Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 1:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ತಮ್ಮ ಬಲೆಗಳಿಗೆ ಆರಾಧನೆ ಮಾಡುತ್ತಾ ಬಲಿ ಕೊಡುತ್ತಾರೆ, ತಮ್ಮ ಜಾಲಗಳ ಎದುರು ಧೂಪಹಾಕುತ್ತಾರೆ; ಅವುಗಳ ಮೂಲಕವೇ ಅವರ ಭೋಜನವು ಪುಷ್ಟಿಯಾಯಿತು, ಅವರ ಆಹಾರವು ರುಚಿ ಎಂದು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ತಮ್ಮ ಬಲೆಗೆ ಬಲಿಕೊಡುತ್ತಾರೆ; ಧೂಪ ಹಾಕುತ್ತಾರೆ. ಅವುಗಳ ಮೂಲಕವೇ ಅವರ ಜೀವನ ಗಟ್ಟಿ; ಅವರ ಭೋಜನ ಪುಷ್ಟಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ತನ್ನ ಬಲೆಗೆ ಬಲಿಕೊಡುತ್ತಾನೆ, ತನ್ನ ಜಾಲಕ್ಕೆ ಧೂಪಹಾಕುತ್ತಾನೆ; ಅವುಗಳ ಮೂಲಕವೇ ಅವನ ಭೋಜನವು ಪುಷ್ಟಿ, ಅವನ ಆಹಾರವು ರುಚಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅವನ ಬಲೆಗಳು ಅವನು ಧನಿಕನಂತೆ ಜೀವಿಸಲು ಸಹಾಯ ಮಾಡುವವು. ಅವನು ಒಳ್ಳೆಯ ಆಹಾರವನ್ನು ಉಣ್ಣುವನು. ಅದಕ್ಕೆ ವೈರಿಯು ತನ್ನ ಬಲೆಯನ್ನು ಆರಾಧಿಸುವನು. ಅವನು ಯಜ್ಞವನ್ನರ್ಪಿಸಿ ಧೂಪ ಹಾಕುವನು. ಬಲೆಯನ್ನು ಗೌರವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದ್ದರಿಂದ ತಮ್ಮ ಬಲೆಗೆ ಬಲಿ ಅರ್ಪಿಸಿ, ತಮ್ಮ ಜಾಲಕ್ಕೆ ಧೂಪವನ್ನು ಸುಡುತ್ತಾರೆ. ಏಕೆಂದರೆ ಇವುಗಳಿಂದ ಅವರ ಭೋಜನ ಪುಷ್ಟಿಯಾಗಿಯೂ, ಅವರ ಆಹಾರ ರುಚಿಯುಳ್ಳದ್ದಾಗಿಯೂ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 1:16
11 ತಿಳಿವುಗಳ ಹೋಲಿಕೆ  

ಬಿರುಗಾಳಿಯಂತೆ ಬಂದು ಮಾಯವಾಗುವರು. ತಮ್ಮ ಸ್ವಂತ ಬಲವೇ ದೇವರು ಎಂದು ಭಾವಿಸಿ ಅಹಂಕಾರದಿಂದ ದೇವರನ್ನು ತಾತ್ಸಾರಮಾಡಿ ಅಪರಾಧಿಗಳಾಗಿ ದೈವಕೋಪಕ್ಕೆ ಗುರಿಯಾಗುವರು.


ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಮುಂದೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ, ಪತ್ನಿ ಹಾಗೂ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ, ಕಣ್ಣು, ಕಿವಿ ಇಲ್ಲದ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ಮರ, ಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ, ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ.


“ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯ ಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವುದು ಇಗೋ, ಮಹಾ ಪಟ್ಟಣವಾದ ಈ ಬಾಬೆಲ್” ಎಂದು ಕೊಚ್ಚಿಕೊಂಡನು.


“ಇಗೋ, ನೀನು ದಾನಿಯೇಲನಿಗಿಂತಲೂ ಜ್ಞಾನಿಯಾಗಿರುವೆಯಾ; ನಿನಗೆ ರಹಸ್ಯವಾದುದು ಯಾವುದೇ ಇದ್ದರು ನಿನಗೆ ಮರೆಯಾಗಿರುವುದಿಲ್ಲ?


ನಿಮ್ಮ ಮನಸ್ಸಿನೊಳಗೆ, “ಈ ಭಾಗ್ಯವು ನಮ್ಮ ಸಾಮರ್ಥ್ಯ ಮತ್ತು ಸಾಹಸಗಳಿಂದಲೇ ನಮಗುಂಟಾಯಿತು” ಎಂದು ಅಂದುಕೊಂಡೀರಿ.


“ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಐಗುಪ್ತದ ಅರಸನಾದ ಫರೋಹನೇ, ನಿನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು, ‘ಈ ನದಿ ನನ್ನದೇ, ನನಗಾಗಿಯೇ ಅದನ್ನು ಮಾಡಿಕೊಂಡಿದ್ದೇನೆ’ ಎಂದು ಹೇಳಿಕೊಳ್ಳುವ ದೊಡ್ಡ ಮೊಸಳೆಯೇ, ಇಗೋ, ನಾನು ನಿನ್ನ ವಿರುದ್ಧವಾಗಿದ್ದೇನೆ.


ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ, ‘ನನ್ನ ರಥಸಮೂಹದೊಡನೆ ಪರ್ವತಶಿಖರಗಳನ್ನು ಹತ್ತಿದ್ದೇನೆ. ಲೆಬನೋನಿನ ದುರ್ಗಮಸ್ಥಳಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು ವೃಕ್ಷಗಳನ್ನೂ, ಶ್ರೇಷ್ಠವಾದ ತುರಾಯಿ ಮರಗಳನ್ನೂ ಕಡಿದು ಬಿಟ್ಟಿದ್ದೇನೆ; ಅಲ್ಲಿನ ಬಹುದೂರದ ಶಿಖರವನ್ನೂ, ಉದ್ಯಾನವನಗಳನ್ನೂ ಪ್ರವೇಶಿಸಿದ್ದೇನೆ.


ಭೂಲೋಕದಲ್ಲಿರುವ ಪುಷ್ಟರೆಲ್ಲರೂ ಆರಾಧಿಸುವರು; ತಮ್ಮ ಜೀವವನ್ನು ಉಳಿಸಿಕೊಳ್ಳಲಾರದೆ ಮಣ್ಣು ಪಾಲಾಗುವವರೆಲ್ಲರೂ ಆತನಿಗೆ ಅಡ್ಡಬೀಳುವರು.


ಪ್ರವಾಸಿಗಳಾಗಿ ನೀವು ಬಂದಿರುವ ಐಗುಪ್ತ ದೇಶದಲ್ಲಿ ಅನ್ಯದೇವತೆಗಳಿಗೆ ಧೂಪಹಾಕುವ ದುಷ್ಕೃತ್ಯವನ್ನು ನಡೆಸುತ್ತಾ ನನ್ನನ್ನು ಕೆಣಕುವುದರಿಂದ ನೀವು ನಿರ್ಮೂಲರಾಗಿ ಸಕಲ ಭೂರಾಜ್ಯಗಳ ಶಾಪ ಮತ್ತು ದೂಷಣೆಗಳಿಗೆ ಗುರಿಯಾಗುವಿರಿ.


ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುವುದಿಲ್ಲ ಎಂದು ನಾವು ಬಾಯಿಬಿಟ್ಟು ಹೇಳಿದ ಮಾತುಗಳನ್ನೆಲ್ಲಾ ಖಂಡಿತವಾಗಿ ನೆರವೇರಿಸುವೆವು. ಮೊದಲು ಯೆಹೂದದ ಊರುಗಳಲ್ಲಿ ಮತ್ತು ಯೆರೂಸಲೇಮಿನ ಬೀದಿಗಳಲ್ಲಿ ನಾವೂ ಮತ್ತು ನಮ್ಮ ಪೂರ್ವಿಕರೂ ನಮ್ಮ ಅರಸರೂ, ನಮ್ಮ ಪ್ರಧಾನರೂ ಹೀಗೆ ಮಾಡುತ್ತಿದ್ದಾಗ ನಾವು ಯಾವ ಕೇಡನ್ನೂ ಕಾಣದೆ ಹೊಟ್ಟೆತುಂಬಾ ಉಂಡು ಸುಖಪಡುತ್ತಿದ್ದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು