Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 1:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರ ಕುದುರೆಗಳು ಚಿರತೆಗಳಿಗಿಂತ ವೇಗವಾಗಿ ಓಡಬಲ್ಲವು, ಸಂಜೆಯ ತೋಳಗಳಿಗಿಂತ ಚುರುಕಾಗಿವೆ; ಅದರ ಸವಾರರು ರಭಸದಿಂದ ಹಾರಿಬರುವರು, ಬೇಟೆಯನ್ನು ಕಬಳಿಸಲು ಹಾರಿ ಬರುವ ರಣಹದ್ದಿನಂತೆ ದೂರದಿಂದ ಹಾರಿಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ಅವರ ಕುದುರೆಗಳು ಚಿರತೆಗಳಿಗಿಂತ ಬಿರುಸು; ಹಸಿದ ತೋಳಗಳಿಗಿಂತ ಚುರುಕು. ಅವರ ರಾಹುತರು ರಭಸದಿಂದ ಹಾರಿಬರುವರು. ಬೇಟೆಯನ್ನು ಕಬಳಿಸಲು ಕಾತರದಿಂದ ಹಾರುವ ರಣಹದ್ದಿನಂತೆ ದೂರದಿಂದ ಧಾವಿಸಿಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವರ ಕುದುರೆಗಳು ಚಿರತೆಗಳಿಗಿಂತ ವೇಗವಾಗಿವೆ, ಸಂಜೆಯ ತೋಳಗಳಿಗಿಂತ ಚುರುಕಾಗಿವೆ; ಅವರ ಸವಾರರು ಕುದುರೆಗಳನ್ನು ಕುಣಿದಾಡಿಸುವರು; ದೂರದಿಂದ ಹತ್ತಿಕೊಂಡು ಬರುವರು; ಕೊಳ್ಳೆಗೆ ಆತುರಪಡುವ ಹದ್ದಿನಂತೆ ಹಾರಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವರ ಕುದುರೆಗಳು ಚಿರತೆಗಳಿಗಿಂತ ವೇಗವಾಗಿವೆ; ಸೂರ್ಯಸ್ತಮಾನ ಕಾಲದಲ್ಲಿ ತೋಳಗಳಿಗಿಂತ ಭಯಂಕರವಾಗಿವೆ. ಅವರ ರಾಹುತರು ಬಹುದೂರ ದೇಶದಿಂದ ಬಂದರು. ಹಸಿದ ಗಿಡುಗ ಹೇಗೆ ಆಕಾಶದಿಂದ ನೆಲದ ಮೇಲಿರುವ ಆಹಾರದ ಮೇಲೆ ಬೀಳುತ್ತದೋ ಅದೇ ರೀತಿಯಲ್ಲಿ ಅವರ ರಾಹುತರು ವೈರಿಗಳ ಮೇಲೆ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರ ಕುದುರೆಗಳು ಚಿರತೆಗಳಿಗಿಂತ ವೇಗವಾಗಿಯೂ, ಸಂಜೆಯ ತೋಳಗಳಿಗಿಂತ ಚುರುಕಾಗಿಯೂ ಇವೆ. ಅವರ ಅಶ್ವಸೈನ್ಯ ಎರಗುವುದು. ಅವರ ಕುದುರೆ ಸವಾರರು ದೂರದಿಂದ ಬರುವರು; ನುಂಗುವುದಕ್ಕೆ ತ್ವರೆಪಡುವ ಹದ್ದಿನಂತೆ ಹಾರಿ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 1:8
17 ತಿಳಿವುಗಳ ಹೋಲಿಕೆ  

ಇಗೋ, ಆ ಶತ್ರುವು ಮೇಘಗಳೋಪಾದಿಯಲ್ಲಿ ಬರುತ್ತಾನೆ, ಅವರ ರಥಗಳು ಬಿರುಗಾಳಿಯಂತಿವೆ, ಅವನ ಅಶ್ವಗಳು ಹದ್ದುಗಳಿಗಿಂತ ವೇಗವಾಗಿವೆ! ನಮ್ಮ ಗತಿಯನ್ನು ಏನು ಹೇಳೋಣ, ಹಾಳಾದೆವಲ್ಲಾ.


