ಹಗ್ಗಾಯ 2:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನಾನು ನಿಮ್ಮ ದುಡಿತದ ಫಲವನ್ನೆಲ್ಲಾ ಆನೆಕಲ್ಲು ಮಳೆಯಿಂದಲೂ, ಬಿಸಿಗಾಳಿಗೂ ಹಾಳುಮಾಡಿ ನಿಮ್ಮನ್ನು ಬಾಧಿಸಿದರೂ, ನೀವು ನನ್ನ ಕಡೆಗೆ ತಿರುಗಿಕೊಳ್ಳಲಿಲ್ಲ” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನಾನು ನಿಮ್ಮ ದುಡಿಮೆಯ ಫಲವನ್ನು ಆನೆಕಲ್ಲು, ಬೂಷ್ಟು, ಬಿಸಿಗಾಳಿ - ಇವುಗಳಿಂದ ಹಾಳುಮಾಡಿ ನಿಮ್ಮನ್ನು ಬಾಧಿಸಿದೆನು. ಆದರೂ ನೀವು ನನ್ನ ಕಡೆಗೆ ತಿರುಗಿಕೊಳ್ಳಲಿಲ್ಲ, ಇದನ್ನು ನೆನಪಿನಲ್ಲಿಡಿ. ಇದು ಸರ್ವೇಶ್ವರನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನಾನು ನಿಮ್ಮ ಕೈದುಡಿತದ ಫಲವನ್ನೆಲ್ಲಾ ಆನೆಕಲ್ಲು, ಕಾಡಿಗೆ, ಬಿಸಿಗಾಳಿ, ಇವುಗಳಿಂದ ಹಾಳು ಮಾಡಿ ನಿಮ್ಮನ್ನು ಬಾಧಿಸಿದರೂ ನೀವು ನನ್ನ ಕಡೆಗೆ ತಿರುಗಿಕೊಳ್ಳಲಿಲ್ಲ; ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಯಾಕೆ ಹೀಗಾಯಿತು? ಯಾಕೆಂದರೆ ನಾನು ನಿಮ್ಮನ್ನು ಶಿಕ್ಷಿಸಿದೆನು. ನೀವು ನೆಟ್ಟ ಮರಗಳನ್ನು ನಾಶಮಾಡಲು ನಾನು ರೋಗವನ್ನು ಕಳುಹಿಸಿದೆನು. ನಿಮ್ಮ ಕೈಕೆಲಸವನ್ನು ಹಾಳುಮಾಡಲು ನಾನು ಆಲಿಕಲ್ಲಿನ ಮಳೆಯನ್ನು ಕಳುಹಿಸಿದೆನು. ನಾನು ಇಷ್ಟೆಲ್ಲಾ ಮಾಡಿದರೂ ನೀವು ಯಾರೂ ನನ್ನ ಬಳಿಗೆ ಬರಲಿಲ್ಲ.’ ಇದು ಯೆಹೋವನ ನುಡಿ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನಾನು ನಿಮ್ಮ ಕೈ ದುಡಿತಗಳನ್ನೆಲ್ಲಾ ಬೂಜಿನಿಂದಲೂ ಉರಿಗಾಳಿಯಿಂದಲೂ ಕಲ್ಮಳೆಯಿಂದಲೂ ಹಾಳುಮಾಡಿದೆನು. ಆದರೂ ನೀವು ನನ್ನ ಕಡೆಗೆ ತಿರುಗಲಿಲ್ಲವೆಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |