ಹಬಕ್ಕೂಕ 2:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 “ಆದರೆ ಹೀಗೆ ಅವನ ದುರಾಶೆಯ ಪಾಶಕ್ಕೆ ಗುರಿಯಾದವರು ಅವನ ಬಗ್ಗೆ ತಿಳಿದು ಗೇಲಿ, ಅಪಹಾಸ್ಯದ ಲಾವಣಿ ಗೀತೆಗಳನ್ನು ರಚಿಸಿ ಹಾಡುವರು. ‘ಅನ್ಯರ ವಸ್ತುಗಳನ್ನು ಅಡವಿಟ್ಟುಕೊಂಡು ಐಶ್ವರ್ಯ ಸಂಪಾದಿಸುವವನ ಗತಿಯನ್ನು ಏನೆಂದು ಹೇಳುವುದು, ಅವನು ಎಷ್ಟು ಕಾಲ ಹೀಗೆ ಮಾಡುವನು!’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆದರೆ ಹೀಗೆ ಅವನಿಂದ ಆಕರ್ಷಿತರಾದವರೆಲ್ಲ ಅವನ ಸಮಾಚಾರವೆತ್ತಿ ಗೇಲಿಯ ಲಾವಣಿಕಟ್ಟುವರು. “ತನ್ನದಲ್ಲದನ್ನು ಹೆಚ್ಚು ಹೆಚ್ಚಾಗಿ ತುಂಬಿಸಿಕೊಂಡವನಿಗೆ ಧಿಕ್ಕಾರ! ಬಡ್ಡಿಗಾಗಿ ಅಡವಿಟ್ಟ ವಸ್ತುಗಳನ್ನು ರಾಶಿಮಾಡಿಕೊಂಡವನಿಗೆ ಧಿಕ್ಕಾರ! ಎಷ್ಟುಕಾಲ ಹೀಗೆ ಮಾಡಿಯಾನು?’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಇವುಗಳೆಲ್ಲಾ ಅವನ ಪ್ರಸ್ತಾಪವೆತ್ತಿ ಅವನ ವಿಷಯವಾಗಿ ಈ ಗೇಲಿಯ ಗೀತಗಳನ್ನು ಹಾಡುವವಲ್ಲವೆ - ಅಯ್ಯೋ, ತನ್ನದಲ್ಲದ್ದನ್ನು ಹೆಚ್ಚೆಚ್ಚಾಗಿ ಕೂಡಿಸಿಕೊಂಡು ಅಡವುಗಳನ್ನು ಹೊರೆಹೊರೆಯಾಗಿ ಇಟ್ಟುಕೊಳ್ಳುವವನ ಗತಿಯನ್ನು ಏನು ಹೇಳಲಿ! ಅವನು ಎಷ್ಟು ಕಾಲ ಹೀಗೆ ಮಾಡಾನು! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆದರೆ ಬೇಗನೇ ಅವರೆಲ್ಲಾ ಇವನನ್ನು ನೋಡಿ ನಗಾಡುವರು. ಅವನ ಸೋಲುವಿಕೆಯ ಕಥೆಗಳನ್ನು ವರ್ಣಿಸುವರು; ನಗಾಡುತ್ತಾ, ‘ಎಂಥಾ ದುಃಖಕರ ಸಂಗತಿ, ಅಷ್ಟೆಲ್ಲಾ ಸಂಪಾದಿಸಿದವನು ಅದನ್ನು ಇಟ್ಟುಕೊಳ್ಳಲಾಗಲಿಲ್ಲವಲ್ಲ. ಅವನು ಸಾಲಗಳನ್ನು ವಸೂಲಿ ಮಾಡಿ ತನ್ನನ್ನು ಐಶ್ವರ್ಯವಂತನನ್ನಾಗಿ ಮಾಡಿಕೊಂಡನು.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅವರೆಲ್ಲರೂ ಅವನನ್ನು ಅಪಹಾಸ್ಯದ ಮಾತುಗಳಿಂದ ಅವಮಾನ ಮಾಡುವುದಿಲ್ಲವೋ? ಕದ್ದುಕೊಂಡ ವಸ್ತುಗಳನ್ನು ರಾಶಿಯಾಗಿ ಕೂಡಿಸಿಟ್ಟುಕೊಳ್ಳುವವನಿಗೆ ಅಕ್ರಮ ಮಾರ್ಗದಿಂದ ಐಶ್ವರ್ಯವಂತನಾಗಿರುವವನಿಗೆ ಕಷ್ಟ. ಇದೆಷ್ಟರವರೆಗೆ ಮುಂದುವರಿಯಬೇಕು? ಅಧ್ಯಾಯವನ್ನು ನೋಡಿ |