Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 2:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ‘ಅಯ್ಯೋ, ಪಟ್ಟಣವನ್ನು ನರಹತ್ಯದಿಂದ ಕಟ್ಟುವವನೂ, ಊರನ್ನು ಅನ್ಯಾಯದಿಂದ ಸ್ಥಾಪಿಸುವವರ ಗತಿಯನ್ನು ಏನು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನರಹತ್ಯೆಯಿಂದ ನಗರಗಳನ್ನು ನಿರ್ಮಿಸುವವನಿಗೆ ಧಿಕ್ಕಾರ! ಅನ್ಯಾಯವಾದ ಅಸ್ತಿವಾರದ ಮೇಲೆ ಊರನ್ನು ಕಟ್ಟುವವನಿಗೆ ಧಿಕ್ಕಾರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅಯ್ಯೋ, ಪಟ್ಟಣವನ್ನು ನರಹತ್ಯದಿಂದ ಕಟ್ಟಿ ಊರನ್ನು ಅನ್ಯಾಯದಿಂದ ಸ್ಥಾಪಿಸುವವನ ಗತಿಯನ್ನು ಏನು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಪಟ್ಟಣ ಕಟ್ಟುವುದಕ್ಕಾಗಿ ಜನರನ್ನು ಕೊಲ್ಲುವವನಿಗೂ ಪಟ್ಟಣದ ಕೋಟೆಗಳನ್ನು ಭದ್ರಪಡಿಸಲು ದುಷ್ಕೃತ್ಯಗಳನ್ನು ಮಾಡುವವನಿಗೂ ಕೇಡಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಊರನ್ನು ನರಹತ್ಯದಿಂದ ಕಟ್ಟಿ, ಪಟ್ಟಣವನ್ನು ಅನ್ಯಾಯದಿಂದ ಸ್ಥಾಪಿಸುವವನಿಗೆ ಕಷ್ಟ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 2:12
12 ತಿಳಿವುಗಳ ಹೋಲಿಕೆ  

ಚೀಯೋನನ್ನು ನರಹತ್ಯದಿಂದಲೂ, ಯೆರೂಸಲೇಮನ್ನು ಅನ್ಯಾಯದಿಂದಲೂ ಕಟ್ಟುವವರೇ, ಇದನ್ನು ಕಿವಿಗೊಟ್ಟು ಕೇಳಿರಿ, ಕೇಳಿರಿ.


ಅಯ್ಯೋ, ರಕ್ತಮಯ ಪಟ್ಟಣವೆ ನಿನ್ನ ಗತಿಯನ್ನು ಏನೆಂದು ಹೇಳಲಿ! ಅದು ಸುಳ್ಳಿನಿಂದಲೂ, ಸುಲಿಗೆಯಿಂದಲೂ ತುಂಬಿದೆ; ಕೊಳ್ಳೆಹೊಡೆಯುವುದನ್ನು ಬಿಡುವುದೇ ಇಲ್ಲ.


ಆ ಸ್ತ್ರೀಯು ನೀತಿವಂತರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿನೀಡಿ ಹತರಾದವರ ರಕ್ತವನ್ನು ಕುಡಿದು ಮತ್ತಳಾಗಿರುವುದನ್ನು ಕಂಡೆನು. ನಾನು ಅವಳನ್ನು ನೋಡಿ ಅತ್ಯಾಶ್ಚರ್ಯಪಟ್ಟೆನು.


ಅದೇ ಸಮಯದಲ್ಲಿ ಯೆಹೋಶುವನು ಇಸ್ರಾಯೇಲ್ಯರಿಂದ ಪ್ರಮಾಣಮಾಡಿಸಿ ಅವರಿಗೆ “ಈ ಯೆರಿಕೋ ಪಟ್ಟಣವನ್ನು ಕಟ್ಟುವುದಕ್ಕೆ ಕೈ ಹಾಕುವ ಮನುಷ್ಯನು ಯೆಹೋವನ ದೃಷ್ಟಿಯಲ್ಲಿ ಶಾಪಗ್ರಸ್ತನಾಗಿರಲಿ. ಅಂಥವನು ಅದಕ್ಕೆ ಅಸ್ತಿವಾರ ಹಾಕುವಾಗ ತನ್ನ ಹಿರಿಯ ಮಗನನ್ನೂ ಬಾಗಿಲುಗಳನ್ನಿಡುವಾಗ ಕಿರಿಯ ಮಗನನ್ನೂ ಕಳೆದುಕೊಳ್ಳಲಿ” ಎಂದು ಹೇಳಿದನು.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ರಕ್ತಾಪರಾಧವುಳ್ಳ ಆ ಪಟ್ಟಣಕ್ಕೆ ಕಷ್ಟ! ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು.


ಅವನ ಕಾಲದಲ್ಲಿ ಬೇತೇಲಿನವನಾದ ಹೀಯೇಲನು ಯೆರಿಕೋ ಪಟ್ಟಣವನ್ನು ಕಟ್ಟಿಸಿದನು. ಅವನು ಅದಕ್ಕೆ ಅಸ್ತಿವಾರ ಹಾಕಿದಾಗ ಹಿರಿಯ ಮಗನಾದ ಅಬೀರಾಮನನ್ನೂ ಬಾಗಿಲುಗಳನ್ನಿರಿಸಿದಾಗ ಕಿರಿಯ ಮಗನಾದ ಸೆಗೂಬನನ್ನೂ ಕಳೆದುಕೊಂಡನು. ಹೀಗೆ ಯೆಹೋವನು ನೂನನ ಮಗನಾದ ಯೆಹೋಶುವನಿಂದ ಹೇಳಿಸಿದ ಮಾತು ನೆರವೇರಿತು.


ನಮ್ಮನ್ನು ಅಭಿಷೇಕಿಸಿ ಕ್ರಿಸ್ತನ ಅನ್ಯೋನ್ಯತೆಯಲ್ಲಿ ಸೇರಿಸಿ ನಮ್ಮನ್ನು ನಿಮ್ಮೊಂದಿಗೆ ಸ್ಥಿರಪಡಿಸುವವನು ದೇವರೇ.


“ಆದರೆ ಹೀಗೆ ಅವನ ದುರಾಶೆಯ ಪಾಶಕ್ಕೆ ಗುರಿಯಾದವರು ಅವನ ಬಗ್ಗೆ ತಿಳಿದು ಗೇಲಿ, ಅಪಹಾಸ್ಯದ ಲಾವಣಿ ಗೀತೆಗಳನ್ನು ರಚಿಸಿ ಹಾಡುವರು. ‘ಅನ್ಯರ ವಸ್ತುಗಳನ್ನು ಅಡವಿಟ್ಟುಕೊಂಡು ಐಶ್ವರ್ಯ ಸಂಪಾದಿಸುವವನ ಗತಿಯನ್ನು ಏನೆಂದು ಹೇಳುವುದು, ಅವನು ಎಷ್ಟು ಕಾಲ ಹೀಗೆ ಮಾಡುವನು!’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು