ಹಬಕ್ಕೂಕ 1:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಇಗೋ, ನಾನು ಶಕ್ತಿಶಾಲಿಗಳೂ, ತೀಕ್ಷ್ಣಬುದ್ಧಿಯುಳ್ಳವರೂ ಆಗಿರುವ ಕಸ್ದೀಯ ಜನಾಂಗದವರನ್ನು ನಿಮ್ಮ ವಿರುದ್ಧ ಹುರಿದುಂಬಿಸಿ ಎಬ್ಬಿಸುತ್ತೇನೆ; ಆ ಜನರು ಭಯಂಕರರೂ, ಉಗ್ರರೂ ಆಗಿ ತಮ್ಮದಲ್ಲದ ಸಂಸ್ಥಾನವನ್ನು ವಶಮಾಡಿಕೊಳ್ಳುವರು ಮತ್ತು ಲೋಕದಲ್ಲೆಲ್ಲಾ ಸಂಚರಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಇಗೋ, ಬಾಬಿಲೋನಿನವರನ್ನು ಹುರಿದುಂಬಿಸಲಿದ್ದೇನೆ. ಅವರು ಭಯೋತ್ಪಾದಕರು ಹಾಗೂ ಉಗ್ರಗಾಮಿಗಳು. ಅವರು ಜಗದ ಉದ್ದಗಲಕ್ಕೂ ಹರಡಿ ತಮ್ಮದಲ್ಲದ ನಾಡುಗಳನ್ನು ಆಕ್ರಮಿಸಿಕೊಳ್ಳಲು ಸಂಚರಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಇಗೋ, ತೀಕ್ಷ್ಣವೂ ತೀವ್ರವೂ ಆದ ಕಸ್ದೀಯ ಜನಾಂಗವನ್ನು ಎಬ್ಬಿಸುತ್ತಿದ್ದೇನೆ; ಆ ಜನರು ತಮ್ಮದಲ್ಲದ ಸಂಸ್ಥಾನಗಳನ್ನು ವಶಮಾಡಿಕೊಳ್ಳುವ ಹಾಗೆ ಲೋಕದಲ್ಲೆಲ್ಲಾ ಸಂಚರಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನಾನು ಬಾಬಿಲೋನಿನವರನ್ನು ಬಲಾಢ್ಯ ಜನಾಂಗವಾಗಿ ಮಾಡುವೆನು. ಅವರು ಬಲಶಾಲಿಗಳೂ ನಿರ್ದಯಿಗಳೂ ಆಗಿದ್ದಾರೆ. ಅವರು ಲೋಕದಲ್ಲೆಲ್ಲಾ ಸಂಚರಿಸುವರು. ತಮ್ಮದಲ್ಲದ ಮನೆಗಳನ್ನು ಮತ್ತು ನಗರಗಳನ್ನು ತಮ್ಮ ವಶಮಾಡಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನಾನು ಬಾಬಿಲೋನಿಯರನ್ನು ಎಬ್ಬಿಸುತ್ತೇನೆ. ಅವರು ಉಗ್ರ ಮತ್ತು ಸಾಹಸಿ ಜನರು. ತಮ್ಮದಲ್ಲದ ನಿವಾಸಗಳನ್ನು ವಶಮಾಡಿಕೊಳ್ಳುವುದಕ್ಕೆ ವಿಶಾಲವಾದ ದೇಶದಲ್ಲಿ ಹಾದುಹೋಗುವರು. ಅಧ್ಯಾಯವನ್ನು ನೋಡಿ |