Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 1:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹಿಂಸೆ, ಬಾಧೆಯನ್ನು ಗುರಿಯಾಗಿಟ್ಟುಕೊಂಡೆ ಮುನ್ನುಗ್ಗಿ ಬರುವರು. ಜನರನ್ನು ಮರಳಿನಂತೆ ಲೆಕ್ಕವಿಲ್ಲದಷ್ಟು ಸೆರೆಹಿಡಿದು ಗುಂಪು ಕೂಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಹಿಂಸೆ ಬಾಧೆಯನ್ನು ಗುರಿಯಾಗಿ ಇಟ್ಟುಕೊಂಡೇ ಮುನ್ನುಗ್ಗಿಬರುವರು. ಮರಳಿನ ಕಣಗಳಂತೆ ಲೆಕ್ಕವಿಲ್ಲದಷ್ಟು ಜನರನ್ನು ಸೆರೆ ಹಿಡಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಎಲ್ಲರೂ ಬಾಧಿಸಲು ಮುಖವನ್ನು ಮುಂದಕ್ಕೆ ಚಾಚಿಕೊಂಡು ನುಗ್ಗುವರು; ಜನರನ್ನು ಉಸುಬಿನಂತೆ ಲೆಕ್ಕವಿಲ್ಲದಷ್ಟು ಸೆರೆಹಿಡಿದು ಗುಂಪುಕೂಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅವರು ಬಯಸುವುದು ಯುದ್ಧವೊಂದನ್ನೇ. ಅವರ ಸೈನ್ಯವು ಮರುಭೂಮಿಯ ಮೇಲೆ ಬೀಸುವ ಗಾಳಿಯ ತರಹ ವೇಗವಾಗಿ ಸಂಚರಿಸುವದು. ಮತ್ತು ಬಾಬಿಲೋನಿನ ಸೈನಿಕರು ಮರಳಿನಷ್ಟು ಅಸಂಖ್ಯಾತ ಜನರನ್ನು ಸೆರೆಹಿಡಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವರೆಲ್ಲರು ಹಿಂಸಿಸುವುದಕ್ಕೆ ಬರುವರು; ಅವರ ಸಮೂಹ, ಮರುಭೂಮಿಯ ಗಾಳಿಯಂತೆಯೇ ಮುಂದೆ ಬರುವುದು; ಸೆರೆಯವರನ್ನು ಮರಳಿನ ಹಾಗೆ ಕೂಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 1:9
22 ತಿಳಿವುಗಳ ಹೋಲಿಕೆ  

ಇದಲ್ಲದೆ ಯೆಶಾಯನು ಇಸ್ರಾಯೇಲ್ ಜನರ ವಿಷಯದಲ್ಲಿ ಹೀಗೆಂದು ಘೋಷಿಸಿದ್ದಾನೆ: “ಇಸ್ರಾಯೇಲರ ಸಂಖ್ಯೆಯು ಸಮುದ್ರದ ಉಸುಬಿನಂತಿದ್ದರೂ ಅವರಲ್ಲಿ ಕೆಲವರು ಮಾತ್ರ ರಕ್ಷಿಸಲ್ಪಡುವರು” “ಕರ್ತನು ಭೂಮಿಯಲ್ಲಿ ತನ್ನ ವಚನವನ್ನು ಕ್ಷಣದಲ್ಲಿ ನೆರವೆರಿಸಿಮುಗಿಸುವನು” ಎಂದು ಕೂಗಿ ಹೇಳುತ್ತಾನೆ.


ಇಗೋ, ನಾನು ಶಕ್ತಿಶಾಲಿಗಳೂ, ತೀಕ್ಷ್ಣಬುದ್ಧಿಯುಳ್ಳವರೂ ಆಗಿರುವ ಕಸ್ದೀಯ ಜನಾಂಗದವರನ್ನು ನಿಮ್ಮ ವಿರುದ್ಧ ಹುರಿದುಂಬಿಸಿ ಎಬ್ಬಿಸುತ್ತೇನೆ; ಆ ಜನರು ಭಯಂಕರರೂ, ಉಗ್ರರೂ ಆಗಿ ತಮ್ಮದಲ್ಲದ ಸಂಸ್ಥಾನವನ್ನು ವಶಮಾಡಿಕೊಳ್ಳುವರು ಮತ್ತು ಲೋಕದಲ್ಲೆಲ್ಲಾ ಸಂಚರಿಸುವರು.


ಎಫ್ರಾಯೀಮು ತನ್ನ ಸಹೋದರರಲ್ಲಿ ಫಲಸಮೃದ್ಧವಾಗಿದ್ದರೂ, ಕಾಡಿನಿಂದ ಯೆಹೋವನು ಬೀಸಮಾಡುವ ಮೂಡಣ ಗಾಳಿಯು ಬರಲು ಅದರ ಬುಗ್ಗೆಯು ಬತ್ತುವುದು, ಅದರ ಒರತೆಯು ಒಣಗುವುದು. ಶತ್ರುವು ಅವರ ಪ್ರಿಯವಸ್ತುಗಳ ನಿಧಿಯನ್ನು ಸೂರೆಮಾಡುವನು.


ಇಸ್ರಾಯೇಲರ ಸಂಖ್ಯೆಯು ಅಳೆಯುವುದಕ್ಕೂ, ಲೆಕ್ಕಿಸುವುದಕ್ಕೂ ಅಸಾಧ್ಯವಾದ ಸಮುದ್ರತೀರದ ಮರಳಿನಂತಾಗುವುದು. ಆಗ ಅವರು ನನ್ನ ಪ್ರಜೆಯಲ್ಲ ಎನಿಸಿಕೊಳ್ಳುವುದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು.


ಆದರೆ ಆ ಲತೆಯು ರೋಷದಲ್ಲಿ ಕೀಳಲ್ಪಟ್ಟು, ನೆಲದ ಮೇಲೆ ಬಿಸಾಡಲ್ಪಟ್ಟಿತು, ಮೂಡಣ ಗಾಳಿಯು ಅದರ ಫಲವನ್ನು ಬಾಡಿಸಿತು, ಅದರ ಗಟ್ಟಿ ಕೊಂಬೆಗಳು ಮುರಿದು ಒಣಗಿ ಹೋದವು, ಬೆಂಕಿಯು ಅವುಗಳನ್ನು ನುಂಗಿತು.


ಆಹಾ, ನಾಟಿಕೊಂಡಿದ್ದ ಆ ಲತೆಯು ಸಮೃದ್ಧವಾಗಿಯೇ ಇರುವುದೋ? ಮೂಡಣ ಗಾಳಿಯು ಬಡಿಯುವಾಗ ಬಾಡೇ ಬಾಡುವುದಲ್ಲವೇ? ಬೆಳೆದ ಪಾತಿಯಲ್ಲಿಯೇ ಒಣಗಿಹೋಗುವುದು.”


ಯೆಹೋವನು, “ಇಗೋ, ನಾನು ಅಪ್ಪಣೆಕೊಟ್ಟು ಆ ಶತ್ರುಗಳು ಈ ಪಟ್ಟಣಕ್ಕೆ ಹಿಂದಿರುಗುವಂತೆ ಮಾಡುವೆನು; ಅವರು ಅದಕ್ಕೆ ವಿರುದ್ಧವಾಗಿ ಯುದ್ಧಮಾಡಿ ಅದನ್ನು ಆಕ್ರಮಿಸಿ ಬೆಂಕಿಯಿಂದ ಸುಟ್ಟುಬಿಡುವರು; ನಾನು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು” ಎಂದು ನುಡಿಯುತ್ತಾನೆ.


ನಾನು ಉತ್ತರ ದಿಕ್ಕಿನ ಜನಾಂಗಗಳನ್ನೆಲ್ಲಾ ಕರೆಯಿಸಿ, ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡುವೆನು. ಇವರೆಲ್ಲರನ್ನು ಈ ದೇಶದ ಮೇಲೂ, ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ, ಅವುಗಳನ್ನು ತುಂಬಾ ಹಾಳುಗೈದು, ಪರಿಹಾಸ್ಯಕ್ಕೂ, ನಿತ್ಯನಾಶನಕ್ಕೂ ಈಡುಮಾಡುವೆನು.


ಅವರ ವಿಧವೆಯರು ನನ್ನ ಭಾಗಕ್ಕೆ ಸಮುದ್ರದ ಉಸುಬಿಗಿಂತ ಹೆಚ್ಚಾಗಿರುವರು. ಯುವಕರ ಮತ್ತು ತಾಯಂದಿರ ಮೇಲೆ ಕೊಳ್ಳೆ ಹೊಡೆಯುವವನನ್ನು ಮಧ್ಯಾಹ್ನದಲ್ಲೇ ಬರಮಾಡುವೆನು. ಅವರ ಮೇಲೆ ಕಳವಳವನ್ನು ಮತ್ತು ದಿಗಿಲನ್ನು ತಟ್ಟನೆ ಬೀಳಿಸುವೆನು.


ಈ ಕಾಲದಲ್ಲಿ ಈ ಜನರಿಗೂ ಯೆರೂಸಲೇಮಿಗೂ ಈ ಮಾತಾಗುವುದು, “ಬಿಸಿಗಾಳಿಯು ಅರಣ್ಯದ ಬೋಳುಗುಡ್ಡಗಳಿಂದ ನನ್ನ ಪ್ರಜೆಯೆಂಬ ಯುವತಿಯ ಮೇಲೆ ಬೀಸುತ್ತದೆ; ಅದು ತೂರುವುದಕ್ಕೂ, ಶೋಧಿಸುವುದಕ್ಕೂ ಆಗದು.


ಜನಾಂಗದ ನಾಶಕ್ಕೆ ಒಂದು ಸಿಂಹವು ತನ್ನ ಪೊದೆಯೊಳಗಿಂದ ಎದ್ದು, ಹೊರಟಿದೆ, ಅದರ ಸ್ಥಳದಿಂದ ತೆರಳಿದೆ. ಅದು ನಿನ್ನ ದೇಶವನ್ನು ಹಾಳುಮಾಡುವುದು, ನಿನ್ನ ಪಟ್ಟಣಗಳು ಪಾಳುಬಿದ್ದು ನಿರ್ಜನ ಪ್ರದೇಶಗಳಾಗುವುವು.


ನಿನ್ನ ಪ್ರಜೆಯನ್ನು ಕಳುಹಿಸಿಬಿಡುವದರ ಮೂಲಕ ಅದರೊಡನೆ ಮಿತಿಮೀರದೆ ಹೋರಾಡುತ್ತಿದ್ದೀ; ಮೂಡಣದಿಂದ ಗಾಳಿಯು ಬೀಸುವ ದಿನದಲ್ಲಿ ಅದರ ಕ್ರೂರ ಹೊಡೆತದಿಂದ ನಿನ್ನ ಜನರನ್ನು ಹೊರಗೆ ಕಳುಹಿಸಿದೆ.


ಅವುಗಳನ್ನು ಲೆಕ್ಕಿಸುವುದಾದರೆ ಸಮುದ್ರದ ಮರಳಿಗಿಂತ ಹೆಚ್ಚಾಗಿವೆ, ನಾನು ಎಚ್ಚರವಾಗಲು ಮೊದಲಿನಂತೆಯೇ ನಿನ್ನ ಬಳಿಯಲ್ಲಿರುತ್ತೇನೆ.


ಆಗ ನಾನು ಹೇಳಿದ್ದೇನೆಂದರೆ, ‘ನನ್ನ ಗೂಡಿನಲ್ಲಿಯೇ ನಾನು ಸಾಯುವೆನು, ನನ್ನ ದಿನಗಳು ಮರಳಿನಂತೆ ಅಸಂಖ್ಯವಾಗಿರುವವು.


ಮಿದ್ಯಾನ್ಯರೂ, ಅಮಾಲೇಕ್ಯರೂ, ಮೂಡಣ ದೇಶದವರೂ ಮಿಡತೆಗಳಂತೆ ಗುಂಪಾಗಿ ತಗ್ಗಿನಲ್ಲಿ ಇಳಿದುಕೊಂಡಿದ್ದರು. ಅವರ ಒಂಟೆಗಳು ಸಮುದ್ರತೀರದ ಮರಳಿನಂತೆ ಅಸಂಖ್ಯವಾಗಿದ್ದವು.


ಯೋಸೇಫನು ದವಸಧಾನ್ಯವನ್ನು ಸಮುದ್ರ ತೀರದ ಮರಳಿನಂತೆ ರಾಶಿರಾಶಿಯಾಗಿ ಶೇಖರಿಸಿ ಲೆಕ್ಕ ಮಾಡುವುದನ್ನು ಬಿಟ್ಟುಬಿಟ್ಟನು. ಅದನ್ನು ಲೆಕ್ಕ ಮಾಡುವುದಕ್ಕೆ ಆಗದೇ ಹೋಯಿತು.


ಇದೇ ಕಾಲದಲ್ಲಿ ಅರಾಮ್ಯರ ಅರಸನಾದ ಹಜಾಯೇಲನು ಬಂದು ಗತ್ ಊರಿಗೆ ಮುತ್ತಿಗೆ ಹಾಕಿ, ಅದನ್ನು ಸ್ವಾಧೀನಪಡಿಸಿಕೊಂಡನು. ಅಲ್ಲಿಂದ ಅವನು ಯೆರೂಸಲೇಮಿಗೆ ವಿರೋಧವಾಗಿ ಹೊರಟನು.


ದಕ್ಷಿಣ ದಿಕ್ಕಿನ ರಾಜನ ಮೇಲೆ ಬೀಳಬೇಕೆಂದು ನಿರ್ಧರಿಸಿ ತನ್ನ ರಾಜ್ಯದ ಸಮಸ್ತ ಬಲ ಸಮೇತನಾಗಿ ಹೊರಟು, ಅವನ ಸಂಗಡ ಒಪ್ಪಂದ ಮಾಡಿಕೊಳ್ಳುವನು. ಅವನ ರಾಜ್ಯದ ಹಾನಿಗಾಗಿ ಅವನಿಗೆ ಹೆಣ್ಣು ಮಗಳನ್ನು ಕೊಡುವನು. ಆದರೆ ಆ ಉಪಾಯವೂ ನಿಲ್ಲದು, ತನಗೆ ಅನುಕೂಲವಾಗುವುದಿಲ್ಲ.


ಹೀಗಿರಲು, ತಮ್ಮ ಬಲೆಗೆ ಸಿಕ್ಕಿದ್ದನ್ನು ಅವರು ನಿತ್ಯವೂ ಸುರಿಯುತ್ತಿರಲೋ, ಜನಾಂಗಗಳನ್ನು ಕರುಣಿಸದೆ ಸದಾ ಸಂಹರಿಸುತ್ತಿರಬೇಕೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು