Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 1:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಕೇಡನ್ನೇ ನನ್ನ ಕಣ್ಣಿಗೆ ಏಕೆ ಕಾಣಿಸುವಂತೆ ಮಾಡಿದ್ದಿ? ಕಷ್ಟವನ್ನೇಕೆ ಅನುಭವಿಸುವಂತೆ ಮಾಡಿರುವೆ? ಹಿಂಸೆಬಾಧೆಗಳು ನನ್ನ ಕಣ್ಣೆದುರಿಗೆ ಇದ್ದೇ ಇವೆ; ಜಗಳವಾಗುತ್ತಿದೆ ವ್ಯಾಜ್ಯವೇಳುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಕೇಡನ್ನು ನಾ ನೋಡುವಂತೆ ಮಾಡಿದೆಯೇಕೆ? ಕಷ್ಟವನ್ನು ನಾ ಕಾಣುವಂತೆ ಮಾಡಿದೆಯೇಕೆ? ಹಿಂಸೆಬಾಧೆಗಳು ಇವೆ ನನ್ನ ಕಣ್ಣ ಮುಂದೆ. ಇಗೋ, ಜಗಳ ನಡೆಯುತಿದೆ, ವ್ಯಾಜ್ಯವೇಳುತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಕೇಡನ್ನು ನನ್ನ ಕಣ್ಣಿಗೆ ಏಕೆ ಬೀಳಿಸುತ್ತಿದ್ದೀ? ಕಷ್ಟವನ್ನೇಕೆ ನನಗೆ ತೋರಿಸುತ್ತಿದ್ದೀ? ಹಿಂಸೆಬಾಧೆಗಳು ನನ್ನ ಕಣ್ಣೆದುರಿಗೆ ಇದ್ದೇ ಇವೆ; ಜಗಳವಾಗುತ್ತಿದೆ, ವ್ಯಾಜ್ಯವೇಳುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಜನರು ವಸ್ತುಗಳನ್ನು ಕದ್ದುಕೊಂಡು ಇತರರನ್ನು ಗಾಯಗೊಳಿಸುತ್ತಿದ್ದಾರೆ. ಜನರು ಜಗಳ ಮಾಡುತ್ತಾ ಕಾದಾಡುತ್ತಿದ್ದಾರೆ. ಇಂಥಾ ಭಯಂಕರ ಸಂಗತಿಗಳನ್ನು ನೋಡುವಂತೆ ಯಾಕೆ ಮಾಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅನ್ಯಾಯವನ್ನು ನಾನು ನೋಡುವಂತೆ ಏಕೆ ಮಾಡುತ್ತೀರಿ? ತಪ್ಪನ್ನು ಏಕೆ ಸಹಿಸುತ್ತೀರಿ? ನಾಶವೂ ಹಿಂಸೆಯೂ ನನ್ನ ಮುಂದೆ ಇವೆ. ಹೋರಾಟವೂ ಒಡುಕೂ ಹೆಚ್ಚುತ್ತಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 1:3
16 ತಿಳಿವುಗಳ ಹೋಲಿಕೆ  

ನಾನು ಮಾತನಾಡುವುದೆಲ್ಲಾ ಅರಚಾಟವೇ. “ಬಲಾತ್ಕಾರ, ಕೊಳ್ಳೆ” ಎಂದೇ ಕೂಗಿಕೊಳ್ಳುತ್ತೇನೆ. ನಾನು ಸಾರುವ ಯೆಹೋವನ ವಾಕ್ಯವು ನನ್ನನ್ನು ಜನರ ದೂಷಣೆಗೂ ಪರಿಹಾಸ್ಯಕ್ಕೂ ಗುರಿಮಾಡಿದೆ.


ಸಂಸ್ಥಾನದಲ್ಲಿ ಬಡವರ ಹಿಂಸೆಯನ್ನೂ, ನೀತಿನ್ಯಾಯಗಳ ನಾಶನವನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಹೆಚ್ಚಿನ ಅಧಿಕಾರವುಳ್ಳವನಿದ್ದಾನೆ.


ಏಕೆಂದರೆ ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯ ಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿಮಿತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ಬಹಳವಾಗಿ ನೊಂದುಕೊಂಡನು.


“ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.


“ನರಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯದಲ್ಲಿದ್ದರೂ ಅವರಿಗೆ ಭಯಪಡಬೇಡ, ಅವರ ಗದರಿಕೆಗೆ ಹೆದರದಿರು; ಅವರು ತಿರುಗಿ ಬೀಳುವ ವಂಶದವರು; ಅವರ ಬಿರುನುಡಿಗೆ ಭಯಪಡಬೇಡ, ಅವರ ಬಿರುನೋಟಕ್ಕೆ ಹೆದರದಿರು.


ಆ ಮೇಲೆ ಪುನಃ ದೃಷ್ಟಿಸಿ ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನೋಡಿದೆನು. ಆಹಾ! ಹಿಂಸೆಗೊಂಡವರ ಕಣ್ಣೀರನ್ನು ನೋಡು. ಅವರನ್ನು ಸಂತೈಸುವವರು ಯಾರೂ ಇಲ್ಲ. ಅವರನ್ನು ಹಿಂಸಿಸುವವರಿಗೆ ಬಹಳ ಬಲ ಇದೆ. ಹಿಂಸೆಗೊಂಡವರನ್ನು ಸಂತೈಸುವವರು ಒಬ್ಬರೂ ಇಲ್ಲ.


ನನ್ನ ತಾಯೀ, ನನ್ನ ಗತಿಯನ್ನು ಏನು ಹೇಳಲಿ! ನಿನ್ನ ಗರ್ಭದಿಂದ ಬಂದ ನಾನು ಲೋಕದವರೆಲ್ಲರಿಗೆ ಜಗಳಗಂಟಿಗನೂ, ವ್ಯಾಜ್ಯಗಾರನೂ ಆಗಿದ್ದೇನಲ್ಲಾ. ನಾನು ಹಣವನ್ನು ಬಡ್ಡಿಗೆ ಕೊಟ್ಟವನಲ್ಲ, ತೆಗೆದುಕೊಂಡವನಲ್ಲ, ಆದರೂ ನನ್ನನ್ನು ಎಲ್ಲರೂ ನಿಂದಿಸುತ್ತಾರೆ.


ನಾನು ಶ್ರಮದುಃಖಗಳನ್ನು ನೋಡುವುದಕ್ಕೂ, ನನ್ನ ಆಯುಸ್ಸು ಅವಮಾನದಿಂದ ಕ್ಷಯಿಸುವುದಕ್ಕೂ ಗರ್ಭದಿಂದ ಏಕೆ ಹೊರಟು ಬಂದೆನು?


ಸೇನಾಧೀಶ್ವರನಾದ ಯೆಹೋವನ ದ್ರಾಕ್ಷಿಯ ತೋಟವು ಇಸ್ರಾಯೇಲರ ಮನೆಯೇ, ಯೆಹೂದದ ಜನವೇ, ಆತನ ಇಷ್ಟದ ಗಿಡ. ಆತನು ನ್ಯಾಯವನ್ನು ನಿರೀಕ್ಷಿಸಲು ನರಹತ್ಯೆ, ನೀತಿಯನ್ನು ನಿರೀಕ್ಷಿಸಿಲು ಗೋಳಾಟವೂ ಸಿಕ್ಕಿತ್ತು.


ಕಠಿಣ ಹೃದಯದವರೇ, ನೀತಿಗೆ ದೂರವಾದವರೇ, ನನ್ನ ಮಾತಿಗೆ ಕಿವಿಗೊಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು