ಹಗ್ಗಾಯ 2:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಮೀಸಲಿನ ಮಾಂಸವನ್ನು ಇಟ್ಟುಕೊಂಡು ಬರುತ್ತಿರುವಾಗ ಆ ಸೆರಗು ರೊಟ್ಟಿಯನ್ನಾಗಲಿ ಇಲ್ಲವೆ ಗುಗ್ಗರಿಯನ್ನಾಗಲಿ ಅಥವಾ ದ್ರಾಕ್ಷಾರಸವನ್ನಾಗಲಿ ಇಲ್ಲವೆ ಎಣ್ಣೆಯನ್ನು ಅಥವಾ ಯಾವ ಆಹಾರ ಪದಾರ್ಥವನ್ನಾಗಲಿ ಸೋಕಿದರೆ ಅವು ಪರಿಶುದ್ಧವಾಗುವುದೋ? ಎಂದು ಧರ್ಮವಿಧಿಯನ್ನು ವಿಚಾರಿಸು” ಪ್ರವಾದಿಯು ಹಾಗೆ ವಿಚಾರಿಸಲು ಯಾಜಕರು “ಇಲ್ಲ” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಒಬ್ಬನು ತನ್ನ ಬಟ್ಟೆಯ ಸೆರಗಿನಲ್ಲಿ ಪ್ರತಿಷ್ಠಿತ ಮಾಂಸವನ್ನು ಕಟ್ಟಿಕೊಂಡು ಬರುತ್ತಿರುವಾಗ ಆ ಸೆರಗು ರೊಟ್ಟಿಯನ್ನಾಗಲಿ, ಅನ್ನವನ್ನಾಗಲಿ, ದ್ರಾಕ್ಷಾರಸವನ್ನಾಗಲೀ, ಎಣ್ಣೆಯನ್ನಾಗಲೀ ಅಥವಾ ಯಾವ ಆಹಾರ ಪದಾರ್ಥವನ್ನೇ ಆಗಲಿ ಸೋಕಿದರೆ ಅದು ಪವಿತ್ರವಾಗುತ್ತದೋ? ಎಂದು ಧರ್ಮವಿಧಿಯನ್ನು ವಿಚಾರಿಸು.” ಪ್ರವಾದಿ ಹಾಗೆ ವಿಚಾರಿಸಲು ಯಾಜಕರು ‘ಇಲ್ಲ’ ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಮೀಸಲಿನ ಮಾಂಸವನ್ನು ಇಟ್ಟುಕೊಂಡು ಬರುತ್ತಿರುವಾಗ ಆ ಸೆರಗು ರೊಟ್ಟಿಯನ್ನು ಇಲ್ಲವೆ ಗುಗ್ಗರಿಯನ್ನು ಅಥವಾ ದ್ರಾಕ್ಷಾರಸವನ್ನು ಇಲ್ಲವೆ ಎಣ್ಣೆಯನ್ನು ಅಥವಾ ಯಾವ ಆಹಾರಪದಾರ್ಥವನ್ನಾಗಲಿ ಸೋಕಿದರೆ ಅವು ಪರಿಶುದ್ಧವಾಗುವವೋ ಎಂದು ಧರ್ಮವಿಧಿಯನ್ನು ವಿಚಾರಿಸು. [ಪ್ರವಾದಿಯು ಹಾಗೆ ವಿಚಾರಿಸಲು] ಯಾಜಕರು ಇಲ್ಲವೆಂದು ಉತ್ತರ ಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ‘ಒಬ್ಬನು ತನ್ನ ಬಟ್ಟೆಯ ಸೆರಗಿನಲ್ಲಿ ಮಾಂಸವನ್ನು ಒಯ್ಯುತ್ತಿದ್ದಾನೆಂದು ನೆನಸಿರಿ. ಆ ಮಾಂಸವು ಯಜ್ಞದ ಒಂದು ಭಾಗವಾಗಿದೆ. ಆದ್ದರಿಂದ ಅದು ಪವಿತ್ರವಾದದ್ದು. ಆ ಬಟ್ಟೆಯು ರೊಟ್ಟಿಯನ್ನಾಗಲಿ ಅಡಿಗೆ ಮಾಡಿದ ಆಹಾರವಾಗಲಿ ದ್ರಾಕ್ಷಾರಸವನ್ನಾಗಲಿ ಎಣ್ಣೆಯನ್ನಾಗಲಿ ಮುಟ್ಟಿದರೆ ಮುಟ್ಟಿದ ವಸ್ತು ಪವಿತ್ರವಸ್ತುವಾಗಬಹುದೇ?’” ಯಾಜಕರು ಉತ್ತರವಾಗಿ, “ಇಲ್ಲ” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಪ್ರತಿಷ್ಠಿಸಿದ ಮಾಂಸವನ್ನು ಹೊತ್ತು, ತನ್ನ ಸೆರಗಿನಿಂದ ರೊಟ್ಟಿಯನ್ನಾದರೂ ಬೇಯಿಸಿದ್ದನ್ನಾದರೂ ದ್ರಾಕ್ಷಾರಸವನ್ನಾದರೂ ಎಣ್ಣೆಯನ್ನಾದರೂ ಯಾವ ವಿಧವಾದ ಆಹಾರವನ್ನಾದರೂ ಮುಟ್ಟಿದರೆ, ಅದು ಪರಿಶುದ್ಧವಾಗುವುದೋ? ಕೇಳು,’ ” ಎಂದನು. ಹಗ್ಗಾಯನು ಹಾಗೆ ವಿಚಾರಿಸಲು, ಯಾಜಕರು, “ಇಲ್ಲ,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿ |