Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 2:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅಲ್ಲದೆ ಮದ್ಯಪಾನವು ಮೋಸಕರವಾದ ಕಾರಣ ದುಷ್ಟನನ್ನು ಮದವೇರಿಸುವುದು, ಸ್ವಸ್ಥಳದಲ್ಲಿ ನಿಲ್ಲಲು ಬಿಡುವುದಿಲ್ಲ; ಪಾತಾಳದಷ್ಟು ಅತಿ ಆಶೆಗೆ ಪ್ರೆರೇಪಿಸಿ ಮೃತ್ಯುವಿನಂತೆ ಅತೃಪ್ತನಾಗಿ ಜೀವಿಸುವನು. ಯೆಹೋವನ ಒಡಂಬಡಿಕೆಯ ವಿರುದ್ಧ ಜೀವಿಸುವವರನ್ನು ತನ್ನ ಕಡೆಗೆ ಆಕರ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಐಶ್ವರ್ಯ ಮೋಸಕರ, ಮದವೇರಿದವನು ಮತ್ತನಾದವನಂತೆ ಅಸ್ಥಿರ. ಅವನ ಅತಿಯಾಸೆ ಪಾತಾಳದಷ್ಟು ವಿಶಾಲ. ಮೃತ್ಯುವಿನಂತೆ ಅವನಿಗೆ ತೃಪ್ತಿಯೇ ಇಲ್ಲ. ಸಕಲ ಜನಾಂಗಗಳನ್ನು ಬಲೆಯೊಳಗೆ ಎಳೆದುಕೊಳ್ಳುತ್ತಾನೆ. ಸಮಸ್ತ ಜನಾಂಗಗಳನ್ನು ರಾಶಿಮಾಡಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅಲ್ಲದೆ ದ್ರಾಕ್ಷಾರಸವು ಮೋಸಕರವಾದ ಕಾರಣ ದುಷ್ಟನು ಮದವೇರಿದ್ದಾನೆ, ಸ್ವಸ್ಥಳದಲ್ಲಿ ನಿಲ್ಲನು; ಪಾತಾಳದ ಹಾಗೆ ಅತ್ಯಾಶೆಪಡುತ್ತಾನೆ, ಮೃತ್ಯುವಿನಂತಿದ್ದಾನೆ, ತೃಪ್ತಿಯೇ ಇಲ್ಲ; ಸಕಲ ಜನಗಳನ್ನು ಎಳೆದುಕೊಳ್ಳುತ್ತಾನೆ, ಸಮಸ್ತ ಜನಾಂಗಗಳನ್ನು ರಾಶಿಮಾಡಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನು ಹೇಳಿದ್ದು: “ಒಬ್ಬನನ್ನು ದ್ರಾಕ್ಷಾರಸವು ಮೋಸಪಡಿಸಬಹುದು. ಅದೇ ರೀತಿಯಲ್ಲಿ ಬಲಿಷ್ಠನ ಗರ್ವವು ಅವನನ್ನು ಮೋಸಪಡಿಸಬಹುದು. ಆದರೆ ಅವನಿಗೆ ಸಮಾಧಾನ ಸಿಕ್ಕುವುದಿಲ್ಲ. ಅವನು ಮರಣದಂತಿರುವನು. ಅವನಿಗೆ ಯಾವಾಗಲೂ ಹೆಚ್ಚೆಚ್ಚು ಬೇಕು. ಮರಣದಂತೆ ಅವನಿಗೆ ತೃಪ್ತಿಯೇ ಇರದು. ಅವನು ಜನಾಂಗಗಳನ್ನು ಸೋಲಿಸುತ್ತಲೇ ಇರುವನು. ಆ ಜನರನ್ನು ತನ್ನ ಕೈದಿಗಳನ್ನಾಗಿ ಮಾಡುತ್ತಲೇ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇದಲ್ಲದೆ ದ್ರಾಕ್ಷಾರಸವು ಮೋಸಕರ. ಅವನು ಅಹಂಕಾರಿ, ಎಂದಿಗೂ ವಿಶ್ರಾಂತಿ ಹೊಂದನು. ಪಾತಾಳದ ಹಾಗೆ ತನ್ನ ಆಶೆಯನ್ನು ದೊಡ್ಡದಾಗಿ ಮಾಡಿಕೊಳ್ಳುತ್ತಾನೆ. ಮರಣದ ಹಾಗಿದ್ದಾನೆ, ತೃಪ್ತಿಯಾಗುವುದಿಲ್ಲ; ಎಲ್ಲಾ ಜನಾಂಗಗಳನ್ನು ತನಗಾಗಿ ಕೂಡಿಸುತ್ತಾನೆ; ಎಲ್ಲಾ ಜನರನ್ನು ತನ್ನ ಸೆರೆಯಾಳುಗಳಾಗಿ ಮಾಡಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 2:5
33 ತಿಳಿವುಗಳ ಹೋಲಿಕೆ  

ಪಾತಾಳಕ್ಕೂ, ನಾಶಲೋಕಕ್ಕೂ ಹೇಗೆ ತೃಪ್ತಿಯಿಲ್ಲವೋ, ಹಾಗೆಯೇ ಮನುಷ್ಯನ ಕಣ್ಣುಗಳಿಗೆ ತೃಪ್ತಿಯಿಲ್ಲ.


ದ್ರಾಕ್ಷಾರಸವು ಪರಿಹಾಸ್ಯ, ಮದ್ಯವು ಕೂಗಾಟ, ಇವುಗಳಿಂದ ದಾರಿತಪ್ಪಿ ಹೋಗುವವನು ಜ್ಞಾನಿಯಲ್ಲ.


ಔತಣಕ್ಕೆ ಸಿದ್ಧಪಡಿಸಿಕೊಂಡು, ಚಾಪೆಗಳನ್ನು ಹಾಸಿಕೊಂಡು ತಿಂದು, ಕುಡಿಯುತ್ತಾರೆ; ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಹಚ್ಚಿ ಸಿದ್ಧವಾಗಿ!


ಮೋವಾಬ್ಯರ ಅಹಂಕಾರವನ್ನು, ಗರ್ವವನ್ನು, ಕೊಚ್ಚಿಕೊಳ್ಳುವಿಕೆಯನ್ನು, ಕೋಪವನ್ನು ನಾವು ಕೇಳಿದ್ದೇವೆ. ಅವರು ಕೊಚ್ಚಿಕೊಳ್ಳುವುದೆಲ್ಲಾ ಬರೀ ವ್ಯರ್ಥವೇ.


ಅಯ್ಯೋ, ಮನೆಗೆ ಮನೆಯನ್ನೂ, ಹೊಲಕ್ಕೆ ಹೊಲವನ್ನೂ ಸೇರಿಸಿಕೊಳ್ಳುತ್ತಾ ಬಂದು, ಇತರರಿಗೆ ಸ್ವಲ್ಪ ಸ್ಥಳವನ್ನೂ ಬಿಡದೆ ದೇಶದ ಮಧ್ಯದಲ್ಲಿ ತಾವೇ ತಾವಾಗಿ ವಾಸಿಸುವವರ ಗತಿಯನ್ನು ಏನು ಹೇಳಲಿ!


ಮನುಷ್ಯರ ಗರ್ವವು ಕುಗ್ಗುವುದು. ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.


ಬೆಳ್ಳಿಯನ್ನು ಆಶಿಸುವವನಿಗೆ ಎಷ್ಟು ಬೆಳ್ಳಿಯಿಂದಲೂ ತೃಪ್ತಿಯಾಗುವುದಿಲ್ಲ ಮತ್ತು ಸಮೃದ್ಧಿಯನ್ನು ಬಯಸುವವನಿಗೆ ಆದಾಯವೆಷ್ಟಾದರೂ ಸಾಲುವುದಿಲ್ಲ. ಇದೂ ಸಹ ವ್ಯರ್ಥವೇ.


ಯೆಹೋವನು ಮಹೋನ್ನತನು; ಆದರೂ ದೀನರನ್ನು ಲಕ್ಷಿಸುತ್ತಾನೆ; ಗರ್ವಿಷ್ಠರನ್ನು ದೂರದಿಂದಲೇ ಗುರುತು ಹಿಡಿಯುತ್ತಾನೆ.


ನೀನು ಎದೋಮ್ಯರನ್ನು ಸೋಲಿಸಿದರಿಂದ ಬಹಳವಾಗಿ ಉಬ್ಬಿಕೊಂಡಿದ್ದೀ; ಆ ಕೀರ್ತಿಯು ಸಾಕೆಂದು ನೆನದು ಸುಮ್ಮನೆ ಮನೆಯಲ್ಲಿ ಕುಳಿತುಕೋ. ನನ್ನನ್ನು ಕೆಣಕಿ ನಿನ್ನ ಮೇಲೆಯೂ, ನಿನ್ನ ರಾಜ್ಯವಾದ ಯೆಹೂದದ ಮೇಲೆಯೂ ಯಾಕೆ ಕೇಡನ್ನು ಬರಮಾಡಿಕೊಳ್ಳುತ್ತೀ?” ಎಂದು ಉತ್ತರ ಕೊಟ್ಟುಕಳುಹಿಸಿದನು.


ಆತನು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದುದರಿಂದ, “ದೇವರು ಅಹಂಕಾರಿಗಳಿಗೆ ಎದುರಾಳಿಯಾಗಿದ್ದಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ” ಎಂದು ಧರ್ಮಶಾಸ್ತ್ರವು ಹೇಳುತ್ತದೆ.


ಇದಲ್ಲದೆ ನಾವು ನಿಮಗೆ ಆಜ್ಞೆ ಕೊಟ್ಟಿರುವ ಪ್ರಕಾರ ನೀವು ಮತ್ತೊಬ್ಬರ ವಿಷಯದಲ್ಲಿ ತಲೆಹಾಕದೆ ಸುಮ್ಮಗಿದ್ದು, ಸ್ವಂತ ಕಾರ್ಯಗಳನ್ನೇ ನೋಡಿಕೊಳ್ಳುತ್ತಾ, ಕೈಯಾರೆ ಕೆಲಸಮಾಡಿ ದುಡಿಯಿರಿ.


ಇಗೋ, ದುಷ್ಟನ ಅಂತರಾತ್ಮವು ತನ್ನ ಕ್ರಿಯೆಗಳಿಂದ ಉಬ್ಬಿಹೋಗಿದೆ, ಆದರೆ, ನೀತಿವಂತನು ತನ್ನ ನಂಬಿಕೆಯಿಂದಲೇ ಬದುಕುವನು.


ಅವರು ಹೊಟ್ಟೆಬಾಕರು, ನಾನು ಅವರಿಗೆ ಔತಣವನ್ನು ಸಿದ್ಧಪಡಿಸುವೇನು, ಅವರು ಅದರಿಂದ ಸಂಭ್ರಮಪಟ್ಟು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವಂತೆ ತಲೆಗೇರುವ ಮಟ್ಟಿಗೆ ಕುಡಿಸುವೆನು. ಇದು ಯೆಹೋವನ ನುಡಿ” ಎಂಬುದೇ.


ಬಿಲ್ಲನ್ನು ಬೊಗ್ಗಿಸಿ, ಬಾಣಬಿಡುವವರನ್ನೆಲ್ಲಾ ಬಾಬಿಲೋನಿಗೆ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ; ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ; ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ; ಅದು ಸೊಕ್ಕೇರಿ ಇಸ್ರಾಯೇಲರ ಸದಮಲಸ್ವಾಮಿಯಾದ ಯೆಹೋವನನ್ನು ಅಸಡ್ಡೆ ಮಾಡಿತಲ್ಲಾ.


ನಾನು ಉತ್ತರ ದಿಕ್ಕಿನ ಜನಾಂಗಗಳನ್ನೆಲ್ಲಾ ಕರೆಯಿಸಿ, ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡುವೆನು. ಇವರೆಲ್ಲರನ್ನು ಈ ದೇಶದ ಮೇಲೂ, ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ, ಅವುಗಳನ್ನು ತುಂಬಾ ಹಾಳುಗೈದು, ಪರಿಹಾಸ್ಯಕ್ಕೂ, ನಿತ್ಯನಾಶನಕ್ಕೂ ಈಡುಮಾಡುವೆನು.


“ಧರ್ಮನಿಂದಕ” ಎನ್ನಿಸಿಕೊಳ್ಳುವವನು ಸೊಕ್ಕೇರಿದ ಅಹಂಕಾರಿಯಾಗಿ, ಗರ್ವ ಮತ್ತು ಮದದಿಂದ ಪ್ರವರ್ತಿಸುವನು.


ಹೀಗಿರುವುದರಿಂದ ಪಾತಾಳವು ಹೆಚ್ಚು ಆತುರದಿಂದ ಅಗಾಧವಾಗಿ ಬಾಯಿ ತೆರೆಯಲು, ಅವರ ಮಹಿಮೆ, ಕೋಲಾಹಲ, ಗದ್ದಲ, ಉಲ್ಲಾಸ ಇವೆಲ್ಲವುಗಳು ಅದರೊಳಗೆ ಬಿದ್ದುಹೋಗುವವು.


ಜನಗಳನ್ನು ಕೋಪೋದ್ರೇಕದಿಂದ ಎಡೆಬಿಡದೆ ಹೊಡೆದು, ಜನಾಂಗಗಳನ್ನು ಸಿಟ್ಟಿನಿಂದ ತಡೆಯಿಲ್ಲದೆ ಹಿಂಸಿಸಿ, ಅಧೀನಮಾಡಿಕೊಂಡರು.


ನಲಿದಾಡುತ್ತಾ ಶತ್ರುಗಳು ನಮ್ಮನ್ನು ಗಾಳಗಳಿಂದ ಹಿಡಿದು ತಮ್ಮ ಬಲೆಗಳಲ್ಲಿ ರಾಶಿ ರಾಶಿಯಾಗಿ ಬಾಚಿಕೊಂಡು ಹೋಗಬೇಕೋ?


ಹೀಗಿರಲು, ತಮ್ಮ ಬಲೆಗೆ ಸಿಕ್ಕಿದ್ದನ್ನು ಅವರು ನಿತ್ಯವೂ ಸುರಿಯುತ್ತಿರಲೋ, ಜನಾಂಗಗಳನ್ನು ಕರುಣಿಸದೆ ಸದಾ ಸಂಹರಿಸುತ್ತಿರಬೇಕೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು