ಹಬಕ್ಕೂಕ 2:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನೀನು ಬಹು ಜನರನ್ನು ನಿರ್ಮೂಲ ಮಾಡಿದ್ದು ನಿನ್ನ ಕುಂಟುಂಬಕ್ಕೆ ಅವಮಾನವನ್ನೇ ತಂದಂತಾಯಿತು, ನಿನಗೇ ನೀನೇ ಕೆಡುಕು ಮಾಡಿಕೊಂಡಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಿನ್ನ ಯೋಜನೆಗಳಿಂದ ನಿನ್ನ ಮನೆತನಕ್ಕೆ ಅಪಕೀರ್ತಿ ತಂದುಕೊಂಡಿರುವೆ. ಹಲವಾರು ನಾಡುಗಳನ್ನು ನಿರ್ಮೂಲಮಾಡಿ ನಿನ್ನ ವಂಶಕ್ಕೆ ವಿನಾಶವನ್ನು ಬರಮಾಡಿಕೊಂಡಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನೀನು ಬಹುಜನಾಂಗಗಳನ್ನು ನಿರ್ಮೂಲಮಾಡಿದ್ದು ನಿನ್ನ ಕುಲಕ್ಕೆ ಅವಮಾನವನ್ನೇ ಆಲೋಚಿಸಿಕೊಂಡ ಹಾಗಾಯಿತು, ನಿನಗೇ ಕೆಡುಕುಮಾಡಿಕೊಂಡಿದ್ದೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಎಷ್ಟೋ ಜನರನ್ನು ನಾಶಮಾಡಲು ನೀನು ಯೋಜನೆ ಮಾಡಿರುವೆ. ಆದರೆ ಆ ಯೋಜನೆಗಳು ನಿನ್ನ ಮನೆಗೆ ನಾಚಿಕೆಯನ್ನು ತಂದೊಡ್ಡುವವು. ನೀನು ಕೆಟ್ಟಕಾರ್ಯಗಳನ್ನು ಮಾಡಿದ್ದರಿಂದ ನೀನು ನಿನ್ನ ಪ್ರಾಣವನ್ನು ಕಳೆದುಕೊಳ್ಳುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನೀನು ಬಹು ಜನಾಂಗಗಳನ್ನು ನಿರ್ಮೂಲ ಮಾಡಿದ್ದು, ನಿನ್ನ ಕುಲಕ್ಕೆ ಅವಮಾನವನ್ನೇ ಆಲೋಚಿಸಿಕೊಂಡ ಹಾಗಾಯಿತು. ನಿನಗೆ ನೀನೇ ಕೆಡುಕು ಮಾಡಿಕೊಂಡಿದ್ದೀ. ಅಧ್ಯಾಯವನ್ನು ನೋಡಿ |
ಯೆಹೂದದ ಅರಸನಾದ ಹಿಜ್ಕೀಯನೂ ಎಲ್ಲಾ ಯೆಹೂದ್ಯರೂ ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಆ ಅರಸನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ದಯೆಯನ್ನು ಬೇಡಿಕೊಳ್ಳಲು ಯೆಹೋವನು ಅವರ ವಿಷಯವಾಗಿ ನುಡಿದಿದ್ದ ಕೇಡನ್ನು ಮನಮರುಗಿ ಮಾಡದೆ ಬಿಟ್ಟನಲ್ಲಾ. ನಾವಾದರೋ ಇವನನ್ನು ಕೊಂದು ಹಾಕಿ ನಮಗೆ ದೊಡ್ಡ ಕೇಡನ್ನು ಉಂಟು ಮಾಡಿಕೊಳ್ಳುವವರಾಗಿದ್ದೇವೆ” ಎಂಬುದಾಗಿ ಸಕಲಜನ ಸಮೂಹಕ್ಕೆ ಹೇಳಿದರು.