ಹಬಕ್ಕೂಕ 2:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಸೂಕ್ತ ಹಾಗು ನಿಯಮಿತ ಕಾಲದಲ್ಲಿ ಆ ದರ್ಶನದಲ್ಲಿ ಕಂಡದ್ದು ನೆರವೇರುವುದು, ಅದರ ಅಂತಿಮ ಪರಿಣಾಮ ಶೀಘ್ರದಲ್ಲೇ ಗೊತ್ತಾಗುವುದು. ತಡವಾದರೂ ಅದಕ್ಕೆ ಕಾದಿರು; ಅದು ಖಂಡಿತವಾಗಿ ಕೈಗೂಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನಿಯಮಿತ ಕಾಲದಲ್ಲಿ ಆ ದರ್ಶನ ನೆರವೇರುವುದು. ಅದರ ಅಂತಿಮ ಪರಿಣಾಮ ಶೀಘ್ರದಲ್ಲಿ ಗೊತ್ತಾಗುವುದು. ತಡವಾದರೂ ಕಾದಿರು; ಮೋಸಮಾಡದು. ಅದು ಖಂಡಿತವಾಗಿ ಕೈಗೂಡುವುದು; ತಾಮಸವಾಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅದು ಕ್ಲುಪ್ತಕಾಲದಲ್ಲಿ ನೆರವೇರತಕ್ಕದ್ದು, ಆದರೆ ಪರಿಣಾಮಕ್ಕೆ ತ್ವರೆಪಡುತ್ತದೆ, ಮೋಸಮಾಡದು; ತಡವಾದರೂ ಅದಕ್ಕೆ ಕಾದಿರು; ಅದು ಬಂದೇ ಬರುವದು, ತಾಮಸವಾಗದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಭವಿಷ್ಯದ ಒಂದು ವಿಶೇಷ ಸಮಯದ ಕುರಿತಾಗಿ ಈ ಸಂದೇಶ. ಈ ಸಂದೇಶವು ಅಂತ್ಯದ ವಿಷಯವಾಗಿ ಇದೆ. ಇದು ಖಂಡಿತವಾಗಿಯೂ ನೆರವೇರುತ್ತದೆ. ಆ ಸಮಯವು ಎಂದಿಗೂ ಬರುವುದಿಲ್ಲ ಎಂಬಂತೆ ಕಾಣಬಹುದು. ಆದರೆ ತಾಳ್ಮೆಯಿಂದಿರು; ಅದನ್ನು ನಿರೀಕ್ಷಿಸುತ್ತಾ ಇರು. ಆ ಸಮಯವು ಬರುವದು. ಅದು ತಡವಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಏಕೆಂದರೆ ಪ್ರಕಟನೆಯು ಇನ್ನೂ ನೇಮಕವಾದ ಕಾಲಕ್ಕಾಗಿ ಎದುರು ನೋಡುವುದು. ಅದು ಅಂತ್ಯದ ಬಗ್ಗೆ ಮಾತಾಡುವುದು. ಅದು ಸುಳ್ಳಾಗದು. ಅದು ತಡವಾದರೂ, ಅದಕ್ಕೆ ಕಾದುಕೊಂಡಿರು. ಏಕೆಂದರೆ ಅದು ತಡಮಾಡದೆ ನಿಶ್ಚಯವಾಗಿ ಬರುವುದು. ಅಧ್ಯಾಯವನ್ನು ನೋಡಿ |
ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.