ಹಗ್ಗಾಯ 2:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ರಾಜ್ಯಗಳ ಸಿಂಹಾಸನವನ್ನು ಕೆಡವಿ, ಜನಾಂಗಗಳ ಸಂಸ್ಥಾನ ಬಲವನ್ನು ಧ್ವಂಸಮಾಡಿ ರಥಗಳನ್ನೂ ಮತ್ತು ಅದರ ಸವಾರರನ್ನು ದೊಬ್ಬಿಬಿಡುವೆನು; ಕುದುರೆಗಳೂ ಹಾಗೂ ರಾಹುತರೂ ಬಿದ್ದುಹೋಗುವರು, ಪ್ರತಿಯೊಬ್ಬನೂ ತನ್ನ ಕಡೆಯವನ ಕತ್ತಿಯಿಂದ ಹತನಾಗುವನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ರಾಜ್ಯಗಳ ಸಿಂಹಾಸನವನ್ನು ಕೆಡವಿಬಿಡುವೆನು. ರಾಷ್ಟ್ರಗಳ ಸಂಸ್ಥಾನಬಲವನ್ನು ಧ್ವಂಸಮಾಡುವೆನು. ರಥಗಳನ್ನೂ ರಥಾರೂಢರನ್ನೂ ದಬ್ಬಿಬಿಡುವೆನು. ಕುದುರೆಗಳೂ ರಾಹುತರೂ ಬಿದ್ದುಹೋಗುವರು; ಒಬ್ಬನು ಮತ್ತೊಬ್ಬನ ಕತ್ತಿಗೆ ತುತ್ತಾಗುವನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ರಾಜ್ಯಗಳ ಸಿಂಹಾಸನವನ್ನು ಕೆಡವಿ ಜನಾಂಗಗಳ ಸಂಸ್ಥಾನಬಲವನ್ನು ಧ್ವಂಸ ಮಾಡಿ ರಥಗಳನ್ನೂ ರಥಾರೂಢರನ್ನೂ ದೊಬ್ಬಿಬಿಡುವೆನು; ಕುದುರೆಗಳೂ ರಾಹುತರೂ ಬಿದ್ದು ಹೋಗುವರು, ಪ್ರತಿಯೊಬ್ಬನು ತನ್ನ ಕಡೆಯವನ ಕತ್ತಿಯಿಂದ ಹತನಾಗುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ನಾನು ಅನೇಕ ಅರಸರನ್ನೂ ದೇಶಗಳನ್ನೂ ಕೆಡವಿಹಾಕುವೆನು; ಆ ಅನ್ಯ ಜನರ ಬಲಿಷ್ಠ ಸಾಮ್ರಾಜ್ಯಗಳನ್ನು ನಾಶಮಾಡುವೆನು. ಅವರ ರಥಗಳನ್ನೂ ರಾಹುತರನ್ನೂ ನಾಶಮಾಡುವೆನು. ಅವರ ಯುದ್ಧದ ಕುದುರೆಗಳನ್ನೂ ಸವಾರರನ್ನೂ ಸೋಲಿಸುವೆನು. ಆ ಸೈನ್ಯಗಳವರು ಈಗ ಸ್ನೇಹಿತರಾಗಿದ್ದರೂ ಒಬ್ಬರಿಗೊಬ್ಬರು ವೈರಿಗಳಾಗಿ ಒಬ್ಬರನ್ನೊಬ್ಬರು ಖಡ್ಗಗಳಿಂದ ಕೊಲ್ಲುವರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ರಾಜ್ಯಗಳ ಸಿಂಹಾಸನವನ್ನು ಕೆಡವಿಹಾಕುವೆನು. ನಾನು ಇತರ ಜನಾಂಗಗಳ, ರಾಜ್ಯಗಳ ಬಲವನ್ನು ನಾಶಮಾಡುವೆನು. ರಥಗಳನ್ನೂ, ಅವುಗಳಲ್ಲಿ ಸವಾರಿ ಮಾಡುವವರನ್ನೂ ಕೆಡವಿಹಾಕುವೆನು. ಕುದುರೆಗಳೂ ಅದರ ಸವಾರರೂ ಪ್ರತಿಯೊಬ್ಬನೂ ತನ್ನ ಸಹೋದರನ ಖಡ್ಗದಿಂದ ಬೀಳುವನು. ಅಧ್ಯಾಯವನ್ನು ನೋಡಿ |