ಅವರೊಳಗಿನ ಮುಖ್ಯಾಧಿಕಾರಿಗಳು ಗರ್ಜಿಸುವ ಸಿಂಹಗಳು; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳು; ಮರುದಿನ ಬೆಳಗ್ಗೆ ಕಡಿಯುವುದಕ್ಕೆ ಎಲುಬು ಸಹಾ ಬಿಡದ ಕ್ರೂರರು.


“ತುತ್ತೂರಿಯನ್ನು ಹಿಡಿದು ಊದು. ನನ್ನ ಜನರು ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ಧರ್ಮವಿಧಿಗಳಿಗೆ ದ್ರೋಹಮಾಡಿದ್ದರಿಂದ, ಶತ್ರುವು ಹದ್ದಿನ ಹಾಗೆ ಯೆಹೋವನಾದ ನನ್ನ ನಿವಾಸದ ಮೇಲೆ ಬರುತ್ತಾನೆ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅಗಲವಾದ ಮತ್ತು ಉದ್ದವಾದ ರೆಕ್ಕೆಗಳಿಂದ ತುಂಬಿದ, ನಾನಾ ಬಣ್ಣದ ದೊಡ್ಡ ಹದ್ದು ಲೆಬನೋನಿಗೆ ಬಂದು, ದೇವದಾರು ಮರದ ಮೇಲ್ಗಡೆಯ ರೆಂಬೆಯನ್ನು ಕಿತ್ತು ಹಾಕಿತು.


ಆದಕಾರಣ ಅಡವಿಯ ಸಿಂಹವು ಅವರನ್ನು ಕೊಲ್ಲುವುದು, ಕಾಡಿನ ತೋಳವು ಕೊಳ್ಳೆ ಹೊಡೆಯುವುದು, ಚಿರತೆಯು ಅವರ ಪಟ್ಟಣಗಳಿಗೆ ಹೊಂಚುಹಾಕಿ ಅಲ್ಲಿಂದ ಹೊರಡುವ ಪ್ರತಿಯೊಬ್ಬನನ್ನೂ ಸೀಳುವುದು. ಅವರ ಅಪರಾಧಗಳು ಬಹಳ, ಅವರ ದ್ರೋಹಗಳು ಅಪಾರ.


ರಣಹದ್ದು ಹೇಗೆ ದೂರದಿಂದ ಹಾರಿಬರುವುದೋ ಹಾಗೆಯೇ ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗವು ನಿಮ್ಮ ಮೇಲೆ ಬರುವಂತೆ ಯೆಹೋವನು ಮಾಡುವನು.


ಈ ಮಾತಿಗೆ ಶಿಷ್ಯರು, “ಕರ್ತನೇ, ಅದು ಎಲ್ಲಿ ಆಗುವುದು?” ಎಂದು ಕೇಳಲು ಆತನು ಅವರಿಗೆ, “ಹೆಣ ಎಲ್ಲಿಯೋ ಅಲ್ಲಿಯೇ ರಣಹದ್ದುಗಳು ಬಂದು ಸೇರುವವು” ಎಂದು ಉತ್ತರಕೊಟ್ಟನು.


ಹೆಣ ಬಿದ್ದಲ್ಲಿ ಹದ್ದುಗಳು ಬಂದು ಸೇರಿಕೊಳ್ಳುವವು.


“ದ್ರೋಹಿ ವಂಶದವರಾದ ಈ ಜನರಿಗೆ ಹೀಗೆ ಹೇಳು, ಇದರ ಅಭಿಪ್ರಾಯವು ನಿಮಗೆ ಗೊತ್ತಿಲ್ಲವೋ? ಇಗೋ, ಬಾಬೆಲಿನ ಅರಸನು ಯೆರೂಸಲೇಮಿಗೆ ಬಂದು ಅಲ್ಲಿನ ಅರಸನನ್ನೂ ಮತ್ತು ಪ್ರಧಾನರನ್ನೂ ಹಿಡಿದು ಬಾಬಿಲೋನಿಗೆ ತೆಗೆದುಕೊಂಡು ಹೋದನು.


ನಮ್ಮನ್ನು ಹಿಂದಟ್ಟಿದವರು ಆಕಾಶದ ಹದ್ದುಗಳಿಗಿಂತ ವೇಗಿಗಳಾಗಿದ್ದರು. ಬೆಟ್ಟಗಳ ಮೇಲೆ ನಮ್ಮನ್ನು ಬೆನ್ನು ಹತ್ತಿ ಅರಣ್ಯದಲ್ಲಿ ಹೊಂಚುಹಾಕಿದರು.


ಬೆಂಡಿನ ದೋಣಿಗಳು ದಾಟಿ ಹೋಗುವಂತೆಯೂ, ಹದ್ದು ತನ್ನ ಬೇಟೆಯ ಮೇಲೆ ಎರಗುವಂತೆಯೂ ವೇಗವಾಗಿ ಗತಿಸಿ ಹೋಗುತ್ತವೆ.


ಆದರೆ ಅವರು ಪಶ್ಚಿಮದಲ್ಲಿ ಫಿಲಿಷ್ಟಿಯರ ಭುಜದ ಮೇಲೆ ಎರಗುವರು. ಅವರು ಜೊತೆಯಾಗಿ ಪೂರ್ವದವರನ್ನು ಸೂರೆಮಾಡುವರು. ಎದೋಮಿನ ಮತ್ತು ಮೋವಾಬಿನ ಮೇಲೆ ಕೈಮಾಡುವರು. ಅಮ್ಮೋನಿಯರು ಅವರಿಗೆ ಅಧೀನರಾಗುವರು.


ಯೆಹೋವನು ಇಂತೆನ್ನುತ್ತಾನೆ, “ಇಗೋ, ಮೋವಾಬಿನ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ರೆಕ್ಕೆಗಳನ್ನು ಹರಡಿ ಹಾರುವನು.


ಬಿಲ್ಲನ್ನೂ ಮತ್ತು ಈಟಿಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕ್ರೂರರು, ನಿಷ್ಕರುಣಿಗಳು; ಅವರ ಧ್ವನಿಯು ಸಮುದ್ರದಂತೆ ಮೊರೆಯುತ್ತದೆ, ಕುದುರೆ ಹತ್ತಿದ್ದಾರೆ; ಬಾಬೆಲ್ ನಗರಿಯೇ, ಆ ಸೈನ್ಯವು ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ” ಎಂದು ಯೆಹೋವನು ಅನ್ನುತ್ತಾನೆ.


ಅವನು ತನ್ನ ಕುದುರೆಗಳ ಗೊರಸುಗಳಿಂದ ನಿನ್ನ ಬೀದಿಗಳನ್ನು ತುಳಿಸಿ, ಖಡ್ಗದಿಂದ ನಿನ್ನ ಜನರನ್ನು ಸಂಹರಿಸಿ, ನಿನ್ನ ಬಲವಾದ ಕಲ್ಲು ಕಂಬಗಳನ್ನು ಕೆಡವಿ ಹಾಕುವನು.


ಪಟ್ಟಣದ ಅರಸನು ತನ್ನ ಸರದಾರರನ್ನು ಕರೆಕಳುಹಿಸಿದ್ದಾನೆ; ಅವರು ಓಡಿ ಹೋಗುತ್ತಾ ಮುಗ್ಗರಿಸುತ್ತಾರೆ; ಪೌಳಿಗೋಡೆ ಕಡೆಗೆ ತ್ವರೆಯಾಗಿ ಓಡುತ್ತಾರೆ; ಮರೆಯು ನಿಲ್ಲಿಸಲ್ಪಟ್ಟಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು