Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 2:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇಗೋ, ದುಷ್ಟನ ಅಂತರಾತ್ಮವು ತನ್ನ ಕ್ರಿಯೆಗಳಿಂದ ಉಬ್ಬಿಹೋಗಿದೆ, ಆದರೆ, ನೀತಿವಂತನು ತನ್ನ ನಂಬಿಕೆಯಿಂದಲೇ ಬದುಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನೋಡು, ನೇರಮನಸ್ಕನಲ್ಲದವನು, ಉಬ್ಬಿಹೋಗಿರುವ ಆ ದುರ್ಜನನು ಉಳಿಯನು; ದೇವರೊಂದಿಗೆ ಸತ್ಸಂಬಂಧ ಹೊಂದಿರುವ ಸಜ್ಜನನು ವಿಶ್ವಾಸದಿಂದಲೇ ಬಾಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇಗೋ, ಆ ದುಷ್ಟನ ಅಂತರಾತ್ಮವು ಉಬ್ಬಿಕೊಂಡಿದೆ, ಯಥಾರ್ಥವಲ್ಲ; ನೀತಿವಂತನೋ ತನ್ನ ನಂಬಿಕೆಯಿಂದಲೇ ಬದುಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯಾವ ಜನರು ಅದರ ವಿಚಾರವಾಗಿ ಕೇಳಲು ನಿರಾಕರಿಸುವರೋ ಅವರಿಗಾಗಿ ಈ ಸಂದೇಶವಿರುವದಿಲ್ಲ. ಆದರೆ ಒಬ್ಬ ಸತ್ಪುರುಷನು ಈ ಸಂದೇಶವನ್ನು ನಂಬುವನು. ಆ ಸತ್ಪುರುಷನು ತಾನು ನಂಬಿದ ನಿಮಿತ್ತವಾಗಿ ಬದುಕುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇಗೋ, ಹೆಚ್ಚಿಸಿಕೊಂಡವನ ಆತ್ಮವು ತನ್ನಲ್ಲಿ ಯಥಾರ್ಥವಲ್ಲ. ಆದರೆ ನೀತಿವಂತನು ತನ್ನ ನಂಬಿಕೆಯಿಂದಲೇ ಬದುಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 2:4
17 ತಿಳಿವುಗಳ ಹೋಲಿಕೆ  

ಹೇಗೆಂದರೆ ದೇವರಿಂದ ದೊರಕುವ ನೀತಿಯು ಸುವಾರ್ತೆಯಲ್ಲಿ ತೋರಿಬರುತ್ತದೆ. “ನೀತಿವಂತನು ನಂಬಿಕೆಯಿಂದಲೇ ಬದುಕುವನೆಂಬ” ಶಾಸ್ತ್ರೋಕ್ತಿಯ ಪ್ರಕಾರ ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ವೃದ್ಧಿಪಡಿಸುವಂಥದಾಗಿದೆ.


ಆದರೆ ನನ್ನವನಾಗಿರುವ ನೀತಿವಂತನು ನಂಬಿಕೆಯಿಂದಲೇ ಬದುಕುವನು, ಅವನು ಅದರಿಂದ ಹಿಂಜರಿದರೆ ಅವನಲ್ಲಿ ನನಗೆ ಮೆಚ್ಚಿಕೆಯಿರುವುದಿಲ್ಲ.”


ಯಾವನಾದರೂ ಯೇಸು ಕ್ರಿಸ್ತನ ಮೇಲೆ ನಂಬಿಕೆ ಇಡುವುದರಿಂದಲೇ ಹೊರತು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸುವುದರಿಂದ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲವೆಂಬುದು ನಮಗೆ ತಿಳಿದಿರುವುದರಿಂದ ನಾವು ಸಹ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟೆವು. ಏಕೆಂದರೆ ಯಾರೂ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ.


ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು. ಮಗನಿಗೆ ಅವಿಧೇಯನಾಗುವವನು ಜೀವವನ್ನು ಕಾಣುವುದೇ ಇಲ್ಲ. ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು.”


ಇವನು ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ತನ್ನ ಮನೆಗೆ ಹೋದನು. ಆ ಫರಿಸಾಯನು ಅಂಥವನಾಗಿ ಹೋಗಲಿಲ್ಲ ಎಂದು ನಿಮಗೆ ಹೇಳುತ್ತೇನೆ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು.


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ ಕೀರ್ತಿಸುತ್ತೇನೆ. ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.


ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”


ಯಾವುದು ದೇವರೆನಿಸಿಕೊಳ್ಳುತ್ತದೋ ಯಾವುದು ಆರಾಧಿಸಲ್ಪಡುತ್ತದೋ ಅದನ್ನೆಲ್ಲಾ ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ತಾನು ದೇವರೆಂದು ಘೋಷಿಸಿಕೊಂಡು ದೇವರ ಗರ್ಭಗುಡಿಯಲ್ಲೇ ಕುಳಿತುಕೊಳ್ಳುತ್ತಾನೆ.


“ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯ ಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವುದು ಇಗೋ, ಮಹಾ ಪಟ್ಟಣವಾದ ಈ ಬಾಬೆಲ್” ಎಂದು ಕೊಚ್ಚಿಕೊಂಡನು.


ಸಿರಿ ಬಂದಾಗ ನೆರೆಯವರ ಹೊಗಳಿಕೆ ತಪ್ಪದು ಎಂಬಂತೆ, ಅವನು ಜೀವಮಾನದಲ್ಲಿ ಆತ್ಮಸ್ತುತಿಯಿಂದಲೂ, ಜನರಸ್ತುತಿಯಿಂದಲೂ ಕೂಡಿದವನಾದರೂ,


ನಾನು ಲೋಕದವರಿಗೆ ಅವರ ಪಾಪದ ಫಲವನ್ನೂ, ದುಷ್ಟರಿಗೆ ಅವರ ದುಷ್ಕೃತ್ಯಗಳ ಫಲಗಳಿಗಾಗಿ ಶಿಕ್ಷಿಸಿ, ಸೊಕ್ಕಿದವರ ಅಹಂಕಾರವನ್ನು ಅಡಗಿಸಿ, ಭಯಂಕರವಾದ ಅವರ ಹೆಮ್ಮೆಯನ್ನು ತಗ್ಗಿಸುವೆನು.


ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು, ಸತ್ಯಪರನಾಗಿಯೇ ನಡೆದರೆ ಇಂಥವನು ಸದ್ಧರ್ಮಿಯಾಗಿರುವುದರಿಂದ ಖಂಡಿತವಾಗಿ ಜೀವಿಸುವನು” ಇದು ಕರ್ತನಾದ ಯೆಹೋವನ ನುಡಿ.


ಆದುದರಿಂದ ಅವನ ಮನಸ್ಸು ಗರ್ವದಿಂದ ತುಂಬುವುದು. ಅವನು ಲಕ್ಷಾಂತರ ಸೈನಿಕರನ್ನು ಬೀಳಿಸಿದರೂ ಪ್ರಾಬಲ್ಯಕ್ಕೆ ಬರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು