ಹಬಕ್ಕೂಕ 1:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನನ್ನ ದೇವರಾದ ಯೆಹೋವನೇ, ನನ್ನ ಸದಮಲಸ್ವಾಮಿಯೇ, ನೀನು ಅನಾದಿಯಿಂದಿದ್ದೀಯಲ್ಲಾ, ನಾವು ಖಂಡಿತ ಸಾಯುವುದಿಲ್ಲ. ಯೆಹೋವನೇ ನಮ್ಮ ನ್ಯಾಯತೀರ್ಪಿಗಾಗಿ ಅವರನ್ನು ನೇಮಿಸಿರುವೆ; ಶರಣನೇ, ನಮ್ಮನ್ನು ಶಿಕ್ಷಿಸುವುದಕ್ಕಾಗಿ ಅವರನ್ನು ನಮ್ಮ ಮುಂದೆ ನಿಲ್ಲಿಸಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಸರ್ವೇಶ್ವರಾ, ನನ್ನ ದೇವರೇ, ಪರಮಪಾವನ ಸ್ವಾಮಿಯೇ, ಅನಾದಿಯಿಂದ ಇರುವಂಥವರು ನೀವು. ನಾವು ಖಂಡಿತ ಸಾಯುವುದಿಲ್ಲ. ನಮ್ಮನ್ನು ದಂಡಿಸುವಂತೆ ಆ ಬಾಬಿಲೋನಿನವರನ್ನು ನೇಮಿಸಿದವರು ನೀವು; ಅವರನ್ನು ಪ್ರಬಲಗೊಳಿಸಿದವರು ನೀವು. ನಮಗೆ ಪೊರೆಬಂಡೆ ನೀವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನನ್ನ ದೇವರಾದ ಯೆಹೋವನೇ, ನನ್ನ ಸದಮಲಸ್ವಾವಿುಯೇ, ನೀನು ಅನಾದಿಯಿಂದಿದ್ದೀಯಲ್ಲಾ; ನಾವು ಸಾಯೆವು. ಯೆಹೋವನೇ, [ನಮ್ಮ] ನ್ಯಾಯತೀರ್ಪಿಗಾಗಿ ಅವರನ್ನು ನೇವಿುಸಿದ್ದೀ; ಶರಣನೇ, [ನಮ್ಮ] ಶಿಕ್ಷೆಗಾಗಿ ಅವರನ್ನು ನಿಲ್ಲಿಸಿದ್ದೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆಗ ಹಬಕ್ಕೂಕನು ಹೇಳಿದ್ದೇನೆಂದರೆ, ಯೆಹೋವನೇ, ನೀನು ನಿತ್ಯಕಾಲಕ್ಕೂ ಜೀವಿಸುವ ದೇವರು. ನೀನು ಎಂದಿಗೂ ಸಾಯದ ನನ್ನ ಪರಿಶುದ್ಧ ದೇವರು. ನೀನು ಯೋಚಿಸುವದನ್ನು ನೆರವೇರಿಸಲು ಬಾಬಿಲೋನಿನವರನ್ನು ಸೃಷ್ಟಿಸಿರುವೆ. ನಮ್ಮ ಬಂಡೆಯಾದ ನೀನು ಯೆಹೂದದ ಜನರನ್ನು ಶಿಕ್ಷಿಸುವುದಕ್ಕಾಗಿಯೇ ಅವರನ್ನು ಸೃಷ್ಟಿಸಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಯೆಹೋವ ದೇವರೇ, ನೀವು ಅನಾದಿಕಾಲದಿಂದ ಬಂದವರಲ್ಲವೇ? ನನ್ನ ದೇವರೇ, ನನ್ನ ಪರಿಶುದ್ಧರೇ, ನೀನು ಎಂದಿಗೂ ಸಾಯುವುದಿಲ್ಲ. ಯೆಹೋವ ದೇವರೇ, ನ್ಯಾಯತೀರ್ಪನ್ನು ಜಾರಿಗೊಳಿಸಲು ಅವರನ್ನು ನೇಮಿಸಿದ್ದೀರಿ. ನನ್ನ ಬಂಡೆಯೇ, ನೀವು ಶಿಕ್ಷಿಸಲು ಅವರನ್ನು ನೇಮಕ ಮಾಡಿದ್ದೀರಿ. ಅಧ್ಯಾಯವನ್ನು ನೋಡಿ |
“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.