ಹಬಕ್ಕೂಕ 1:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನೀನು ಕೇಡನ್ನು ಬಯಸುವಂತಹ ದೇವರಲ್ಲ, ಪವಿತ್ರ ದೃಷ್ಟಿಯಿಂದ ನೋಡುವ ನಿನ್ನ ಕಣ್ಣಿನ ರಕ್ಷಣೆ ನಮ್ಮೊಂದಿಗಿದೆ. ಆದರೆ ನಮಗಾಗುತ್ತಿರುವ ಕೇಡನ್ನು ನೋಡಿಯೂ ಏಕೆ ಸುಮ್ಮನಿರುವೆ? ದುಷ್ಟರು ತಮಗಿಂತ ಯೋಗ್ಯನನ್ನು ಕಬಳಿಸುತ್ತಿರುವುದನ್ನು ನೋಡಿ ಏಕೆ ಸುಮ್ಮನಿರುವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಕೇಡನ್ನು ನೋಡಲಾರದಷ್ಟು ನಿಷ್ಕಳಂಕ ನಿಮ್ಮ ಕಣ್ಣು. ಕೆಡುಕನ್ನು ಸಹಿಸಲಾಗದಸ್ಟು ಪವಿತ್ರರು ನೀವು. ಇಂತಿರಲು ಕೆಡುಕನ್ನು ನೋಡಿಕೊಂಡಿರುವಿರೇಕೆ? ದುಷ್ಟನು ಶಿಷ್ಟನಾದವನನ್ನು ಕಬಳಿಸುತ್ತಿರುವುದನ್ನು ನೋಡಿ ಸುಮ್ಮನಿರುವಿರೇಕೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಕೇಡನ್ನು ನೋಡಲಾರದ ಅತಿಪವಿತ್ರ ದೃಷ್ಟಿಯುಳ್ಳವನೇ, ಕೆಡುಕನ್ನು ಕಟಾಕ್ಷಿಸಲಾರದವನೇ, ಏಕೆ ಕೆಡುಕರನ್ನು ಕಟಾಕ್ಷಿಸುತ್ತೀ? ದುಷ್ಟನು ತನಗಿಂತ ಯೋಗ್ಯನನ್ನು ನುಂಗಿಬಿಡುವಾಗ ಏಕೆ ಸುಮ್ಮನಿದ್ದೀ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಕೆಡುಕನ್ನು ದೃಷ್ಟಿಸಲಾರದಷ್ಟು ನಿನ್ನ ಕಣ್ಣುಗಳು ಶುದ್ಧವಾಗಿವೆ. ಜನರು ಮಾಡುವ ದುಷ್ಕೃತ್ಯಗಳನ್ನು ನೀನು ನೋಡಲಾರೆ. ಹೀಗಿರಲು ಆ ಕೆಡುಕರು ಜಯಗಳಿಸುವದನ್ನು ನೀನು ಹೇಗೆ ವೀಕ್ಷಿಸಬಲ್ಲೆ? ದುಷ್ಟರು ಒಳ್ಳೆಯವರನ್ನು ಸೋಲಿಸಿದಾಗ ನೀನು ನಿನ್ನ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಬಾರದೇಕೆ? ಒಳ್ಳೆಯ ಜನರನ್ನು ಕೆಟ್ಟ ಜನರು ಸೋಲಿಸುವುದನ್ನು ನೀನು ಹೇಗೆ ನೋಡುವೆ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನೀನು ಕೆಟ್ಟದ್ದನ್ನು ನೋಡದ ಹಾಗೆ ಶುದ್ಧ ಕಣ್ಣುಗಳುಳ್ಳವರು. ನೀವು ಅನ್ಯಾಯವನ್ನು ದೃಷ್ಟಿಸಲಾರಿರಿ, ವಂಚಿಸುವವರನ್ನು ಏಕೆ ಸಹಿಸಿಕೊಳ್ಳುತ್ತೀರಿ? ದುಷ್ಟನು ತನಗಿಂತ ನೀತಿವಂತನನ್ನು ನುಂಗಿ ಬಿಡುವ ವೇಳೆಯಲ್ಲಿ ಏಕೆ ಸುಮ್ಮನಿರುತ್ತೀರಿ? ಅಧ್ಯಾಯವನ್ನು ನೋಡಿ |