Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಗ್ಗಾಯ 2:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೆ ಹೀಗೆ ನುಡಿ, ನಾನು ಭೂಮ್ಯಾಕಾಶಗಳನ್ನು ಅದುರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ಜುದೇಯ ನಾಡಿನ ಅಧಿಪತಿಯಾದ ಜೆರುಬ್ಬಾಬೆಲನಿಗೆ ಹೀಗೆಂದು ನುಡಿ: ನಾನು ಭೂಮ್ಯಾಕಾಶಗಳನ್ನು ಅದರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೆ ಹೀಗೆ ನುಡಿ - ನಾನು ಭೂಮ್ಯಾಕಾಶಗಳನ್ನು ಅದುರಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ಯೆಹೂದ ಪ್ರಾಂತ್ಯದ ರಾಜ್ಯಪಾಲನಾದ ಜೆರುಬ್ಬಾಬೆಲನ ಬಳಿಗೆ ಹೋಗು. ನಾನು ಭೂಮ್ಯಾಕಾಶಗಳನ್ನು ಅಲ್ಲಾಡಿಸುವೆನು ಎಂದು ಅವನಿಗೆ ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನಿಗೆ ನೀನು ಹೇಳತಕ್ಕದ್ದೇನೆಂದರೆ, “ನಾನು ಆಕಾಶಗಳನ್ನೂ, ಭೂಮಿಯನ್ನೂ ಕದಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಗ್ಗಾಯ 2:21
14 ತಿಳಿವುಗಳ ಹೋಲಿಕೆ  

ಅರಸನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಆರನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೂ, ಯೆಹೋಚಾದಾಕನಿಗೆ ಜನಿಸಿದ ಮಹಾಯಾಜಕನಾದ ಯೆಹೋಶುವನಿಗೂ ಪ್ರವಾದಿಯಾದ ಹಗ್ಗಾಯನ ಮೂಲಕ ಹೇಳಿಕಳುಹಿಸಿದನು.


ಆಗ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್, ಯೋಚಾದಾಕನ ಮಗನಾದ ಯೇಷೂವ ಇವರು ಯೆರೂಸಲೇಮಿನ ದೇವಾಲಯವನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದರು. ದೇವಪ್ರವಾದಿಗಳು ಅವರೊಡನಿದ್ದು ಅವರಿಗೆ ಸಹಾಯಮಾಡುತ್ತಿದ್ದರು.


ಜನಾಂಗಗಳು ಕಳವಳಗೊಂಡವು; ರಾಜ್ಯಗಳು ತತ್ತರಿಸಿದವು. ಆತನು ಗರ್ಜಿಸಲು ಭೂಲೋಕವೆಲ್ಲಾ ಕರಗಿ ಹೋಯಿತು.


ಕೂಡಲೇ ಶೆಯಲ್ತೀಯೇಲನು ಮಗನೂ, ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಮತ್ತು ಸಮಸ್ತ ಜನರೆಲ್ಲರ ಮನಸ್ಸುಗಳನ್ನು ಸೇನಾಧೀಶ್ವರನಾದ ಯೆಹೋವನು ಪ್ರೇರೇಪಿಸಲು,


ಯೆಹೋವನು ಚೀಯೋನಿನಿಂದ ಗರ್ಜಿಸುತ್ತಾನೆ, ಯೆರೂಸಲೇಮಿನಿಂದ ಧ್ವನಿಗೈಯುತ್ತಾನೆ. ಭೂಮಿ ಹಾಗು ಆಕಾಶಗಳು ನಡುಗುತ್ತವೆ, ಆದರೆ ಯೆಹೋವನು ತನ್ನ ಜನರಿಗೆ ಆಶ್ರಯವೂ, ಮತ್ತು ಇಸ್ರಾಯೇಲರಿಗೆ ರಕ್ಷಣದುರ್ಗವೂ ಆಗಿರುವನು.


ಕರ್ತನಾದ ಯೆಹೋವನು ತೂರಿಗೆ ಹೀಗೆ ಹೇಳುತ್ತಾನೆ, “ನಿನ್ನ ಪತನದ ಶಬ್ದಕ್ಕೂ, ಗಾಯಪಟ್ಟವರು ಕೂಗುವಾಗಲೂ, ನಿನ್ನ ಮಧ್ಯದಲ್ಲಿ ಕೊಲೆಯಾಗುವಾಗಲೂ ದ್ವೀಪಗಳು ಅದರುವುದಿಲ್ಲವೇ?


ಅವರು ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ, ಸೆರಾಯ, ರೆಗೇಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್ ಮತ್ತು ಬಾಣ ಎಂಬ ನಾಯಕರೊಡನೆ ಹಿಂತಿರುಗಿ ಬಂದವರು:


ಪೆದಾಯನ ಮಕ್ಕಳು: ಜೆರುಬ್ಬಾಬೆಲ್ ಮತ್ತು ಶಿಮ್ಮೀ. ಜೆರುಬ್ಬಾಬೆಲನ ಮಕ್ಕಳು: ಮೆಷುಲ್ಲಾಮ್ ಮತ್ತು ಹನನ್ಯ. ಶೆಲೋಮೀತ್ ಎಂಬ ಮಗಳೂ ಇದ್ದಳು.


ಧ್ವಂಸ, ನಾನು ಧ್ವಂಸ ಮಾಡುವೆನು; ರಾಜ್ಯಕ್ಕೆ ಬಾಧ್ಯನು ಬರುವುದರೊಳಗೆ ಒಂದೂ ಇದ್ದಂತೆ ಇರದು; ಅವನಿಗೆ ರಾಜ್ಯವನ್ನು ವಹಿಸುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು