ನು ನೀವು ಆಲಿಸಿ ಮನನಮಾಡಿ ಅರ್ಥಮಾಡಿಕೊಳ್ಳದಿದ್ದರೆ, ನಾನು ನಿಮಗೆ ಶಾಪವನ್ನು ಬರಮಾಡುವೆನು, ನಿಮಗೆ ಆಶೀರ್ವಾದವಾಗಿ ದಯಪಾಲಿಸಿದವುಗಳೆಲ್ಲವನ್ನೂ ಶಪಿಸುವೆನು; ಹೌದು, ಈ ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮನದಟ್ಟು ಮಾಡಿಕೊಳ್ಳದ ಕಾರಣ ನಾನು ನಿಮ್ಮನ್ನು ಶಪಿಸುತ್ತೇನೆ.


ಏಕೆಂದರೆ ಹತ್ತು ಎಕರೆ ಭಾಗವಾಯಿತು. ಭೂಮಿಯು ನಾಲ್ಕು ಕೊಳಗದಷ್ಟೇ ದ್ರಾಕ್ಷಾರಸವನ್ನಿಯುವುದು. ಬಿತ್ತಿದ ಒಂದು ಖಂಡುಗ ಬೀಜದಿಂದ ಕಡಿಮೆ ದವಸವು ಬರುವುದು.


ಆ ಕಾಲಕ್ಕೆ ಮುಂಚೆ ಮನುಷ್ಯನಿಗಾಗಲಿ, ಪಶುವಿಗಾಗಲಿ ದುಡಿತದಿಂದ ಏನೂ ಜೀವನವಾಗುತ್ತಿರಲಿಲ್ಲ; ಹೋಗಿ ಬರುವವರಿಗೆ ಶತ್ರುಗಳ ದೆಸೆಯಿಂದ ಭಯವಿಲ್ಲದೆ ಇರಲಿಲ್ಲ; ಒಬ್ಬರನೊಬ್ಬರು ಎದುರಿಸುವಂತೆ ಎಲ್ಲರನ್ನೂ ಪ್ರೇರೇಪಿಸುತ್ತಿದ್ದರು.


ನಾನು ಶಾಪವನ್ನು ಕಳುಹಿಸುತ್ತೇನೆ. ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನನ್ನ ಅಪ್ಪಣೆಯಂತೆ ಅದು ಕಳ್ಳನ ಮನೆಯಲ್ಲಿಯೂ, ನನ್ನ ಹೆಸರೆತ್ತಿ ಸುಳ್ಳು ಸಾಕ್ಷಿಹೇಳುವವನ ಮನೆಯೊಳಗೆ ನುಗ್ಗಿ ಮತ್ತು ಅವನ ಮನೆಯಲ್ಲಿನ ಮರಗಳನ್ನೂ, ಅದರ ಕಲ್ಲುಗಳನ್ನೂ ನಾಶಮಾಡುವುದು’” ಎಂದು ಹೇಳಿದನು.


ಆದರೆ ನಾವು ಗಗನದ ಒಡತಿಗೆ ಧೂಪಹಾಕುವುದನ್ನೂ ಪಾನವನ್ನು ನೈವೇದ್ಯವಾಗಿ ಸುರಿಯುವುದನ್ನೂ ನಿಲ್ಲಿಸಿಬಿಟ್ಟಂದಿನಿಂದ ಎಲ್ಲಾ ಕೊರತೆಗೂ ಗುರಿಯಾಗಿ ಖಡ್ಗ, ಕ್ಷಾಮಗಳಿಂದ ನಾಶವಾಗುತ್ತಿದ್ದೇವೆ.


ದೇಶದಲ್ಲಿ ಮಳೆಯಿಲ್ಲದೆ ಭೂಮಿಯು ಬಿರುಕುಬಿಟ್ಟಿರುವುದರಿಂದ ರೈತರು ನಾಚಿಕೆಪಟ್ಟು ಮುಖವನ್ನು ಮುಚ್ಚಿಕೊಳ್ಳುತ್ತಾರೆ.


ನೀರಿನ ಬುಗ್ಗೆಗಳನ್ನು ಒಣನೆಲವಾಗುವಂತೆಯೂ, ಫಲಭೂಮಿಯನ್ನು ಉಪ್ಪು ನೆಲವಾಗುವಂತೆಯೂ ಮಾಡಿದನು.


ದೇವರ ಸಿಟ್ಟಿನ ದಿನದಲ್ಲಿ ಅವನ ಮನೆಯ ಧನಧಾನ್ಯಗಳು, ಪ್ರವಾಹದಿಂದ ಕೊಚ್ಚಿಕೊಂಡು ತೊಲಗಿಹೋಗುವವು.


ಸಮೃದ್ಧಿಯು ತುಂಬಿರುವಾಗಲೇ ಅವನಿಗೆ ಇಕ್ಕಟ್ಟಾಗುವುದು. ಶ್ರಮೆಯನ್ನು ಅನುಭವಿಸುವ ಪ್ರತಿಯೊಬ್ಬನ ಕೈ ಅವನ ಮೇಲೆ ಬೀಳುವುದು.


ಆಕೆಯು ಅವನಿಗೆ, “ನಿನ್ನ ದೇವರಾದ ಯೆಹೋವನಾಣೆ, ನನ್ನ ಹತ್ತಿರ ರೊಟ್ಟಿ ಇರುವುದಿಲ್ಲ, ಮಡಿಕೆಯಲ್ಲಿ ಒಂದು ಹಿಡಿ ಹಿಟ್ಟು, ಮೊಗೆಯಲ್ಲಿ ಸ್ವಲ್ಪ ಎಣ್ಣೆ ಇವುಗಳ ಹೊರತಾಗಿ ಬೇರೇನೂ ಇರುವುದಿಲ್ಲ. ಈಗ ಎರಡು ಕಟ್ಟಿಗೆಗಳನ್ನು ಆರಿಸಿಕೊಂಡು ನನಗೋಸ್ಕರವೂ ನನ್ನ ಮಗನಿಗೋಸ್ಕರವೂ ರೊಟ್ಟಿ ಮಾಡುತ್ತೇನೆ, ಬೇರೆ ಹಿಟ್ಟು, ಎಣ್ಣೆ ಇಲ್ಲ ಇದನ್ನು ತಿಂದ ಮೇಲೆ ಆಹಾರವಿಲ್ಲದ ಕಾರಣ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ” ಎಂದು ಉತ್ತರಕೊಟ್ಟಳು.


ದಾವೀದನ ಕಾಲದಲ್ಲಿ ಮೂರು ವರ್ಷಗಳ ವರೆಗೂ ಎಡಬಿಡದೆ ಬರವಿತ್ತು. ದಾವೀದನು ಯೆಹೋವನನ್ನು ವಿಚಾರಿಸಲು ಆತನು, “ಸೌಲನು ಗಿಬ್ಯೋನ್ಯರನ್ನು ಕೊಲ್ಲಿಸಿದ್ದರಿಂದ ಅವನ ಮೇಲೆಯೂ, ಅವನ ಮನೆಯವರ ಮೇಲೆಯೂ ರಕ್ತಾಪರಾಧವಿದೆ” ಎಂದು ಉತ್ತರ ಕೊಟ್ಟನು.


ನಾನು ನಿಮ್ಮ ಜೀವನಾಧಾರವನ್ನು ತೆಗೆದುಬಿಟ್ಟಾಗ ಹತ್ತು ಜನರು ಹೆಂಗಸರು ಒಂದೇ ಒಲೆಯಲ್ಲಿ ರೊಟ್ಟಿಸುಟ್ಟು, ಅದನ್ನು ತೂಕದ ಪ್ರಕಾರ ಹಂಚಿಕೊಡುವರು; ನೀವು ಅದನ್ನು ಊಟಮಾಡಿದಾಗ ತೃಪ್ತಿಹೊಂದುವುದಿಲ್ಲ.


ನೀವು ದುಡಿದದ್ದೆಲ್ಲಾ ವ್ಯರ್ಥವಾಗುವುದು; ನಿಮ್ಮ ಭೂಮಿಯಲ್ಲಿ ಬೆಳೆಯಾಗುವುದಿಲ್ಲ, ತೋಟಗಳ ಮರಗಳು ಫಲ ಕೊಡುವುದಿಲ್ಲ.


ಅವರಲ್ಲಿ ಕೆಲವರು, “ನಾವೂ ನಮ್ಮ ಗಂಡು ಹೆಣ್ಣು ಮಕ್ಕಳೂ ಬಹು ಮಂದಿ ಇದ್ದೇವೆ; ನಮ್ಮ ಜೀವನಕ್ಕಾಗಿ ಧಾನ್ಯವು ಬೇಕಾಗಿದೆ” ಎಂದು ಹೇಳಿದರು.


ಗೋದಿಯನ್ನು ಬಿತ್ತಿ ಮುಳ್ಳನ್ನು ಕೊಯ್ದಿದ್ದಾರೆ; ಕ್ಷೇಮಕೆಡುವಷ್ಟು ಪ್ರಯಾಸಪಟ್ಟರೂ ಯಾವ ಲಾಭವನ್ನೂ ಹೊಂದಲಿಲ್ಲ. ಯೆಹೋವನ ರೋಷಾಗ್ನಿಯ ನಿಮಿತ್ತ ನಿಮ್ಮ ಬೆಳೆಯ ವಿಷಯವಾಗಿ ನಿಮಗೆ ನಾಚಿಕೆಯಾಗುವುದು.


ಈ ಸಮಯದಲ್ಲಿ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ಗತಿ ಏನಾಗಿದೆಯೆಂದು ಮನಸ್ಸಿಗೆ ತಂದುಕೊಳ್ಳಿರಿ.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ; “ನಿಮ್ಮ ಗತಿ ಏನಾಗಿದೆಯೆಂದು ಮನಸ್ಸಿಗೆ ತಂದುಕೊಳ್ಳಿರಿ.


ನಿಮ್ಮ ನಿಮಿತ್ತವೇ ಆಕಾಶವು ಇಬ್ಬನಿಯನ್ನು ತಡೆದುಬಿಟ್ಟಿದೆ, ಭೂಮಿಯು ತನ್ನ ಫಲವನ್ನು ನಿಲ್ಲಿಸಿಬಿಟ್ಟಿದೆ;


ನಾನು ನಿಮ್ಮ ದುಡಿತದ ಫಲವನ್ನೆಲ್ಲಾ ಆನೆಕಲ್ಲು ಮಳೆಯಿಂದಲೂ, ಬಿಸಿಗಾಳಿಗೂ ಹಾಳುಮಾಡಿ ನಿಮ್ಮನ್ನು ಬಾಧಿಸಿದರೂ, ನೀವು ನನ್ನ ಕಡೆಗೆ ತಿರುಗಿಕೊಳ್ಳಲಿಲ್ಲ” ಇದು ಯೆಹೋವನ ನುಡಿ.


ನಿಮ್ಮ ಪುಟ್ಟಿಗಳಿಗೂ ಮತ್ತು ಕೊಣವಿಗೆಗಳಿಗೂ ಶಾಪ ಉಂಟಾಗುವುದು.


ಒಬ್ಬನು ತನ್ನ ಧನವನ್ನು ಚೆಲ್ಲಿದರೂ ಅವನಿಗೆ ವೃದ್ಧಿ, ಮತ್ತೊಬ್ಬನು ನ್ಯಾಯವಾದದ್ದನ್ನು ಬಿಗಿಹಿಡಿದರೂ ಅವನಿಗೆ ಬಡತನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು