Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 2:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ‘ಮರದ ವಿಗ್ರಹಗಳಿಗೆ ಎಚ್ಚೆತ್ತುಕೋ,’ ಜಡವಾದ ಕಲ್ಲಿನ ವಿಗ್ರಹಗಳಿಗೆ, ‘ಎದ್ದೇಳು’ ಎಂದು ಅಪ್ಪಣೆಕೊಡುವವನು ಬುದ್ಧಿಹೀನನು. ಇಂಥ ಬೊಂಬೆಯು ಬೋಧಿಸೀತೇ? ಇಗೋ, ಆ ವಿಗ್ರಹಗಳಿಗೆ ಬೆಳ್ಳಿಬಂಗಾರವನ್ನು ಹೊದಿಸಿದ್ದಾರೆ ಆದರೂ ಅದರೊಳಗೆ ಜೀವವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಮರದ ತುಂಡಿಗೆ, ‘ಎಚ್ಚೆತ್ತುಕೊ’; ಜಡಕಲ್ಲಿಗೆ, ‘ಎದ್ದೇಳು’ ಎಂದು ಆಜ್ಞಾಪಿಸುವವನು ನಿಜಕ್ಕೂ ಬುದ್ಧಿಹೀನನು. ಬೊಂಬೆಯು ಬೋಧಿಸಬಲ್ಲದೇ? ಬೆಳ್ಳಿಬಂಗಾರವನ್ನು ಅದಕ್ಕೆ ಹೊದಿಸಿರುವುದೇನೋ ನಿಜ. ಆದರೆ ಅದಕ್ಕೆ ಉಸಿರೋ ಇಲ್ಲವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಮರಕ್ಕೆ ಎಚ್ಚತ್ತುಕೋ, ಜಡವಾದ ಕಲ್ಲಿಗೆ ಎದ್ದೇಳು ಎಂದು ಅಪ್ಪಣೆಕೊಡುವವನ ಗತಿಯನ್ನು ಅಯ್ಯೋ, ಏನು ಹೇಳಲಿ! ಇಂಥ ಬೊಂಬೆಯು ಬೋಧಿಸೀತೇ? ಇಗೋ, ಅದಕ್ಕೆ ಬೆಳ್ಳಿಬಂಗಾರವು ಹೊದಗಿಸಿದೆ, ಅದರೊಳಗೆ ಶ್ವಾಸವೇನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆ ಮೂರ್ತಿಗೆ “ಎದ್ದೇಳು” ಎಂದು ಹೇಳುವವನಿಗೆ ಕೇಡಾಗುವುದು! ಮಾತಾಡಲಾಗದ ಒಂದು ಕಲ್ಲಿಗೆ “ಎಚ್ಚರವಾಗು” ಎಂದು ಹೇಳುವವನಿಗೆ ಕೇಡಾಗುವುದು! ಅವುಗಳು ಅವನಿಗೆ ಸಹಾಯ ಮಾಡುವದಿಲ್ಲ. ಮಾಡಲಿಕ್ಕಾಗುವದೂ ಇಲ್ಲ. ಆ ವಿಗ್ರಹಗಳನ್ನು ಬೆಳ್ಳಿಬಂಗಾರದಿಂದ ಹೊದಿಸಿದರೂ ಆ ವಿಗ್ರಹಗಳಲ್ಲಿ ಜೀವವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಮರಕ್ಕೆ, ‘ಎಚ್ಚರವಾಗು!’ ಮೂಕವಾದ ಕಲ್ಲಿಗೆ, ‘ಎದ್ದೇಳು!’ ಎಂದು ಹೇಳುವವನಿಗೆ ಕಷ್ಟ! ಅದು ಮಾರ್ಗದರ್ಶನ ನೀಡುವುದೇ? ಅದು ಬಂಗಾರ, ಬೆಳ್ಳಿಯಿಂದ ಹೊದಿಸಿದ್ದಾರೆ. ಆದರೆ ಅದರಲ್ಲಿ ಉಸಿರು ಎಷ್ಟು ಮಾತ್ರವೂ ಇಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 2:19
27 ತಿಳಿವುಗಳ ಹೋಲಿಕೆ  

ಕಿವಿಯಿದ್ದರೂ ಕೇಳುವುದಿಲ್ಲ, ಇದಲ್ಲದೆ ಅವುಗಳ ಬಾಯಲ್ಲಿ ಶ್ವಾಸವೇ ಇಲ್ಲ.


ಅದನ್ನು ಬೆಳ್ಳಿ, ಬಂಗಾರಗಳಿಂದ ಭೂಷಿಸುತ್ತಾರೆ, ಅಲುಗದಂತೆ ಮೊಳೆಗಳಿಂದ, ಸುತ್ತಿಗೆಯಿಂದ ಭದ್ರಪಡಿಸುತ್ತಾರೆ.


ಬೆಳ್ಳಿಯ ತಗಡುಗಳು ತಾರ್ಷೀಷಿನಿಂದಲೂ, ಕೆತ್ತನೆಗಾರನ ಮತ್ತು ಎರಕದವನ ಕೈಕೆಲಸವಾದ ಚಿನ್ನವೂ ಊಫಜಿನಿಂದಲೂ ಸಾಗಿಬರುತ್ತವೆ. ನೀಲಧೂಮ್ರ ವಸ್ತ್ರಗಳು ಅವುಗಳ ಉಡುಪಾಗಿವೆ, ಇವೆಲ್ಲಾ ಕುಶಲಕರ್ಮಿಗಳ ಕೌಶಲ್ಯ.


ಆ ಸ್ತ್ರೀಯು ಧೂಮ್ರವರ್ಣದ ವಸ್ತ್ರಗಳನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ, ರತ್ನ, ಮುತ್ತುಗಳಿಂದ ಅಲಂಕರಿಸಿಕೊಂಡಿದ್ದಳು. ಆಕೆಯು ತನ್ನ ಕೈಯಲ್ಲಿ ಅಸಹ್ಯವಾದವುಗಳಿಂದಲೂ ಮತ್ತು ತನ್ನ ಅಶುದ್ಧ ಜಾರತ್ವಗಳಿಂದಲೂ ತುಂಬಿದ ಚಿನ್ನದ ಬಟ್ಟಲನ್ನು ಹಿಡಿದುಕೊಂಡಿದ್ದಳು.


“ನಾವು ದೇವರ ಸಂತಾನದವರಾದ ಮೇಲೆ ದೇವರು ಮನುಷ್ಯನ ಶಿಲ್ಪವಿದ್ಯೆಯಿಂದಲೂ, ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ, ಬೆಳ್ಳಿ ಮತ್ತು ಕಲ್ಲುಗಳಿಗೆ ಸಮಾನವೆಂದು ನಾವು ಭಾವಿಸಬಾರದು.


ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಮುಂದೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ, ಪತ್ನಿ ಹಾಗೂ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ, ಕಣ್ಣು, ಕಿವಿ ಇಲ್ಲದ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ಮರ, ಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ, ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ.


ಸಕಲ ಜನಾಂಗ, ಕುಲ, ಭಾಷೆಗಳವರಲ್ಲಿ ಯಾರಾದರೂ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರ ವಿಷಯದಲ್ಲಿ ಅಲ್ಲ ಸಲ್ಲದ ಮಾತುಗಳನ್ನಾಡಿದರೆ ಅವರನ್ನು ತುಂಡುತುಂಡಾಗಿ ಕತ್ತರಿಸಿ, ಅವರ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಬೇಕೆಂಬ ಆಜ್ಞೆಯನ್ನು ವಿಧಿಸುತ್ತೇನೆ; ಹೀಗೆ ಉದ್ಧರಿಸಲು ಸಮರ್ಥನಾದ ಇನ್ಯಾವ ದೇವರೂ ಇಲ್ಲವಲ್ಲಾ” ಎಂದು ಹೇಳಿದನು.


ಚಿತ್ತವಿಲ್ಲದಿದ್ದರೂ ರಾಜನೇ, ಇದು ನಿನಗೆ ತಿಳಿದಿರಲಿ, ನಾವು ನಿನ್ನ ದೇವರುಗಳನ್ನು ಆರಾಧಿಸುವುದಿಲ್ಲ, ನೀನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸುವುದಿಲ್ಲ’” ಎಂದು ಉತ್ತರಕೊಟ್ಟರು.


ಆದಕಾರಣ ಅದೇ ಕಾಲದಲ್ಲಿ ಸಮಸ್ತ ಜನಾಂಗ, ಕುಲ, ಭಾಷೆಗಳವರು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಎಲ್ಲರೂ ಅಡ್ಡಬಿದ್ದು ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸಿದರು.


ರಾಜನಾದ ನೆಬೂಕದ್ನೆಚ್ಚರನು ಅರುವತ್ತು ಮೊಳ ಎತ್ತರದ, ಆರು ಮೊಳ ಅಗಲದ ಒಂದು ಬಂಗಾರದ ಪ್ರತಿಮೆಯನ್ನು ಮಾಡಿಸಿ, ಬಾಬೆಲ್ ಸಂಸ್ಥಾನದ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.


ಇದರಿಂದ ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ ಎಂದು ತಿಳಿದುಕೊಳ್ಳಿರಿ. ಆ ದೇಶವೆಲ್ಲಾ ನಾಚಿಕೆಪಡುವುದು; ಅದರ ಪ್ರಜೆಗಳು ಅದರೊಳಗೆ ಹತರಾಗಿ ಬೀಳುವರು.


ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು. ಅವನು ಎರಕ ಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.


ಚೀಲದಿಂದ ಚಿನ್ನವನ್ನು ಸುರಿದು, ತಕ್ಕಡಿಯಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೊಟ್ಟು ಕೂಲಿಯನ್ನು ಗೊತ್ತುಮಾಡಿದಾಗ, ಅವನು ಅದನ್ನು ದೇವರನ್ನಾಗಿ ಮಾಡಲು, ಅವರು ಅದಕ್ಕೆ ಎರಗಿ ಪೂಜೆಮಾಡುವರು.


ಅದರಲ್ಲಿ ಉಳಿದ ಭಾಗವನ್ನು ತನ್ನ ದೇವರನ್ನಾಗಿಯೂ, ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ, “ನೀನೇ ನನ್ನ ದೇವರು, ನನ್ನನ್ನು ರಕ್ಷಿಸು” ಎಂದು ಪ್ರಾರ್ಥಿಸುವನು.


ವಿಗ್ರಹವಾದರೋ, ಶಿಲ್ಪಿಯು ಅದನ್ನು ಎರಕಹೊಯ್ಯುವನು, ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ, ಬೆಳ್ಳಿಯ ಸರಪಣಿಗಳನ್ನು ಹಾಕುವನು.


ವಿಗ್ರಹಗಳಲ್ಲಿ ಹಿಗ್ಗುವವರೂ, ಮೂರ್ತಿಪೂಜಕರೆಲ್ಲರೂ ನಾಚಿಕೆಗೆ ಒಳಪಡುವರು; ದೇವರುಗಳೆಂದು ಕರೆಯಲ್ಪಡುವವರೇ, ನೀವೆಲ್ಲರೂ ಆತನಿಗೆ ಅಡ್ಡಬೀಳಿರಿ.


ಆಗ ನಾವಿಕರು ಹೆದರಿ ತಮ್ಮತಮ್ಮ ದೇವರುಗಳಿಗೆ ಮೊರೆಯಿಟ್ಟರು. ಹಡಗನ್ನು ಹಗುರ ಮಾಡಲು ಹಡಗಿನಲ್ಲಿರುವ ಸರಕುಗಳನ್ನು ಸಮುದ್ರಕ್ಕೆ ಬಿಸಾಡಿಬಿಟ್ಟರು. ಆದರೆ ಯೋನನು ಹಡಗಿನ ಕೆಳಭಾಗಕ್ಕೆ ಹೋಗಿ ಮಲಗಿ ಗಾಢನಿದ್ರೆ ಮಾಡುತ್ತಿದ್ದನು.


ಅನ್ಯಜನಗಳ ವಿಗ್ರಹಗಳು ಬೆಳ್ಳಿ ಮತ್ತು ಬಂಗಾರದವುಗಳೇ; ಅವು ಮನುಷ್ಯರ ಕೈಕೆಲಸವಷ್ಟೇ.


ನೀನು ಆ ಒಡೆಯರ ಮೇಲೆ ಕೈಮಾಡಿ, ಅವರನ್ನು ನಿರ್ಮೂಲಮಾಡಿ ಅವರ ಜ್ಞಾಪಕವನ್ನು ಅಳಿಸಿಬಿಟ್ಟಿದ್ದಿ. ಸತ್ತವರು ಪುನಃ ಬದುಕುವುದಿಲ್ಲ, ಪ್ರೇತಗಳು ಎದ್ದು ಬರುವುದಿಲ್ಲ.


ಕಾರ್ಯವು ನಡೆಯುವುದಕ್ಕೆ ಮೊದಲು ಇವರಲ್ಲಿ ಯಾರು ಅದನ್ನು ತಿಳಿಸಿದ್ದಾರೆ? ಸಮಯಕ್ಕೆ ಮೊದಲೇ “ಅವನು ಸತ್ಯವಂತನು” ಎಂದು ಯಾರು ಮುಂತಿಳಿಸಿದ್ದಾರೆ? ಯಾರೂ ಏನನ್ನೂ ತಿಳಿಸಬಲ್ಲವರಲ್ಲ, ಏನನ್ನೂ ಹೇಳತಕ್ಕವರಲ್ಲ, ನಿಮ್ಮ ಮಾತುಗಳು ಯಾರ ಕಿವಿಗೂ ಬೀಳುವುದಿಲ್ಲ.


ಕೆಟ್ಟ ಸಂತಾನವೇ, ಹೊಳೆಯ ನುಣುಪಾದ ಕಲ್ಲುಗಳೇ ನಿನಗೆ ಗತಿ, ಅವುಗಳೇ ನಿನ್ನ ಪಾಲು; ಅವುಗಳಿಗೆ ನೀನು ಪಾನದ್ರವ್ಯವನ್ನು ನೈವೇದ್ಯವಾಗಿ ಸುರಿದು, ಧಾನ್ಯದ್ರವ್ಯವನ್ನು ಅರ್ಪಿಸಿದ್ದಿ. ನಾನು ಇದನ್ನೆಲ್ಲಾ ನೋಡಿ ಕೋಪವನ್ನು ಅಡಗಿಸಿಕೊಳ್ಳಲು ಆಗುವುದೇ?


ಅವರು ನನ್ನ ಕಡೆಗೆ ಮುಖತಿರುಗಿಸದೆ ಬೆನ್ನು ಮಾಡಿದ್ದಾರೆ, ಆದರೆ ಅವರಿಗೆ ಕೇಡು ಸಂಭವಿಸಿದಾಗ, “ಎದ್ದು ನಮ್ಮನ್ನು ಉದ್ಧರಿಸು” ಎಂದು ಮೊರೆಯಿಡುವರು.


ಯೆಹೂದವೇ, ನೀನು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿನಗೆ ಕೇಡು ಸಂಭವಿಸಿದಾಗ ಅವು ನಿನ್ನನ್ನು ಉದ್ಧರಿಸಲು ಶಕ್ತವಾದರೆ ಏಳಲಿ! ನಿನ್ನ ಪಟ್ಟಣಗಳೆಷ್ಟೋ, ನಿನ್ನ ದೇವರುಗಳೂ ಅಷ್ಟು ಇವೆ.


ಜನಾಂಗಗಳ ಕಟ್ಟಳೆಗಳು ಬರಿದೇ; ಅರಣ್ಯದ ಮರವನ್ನು ಕತ್ತರಿಸುವರು, ಬಡಗಿಯು ಅದನ್ನು ಕೈಯಿಂದ, ಉಳಿಯಿಂದ ರೂಪಿಸುವನು.


ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು; ಅವನು ಎರಕಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.


ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಮರಕಲ್ಲುಗಳ ದೇವರುಗಳನ್ನು ಸ್ತುತಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು