ಹಗ್ಗಾಯ 2:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ‘ನೀವು ಐಗುಪ್ತದಿಂದ ಪಾರಾಗಿ ಬಂದಾಗ, ನಾನು ನಿಮಗೆ ವಾಗ್ದಾನವಾಗಿ ಕೊಟ್ಟ ಮಾತನ್ನು ನೆರವೇರಿಸುವೆನು; ನನ್ನ ಆತ್ಮನು ನಿಮ್ಮ ಮಧ್ಯದಲ್ಲಿ ನೆಲೆಗೊಂಡಿರುವನು; ಹೆದರಬೇಡಿರಿ.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನೀವು ಈಜಿಪ್ಟ್ ದೇಶದಿಂದ ಹೊರಟುಬಂದಾಗ ನಾನು ನಿಮಗೆ ಪ್ರಮಾಣವಾಗಿ ಕೊಟ್ಟ ಮಾತನ್ನು ನೆರವೇರಿಸುವೆನು. ನನ್ನ ಆತ್ಮವು ನಿಮ್ಮಲ್ಲಿ ನೆಲೆಗೊಂಡಿದೆ; ಭಯಪಡದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನೀವು ಐಗುಪ್ತದಿಂದ ಪಾರಾಗಿ ಬಂದಾಗ ನಾನು ನಿಮಗೆ ಪ್ರಮಾಣವಾಗಿ ಕೊಟ್ಟ ಮಾತನ್ನು [ನೆರವೇರಿಸುವೆನು]; ನನ್ನ ಆತ್ಮನು ನಿಮ್ಮ ಮಧ್ಯದಲ್ಲಿ ನೆಲೆಗೊಂಡಿರುವನು; ಹೆದರಬೇಡಿರಿ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯೆಹೋವನು ಹೇಳುವುದೇನೆಂದರೆ, “‘ನೀವು ಈಜಿಪ್ಟ್ ದೇಶವನ್ನು ಬಿಟ್ಟಾಗ ನಾನು ನಿಮ್ಮೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡೆನು. ನಾನು ಆ ವಾಗ್ದಾನವನ್ನು ನೆರವೇರಿಸಿದ್ದೇನೆ! ನನ್ನ ಆತ್ಮವು ನಿಮ್ಮೊಂದಿಗಿದೆ. ಆದ್ದರಿಂದ ಭಯಪಡಬೇಡಿ!’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನೀವು ಈಜಿಪ್ಟಿನೊಳಗಿನಿಂದ ಹೊರಗೆ ಬಂದಾಗ, ನಾನು ನಿಮ್ಮ ಸಂಗಡ ಒಡಂಬಡಿಕೆ ಮಾಡಿದ ವಾಕ್ಯದ ಪ್ರಕಾರ, ನನ್ನ ಆತ್ಮವು ನಿಮ್ಮಲ್ಲಿ ನೆಲೆಗೊಂಡಿರುವುದು. ನೀವು ಭಯಪಡಬೇಡಿರಿ. ಅಧ್ಯಾಯವನ್ನು ನೋಡಿ |