Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 2:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ವಿಗ್ರಹ ಕೆತ್ತುವವನ ವಿಗ್ರಹವಾಗಲಿ ಅಥವಾ ಎರಕದಿಂದ ಮಾಡಿದ ಗೊಂಬೆಗಳಿಂದಾಗಲಿ ಲಾಭವೇನು? ಹಾಗೆ ದೇವರುಗಳನ್ನು ರೂಪಿಸುವವರು ಸುಳ್ಳನ್ನು ಬಿತ್ತುವವರು; ಏಕೆಂದರೆ, ಆ ನಿರ್ಜೀವ ವಿಗ್ರಹವನ್ನು ನಿರ್ಮಿಸಿದವನು ತನ್ನ ಕೈಕೆಲಸದ ಮೇಲೆಯೇ ಭರವಸೆ ಇಟ್ಟಿದ್ದಾನೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಕೆತ್ತನೆಯ ವಿಗ್ರಹದಿಂದ ಪ್ರಯೋಜನ ಏನು? ಅದು ಕೇವಲ ಮಾನವನ ಕೃತಿ, ಸುಳ್ಳು ಕಣಿಗಾಗಿ ಇಟ್ಟುಕೊಂಡ ಎರಕದ ಗೊಂಬೆ. ಅದನ್ನು ನಿರ್ಮಿಸಿದಾತನಿಗೆ ಅದು ಯಾವ ಅಭಯವನ್ನು ತಾನೇ ತಂದೀತು? ಅದು ಬಾಯ್ದೆರೆಯಲಾಗದ ಮೂಕ ಬೊಂಬೆಯಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಕೆತ್ತಿದ ವಿಗ್ರಹವು ಏತಕ್ಕೆ? ರೂಪಿಸಿದವನು ಅದನ್ನೇಕೆ ಕೆತ್ತಬೇಕಾಗಿತ್ತು? ಸುಳ್ಳುಕಣಿಗಾಗಿ ಇಟ್ಟುಕೊಂಡ ಎರಕದ ಬೊಂಬೆಯಿಂದ ಪ್ರಯೋಜನವೇನು? ನಿರ್ಮಿಸಿದವನು ತನ್ನ ಕೈಕೆಲಸದ ಮೂಗಬೊಂಬೆಯಲ್ಲಿ ನಂಬಿಕೆಯಿಡುವದಕ್ಕೆ ಏನಾಧಾರ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆ ಮನುಷ್ಯನ ಸುಳ್ಳು ದೇವರು ಅವನಿಗೆ ಸಹಾಯ ಮಾಡಲಾರದು. ಯಾಕೆಂದರೆ ಅದು ಒಬ್ಬನು ಲೋಹದಿಂದ ಮಾಡಿದ ಕೇವಲ ವಿಗ್ರಹವಷ್ಟೆ. ಅದು ಕೇವಲ ಜಡಮೂರ್ತಿ. ಅದನ್ನು ಮಾಡಿದವನು, ಅದು ಅವನಿಗೆ ಸಹಾಯ ಮಾಡುವದೆಂದು ಯೋಚಿಸುವದು ಶುದ್ಧ ಮೂರ್ಖತನ. ಆ ಮೂರ್ತಿಯು ಮಾತಾಡುವೂದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಮನುಷ್ಯನು ಕೆತ್ತಿ ರೂಪಿಸಿದ ವಿಗ್ರಹದಿಂದ ಪ್ರಯೋಜನವೇನು? ಸುಳ್ಳನ್ನು ಬೋಧಿಸುವಂಥ ಪ್ರತಿಮೆಯ ಬೆಲೆಯೇನು? ಅದನ್ನು ರೂಪಿಸಿದವನು, ತನ್ನ ಸ್ವಂತ ಸೃಷ್ಟಿಯನ್ನು ನಂಬುತ್ತಾನೆ. ಮಾತನಾಡದಂಥ ಮೂರ್ತಿಗಳನ್ನು ಅವನು ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 2:18
36 ತಿಳಿವುಗಳ ಹೋಲಿಕೆ  

ಅವರೆಲ್ಲರೂ ಪಶುಪ್ರಾಯರು, ಮಂದಮತಿಗಳು, ಬೊಂಬೆಗಳಿಂದಾಗುವ ಶಿಕ್ಷಣವು ಮರದಂತೆ ಮೊದ್ದು.


ನೀವು ಅನ್ಯಜನರಾಗಿದ್ದಾಗ ಮೂಕ ವಿಗ್ರಹಗಳು ನಿಮ್ಮನ್ನು ನಡೆಸಿದ ಹಾಗೆ ನೀವು ಅವುಗಳ ಬಳಿಗೆ ಹೋಗುತ್ತಿದ್ದಿರೆಂದು ಬಲ್ಲಿರಿ.


ವಿಗ್ರಹಗಳು ನುಡಿಯುವುದು ಸುಳ್ಳು; ಕಣಿಹೇಳುವವರು ದರ್ಶನವನ್ನು ಕಾಣುವುದು ಸುಳ್ಳು, ತಿಳಿಸುವ ಕನಸುಗಳು ಮೋಸವಾದವುಗಳು, ಹೇಳುವ ಸಮಾಧಾನವು ವ್ಯರ್ಥ. ಆದುದರಿಂದ ನನ್ನ ಜನರು ದಿಕ್ಕಾಪಾಲಾಗಿದ್ದಾರೆ; ಕುರುಬನು ಇಲ್ಲದ ಕಾರಣ ಬಾಧೆಗೆ ಒಳಗಾಗಿದ್ದಾರೆ.


ಕೆತ್ತಿದ ವಿಗ್ರಹಗಳಲ್ಲಿ ಭರವಸವಿಟ್ಟು, “ನೀವೇ ನಮ್ಮ ದೇವರುಗಳು” ಎಂದು ಎರಕದ ಬೊಂಬೆಗಳಿಗೆ ಅರಿಕೆಮಾಡುವವರು ಹಿಂದೆ ಬಿದ್ದು ಕೇವಲ ಅವಮಾನಕ್ಕೆ ಈಡಾಗುವರು.


ವಿಗ್ರಹಗಳನ್ನು ಕೆತ್ತುವವರೆಲ್ಲರೂ ನಾಚಿಕೆಗೀಡಾಗಿ ಮಾನಭಂಗಪಡುವರು. ಹೌದು, ಒಟ್ಟಿಗೆ ಅವಮಾನದಲ್ಲಿ ಮುಳುಗುವರು.


“ನಿರ್ಜೀವ ವಿಗ್ರಹಗಳನ್ನು ಅವಲಂಬಿಸಿದವರು ತಮ್ಮ ದೇವರ ಕರುಣಾನಿಧಿಯನ್ನು ತೊರೆದುಬಿಡುವರು.


ಆಗ ಆ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಪರವಾಗಿ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರೊಂದಿಗೆ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಗೆ ಹಾಕಲಾಯಿತು.


ಆದರೆ ನೀವು ಮೊದಲು ಮಾಡಿದ್ದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯಾಗುತ್ತಿದೆ. ಕೊನೆಗೆ ಅವುಗಳಿಂದ ಬರುವುದು ಮರಣವಲ್ಲವೇ?


“ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮರೆಮಾಡದೆ ಹೀಗೆ ಸಾರಿರಿ, ‘ಬಾಬೆಲ್ ಶತ್ರುವಶವಾಯಿತು, ಬೇಲ್ ದೇವತೆಯು ನಾಚಿಕೆಗೊಂಡಿದೆ, ಮೆರೋದಾಕ್ ದೇವತೆಯು ಬೆಚ್ಚಿಬಿದ್ದಿದೆ, ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ, ಅದರ ಬೊಂಬೆಗಳು ಚೂರುಚೂರಾಗಿವೆ.


ತಪ್ಪಿಸಿಕೊಂಡ ಅನ್ಯಜನರೇ, ಕೂಡಿಬನ್ನಿರಿ, ಒಟ್ಟಿಗೆ ಸಮೀಪಿಸಿರಿ! ತಮ್ಮ ಮರದ ವಿಗ್ರಹಗಳನ್ನು ಹೊತ್ತುಕೊಂಡು ರಕ್ಷಿಸಲಾರದ ಆ ದೇವರಿಗೆ ಬಿನ್ನವಿಸುವವರು ಏನೂ ತಿಳಿಯದವರಾಗಿದ್ದಾರೆ.


ಅವನು ಒಂದು ದಿನ ಗುಡಿಗೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಮನೆಯಲ್ಲಿ ಪೂಜಿಸುತ್ತಿರುವಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವನನ್ನು ಕತ್ತಿಯಿಂದ ಕೊಂದು, ಅರರಾಟ್ ದೇಶಕ್ಕೆ ಓಡಿಹೋದರು. ಅವನಿಗೆ ಬದಲಾಗಿ ಅವನ ಮಗನಾದ ಏಸರ್ ಹದ್ದೋನನು ಅರಸನಾದನು.


ನಿಮ್ಮಲ್ಲಿನ ಬಲಿಷ್ಠನೇ ಸೆಣಬಿನ ನಾರು, ಅವನ ಕಾರ್ಯವೇ ಕಿಡಿ, ಎರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವವು.”


ದೇವರಿಗೆ ಇಷ್ಟವಿಲ್ಲದ ವಿಷಯಗಳನ್ನು ಹಿಂಬಾಲಿಸಬೇಡಿರಿ; ಅವುಗಳಿಂದ ನಿಮಗೆ ಲಾಭವೂ, ರಕ್ಷಣೆಯೂ ಸಿಕ್ಕುವುದಿಲ್ಲ. ಅವು ವ್ಯರ್ಥವಾದವುಗಳೇ.


ವಿಗ್ರಹಗಳಲ್ಲಿ ಹಿಗ್ಗುವವರೂ, ಮೂರ್ತಿಪೂಜಕರೆಲ್ಲರೂ ನಾಚಿಕೆಗೆ ಒಳಪಡುವರು; ದೇವರುಗಳೆಂದು ಕರೆಯಲ್ಪಡುವವರೇ, ನೀವೆಲ್ಲರೂ ಆತನಿಗೆ ಅಡ್ಡಬೀಳಿರಿ.


ವಿಗ್ರಹವಾದರೋ, ಶಿಲ್ಪಿಯು ಅದನ್ನು ಎರಕಹೊಯ್ಯುವನು, ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ, ಬೆಳ್ಳಿಯ ಸರಪಣಿಗಳನ್ನು ಹಾಕುವನು.


ಕಾರ್ಯವು ನಡೆಯುವುದಕ್ಕೆ ಮೊದಲು ಇವರಲ್ಲಿ ಯಾರು ಅದನ್ನು ತಿಳಿಸಿದ್ದಾರೆ? ಸಮಯಕ್ಕೆ ಮೊದಲೇ “ಅವನು ಸತ್ಯವಂತನು” ಎಂದು ಯಾರು ಮುಂತಿಳಿಸಿದ್ದಾರೆ? ಯಾರೂ ಏನನ್ನೂ ತಿಳಿಸಬಲ್ಲವರಲ್ಲ, ಏನನ್ನೂ ಹೇಳತಕ್ಕವರಲ್ಲ, ನಿಮ್ಮ ಮಾತುಗಳು ಯಾರ ಕಿವಿಗೂ ಬೀಳುವುದಿಲ್ಲ.


ಕಮ್ಮಾರನು ತನ್ನ ಸಲಕರಣೆಗಳನ್ನು ತೆಗೆದುಕೊಂಡು ಕೆಂಡದಲ್ಲಿ ಕೆಲಸಮಾಡುತ್ತಾ, ಚಮಟಿಕೆಗಳಿಂದ ಬಡಿದು ತೋಳಿನ ಬಲದಿಂದ ವಿಗ್ರಹವನ್ನು ರೂಪಿಸುವನು. ಅವನು ಹಸಿದು ಬಳಲುವನು, ನೀರಿಲ್ಲದೆ ದಣಿಯುವನು.


ಯಾಜಕರು, ‘ಯೆಹೋವನು ಎಲ್ಲಿ?’ ಎಂಬುದನ್ನು ವಿಚಾರಿಸಲಿಲ್ಲ. ಧರ್ಮೋಪದೇಶಕರು ನನ್ನನ್ನು ತಿಳಿಯಲ್ಲಿಲ್ಲ, ಪಾಲಕರು ನನಗೆ ದ್ರೋಹಮಾಡಿದರು, ಪ್ರವಾದಿಗಳು ಬಾಳ್ ದೇವತೆಯ ಆವೇಶದಿಂದ ಪ್ರವಾದಿಸಿ ಕೆಲಸಕ್ಕೆ ಬಾರದವುಗಳನ್ನು ಆರಾಧಿಸಿದರು.


ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ, “ನಮ್ಮ ಪೂರ್ವಿಕರು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ” ಎಂದು ಅರಿಕೆ ಮಾಡುವರು.


ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು; ಅವನು ಎರಕಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.


ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಮುಂದೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ, ಪತ್ನಿ ಹಾಗೂ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ, ಕಣ್ಣು, ಕಿವಿ ಇಲ್ಲದ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ಮರ, ಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ, ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ.


ಯೆಹೋವನು ಇಂತೆನ್ನುತ್ತಾನೆ, “ಯೆಹೂದವು ಮೂರು ದ್ರೋಹಗಳನ್ನು, ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಯೆಹೂದ್ಯರು ಯೆಹೋವನ ಧರ್ಮೋಪದೇಶವನ್ನು ನಿರಾಕರಿಸಿದರು. ಆತನ ವಿಧಿಗಳನ್ನು ಕೈಕೊಳ್ಳಲಿಲ್ಲ. ಅವರ ಪೂರ್ವಿಕರು ಹಿಂಬಾಲಿಸಿದ ಸುಳ್ಳುದೇವತೆಗಳು, ಇವರನ್ನು ದಾರಿ ತಪ್ಪುವಂತೆ ಮಾಡಿದವು.


ಮಗನು ಹಿಂದಕ್ಕೆ ಕೊಟ್ಟ ರೂಪಾಯಿಗಳಲ್ಲಿ ಇನ್ನೂರು ರೂಪಾಯಿಗಳನ್ನು ತೆಗೆದು ಅಕ್ಕಸಾಲಿಗನಿಗೆ ಕೊಟ್ಟಳು. ಅವನು ಅವುಗಳಿಂದ ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನು ಮಾಡಿಕೊಟ್ಟನು. ಮೀಕನು ಅದನ್ನು ತನ್ನ ಮನೆಯಲ್ಲಿಟ್ಟುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು