ಹಗ್ಗಾಯ 2:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
9 ‘ಈ ಆಲಯದ ಮುಂದಿನ ವೈಭವವು ಹಿಂದಿನ ವೈಭವಕ್ಕಿಂತ ವಿಶೇಷವಾಗಿರುವುದು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ. ‘ಈ ಸ್ಥಳದಲ್ಲಿ ಸಮಾಧಾನವನ್ನು ಅನುಗ್ರಹಿಸುವೆನು’” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
9 ಈ ಆಲಯದ ಮುಂದಿನ ವೈಭವವು ಹಿಂದಿನ ವೈಭವಕ್ಕಿಂತ ವಿಶೇಷವಾಗಿರುವದು; ಇದು ಸೇನಾಧೀಶ್ವರ ಯೆಹೋವನ ನುಡಿ; ಈ ಸ್ಥಳದಲ್ಲಿ ಸಮಾಧಾನವನ್ನು ಅನುಗ್ರಹಿಸುವೆನು, ಇದು ಸೇನಾಧೀಶ್ವರ ಯೆಹೋವನ ನುಡಿ.
9 ‘ಈ ಅಂತಿಮ ದೇವಾಲಯವು ಮೊದಲನೆ ಆಲಯಕ್ಕಿಂತಲೂ ಸುಂದರವಾಗಿಯೂ ವೈಭವವಾಗಿಯೂ ಇರುವುದು! ನಾನು ಈ ಸ್ಥಳಕ್ಕೆ ಸಮಾಧಾನವನ್ನು ತರುವೆನು!’ ಜ್ಞಾಪಕದಲ್ಲಿಡಿ, ಇವುಗಳನ್ನು ಸರ್ವಶಕ್ತನಾದ ಯೆಹೋವನು ಹೇಳುತ್ತಿದ್ದಾನೆ!”
9 ‘ಈಗಿರುವ ಆಲಯದ ಮಹಿಮೆಯು, ಹಿಂದಿನ ಆಲಯದ ಮಹಿಮೆಗಿಂತ ವಿಶೇಷವಾಗಿರುವುದು,’ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. ‘ನಾನೇ ಈ ಸ್ಥಳದಲ್ಲಿ ಸಮಾಧಾನ ಕೊಡುವೆನು,’ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.”
“ನಾನು ನನ್ನ ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.
ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.
ಆತನೇ ನಮಗೆ ಸಮಾಧಾನಪ್ರದನು. ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ, ನಮ್ಮ ಅರಮನೆಗಳನ್ನು ತುಳಿದುಹಾಕುವಾಗ, ನಾವು ಅವರಿಗೆ ವಿರುದ್ಧವಾಗಿ ಏಳು ಪಾಲಕರನ್ನು ಹೌದು ಎಂಟು ಪುರುಷಶ್ರೇಷ್ಠರನ್ನು ನೇಮಿಸುವೆವು.
ಕೇದಾರಿನ ಹಿಂಡುಗಳೆಲ್ಲಾ ನಿನ್ನಲ್ಲಿ ಕೂಡುವವು; ನೆಬಾಯೋತಿನ ಟಗರುಗಳು ನೀನು ಮಾಡುವ ಯಜ್ಞಕ್ಕೆ ಅನುಕೂಲಿಸುವವು. ಅವು ನನ್ನ ಯಜ್ಞವೇದಿಯ ಮೇಲೆ ಸಮರ್ಪಕವಾಗಿ ಒಯ್ಯಲ್ಪಡುವವು; ಮಹಿಮೆಯಿಂದ ಕೂಡಿದ ನನ್ನ ಆಲಯವನ್ನು ಘನಪಡಿಸುವೆನು.
ಯೆಹೋವನು ಹೀಗೆನ್ನುತ್ತಾನೆ, “ಇಗೋ, ನಾನು ಆಕೆಗೆ ಸುಖವನ್ನು ನದಿಯಂತೆ ದಯಪಾಲಿಸಿ, ತುಂಬಿ ತುಳುಕುವ ತೊರೆಯನ್ನೋ ಎಂಬಂತೆ ಜನಾಂಗಗಳ ವೈಭವವನ್ನು ನೀಡುವೆನು; ನೀವು ಪಾನಮಾಡುವಿರಿ; ನಿಮ್ಮನ್ನು ಕಂಕುಳಲ್ಲಿ ಎತ್ತಿಕೊಂಡು ಹೋಗುವರು, ತೊಡೆಯ ಮೇಲೆ ನಲಿದಾಡಿಸುವರು.
‘ಈ ಆಲಯದ ಪೂರ್ವ ವೈಭವವನ್ನು ನೋಡಿದವರು, ನಿಮ್ಮಲ್ಲಿ ಎಷ್ಟು ಮಂದಿ ಉಳಿದಿದ್ದೀರಿ? ಇದರ ಈಗಿನ ಸ್ಥಿತಿಯು ನಿಮಗೆ ಹೇಗೆ ತೋರುತ್ತದೆ? ನಿಮ್ಮ ದೃಷ್ಟಿಗೆ ಏನೂ ಇಲ್ಲವಾಗಿ ತೋರುತ್ತಿದೆಯಲ್ಲವೇ?’